ತುಮಕೂರು | ನೀರಿನ ವಿಚಾರಕ್ಕೆ ಗ್ರಾ.ಪಂ. ಬಿಲ್ ಕಲೆಕ್ಟರ್ ಜೊತೆ ಜಗಳ: ಕೊಲೆಯಲ್ಲಿ ಅಂತ್ಯ

Date:

ಕುಡಿಯುವ ನೀರಿನ ವಿಚಾರಕ್ಕೆ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಜೊತೆ ಜಗಳ ಮಾಡಿದ್ದ ವ್ಯಕ್ತಿಯನ್ನು ಬಿಲ್ ಕಲೆಕ್ಟರ್‌ನ ಮಗ ಕೊಲೆಗೈದಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಪೋಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಪೋಲೇನಹಳ್ಳಿ ಗ್ರಾಮದ ನಿವಾಸಿ ಆನಂದ(55) ಎಂದು ಗುರುತಿಸಲಾಗಿದೆ. ಗ್ರಾ.ಪಂ ಬಿಲ್ ಕಲೆಕ್ಟರ್ ರಾಮಕೃಷ್ಣ ಎಂಬುವವರ ಮಗ ನಾಗೇಶ್ ಎಂಬಾತ ಈ ಕೃತ್ಯ‌ ಎಸಗಿದವ ಎಂದು ತಿಳಿದುಬಂದಿದೆ.

ಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ರಾಮಕೃಷ್ಣ ಎಂಬುವವರ ಮಗ ಆರೋಪಿ ನಾಗೇಶ್, ತನ್ನ ಪಿಕಪ್ ವಾಹನದಲ್ಲಿ ಡಿಕ್ಕಿ ಹೊಡೆದು ಆನಂದ್‌ನನ್ನು ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 09 11 at 1.42.12 PM
ಆರೋಪಿ ನಾಗೇಶ್

ಕೊಲೆಗೀಡಾದ ಆನಂದ್ ಹಾಗೂ ಗ್ರಾ.ಪಂ ಬಿಲ್ ಕಲೆಕ್ಟರ್ ರಾಮಕೃಷ್ಣ ನಡುವೆ ಬುಧವಾರ ಬೆಳಗ್ಗೆ ‘ಮನೆ ಮುಂದಿನ ನಲ್ಲಿಯಲ್ಲಿ ನೀರು ಬರುತ್ತಿಲ್ಲ. ಆದರು ಬಿಲ್ ಕಲೆಕ್ಟ್ ಮಾಡಲು ಬರುತ್ತಿದ್ದಾರೆ’ ಎಂಬ ವಿಚಾರವಾಗಿ ಜಗಳ ನಡೆದಿತ್ತು. ಆ ಬಳಿಕ‌ ಮಧ್ಯಾಹ್ನ 1.30ರ ಸುಮಾರಿಗೆ ಆನಂದ್ ಅವರು, ರಾಮಕೃಷ್ಣ ಅವರ ಪತ್ನಿ ನಾಗಮಣಿಯೊಂದಿಗೆ, ʼನಿನ್ನ ಪತಿ ನನ್ನನ್ನು ಬೈದʼನೆಂದು ದೂರು ಹೇಳುತ್ತಿದ್ದುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಶ್ರೀನಿವಾಸಪುರ | ಬಲಾಢ್ಯರಿಂದ ನಿರಂತರ ಕಿರುಕುಳ: ದಯಾಮರಣಕ್ಕೆ ಅರ್ಜಿ ಹಾಕಿದ ದಲಿತ ಕುಟುಂಬ!

ಈ ಎಲ್ಲ ವಿಚಾರವನ್ನು ತಿಳಿದಿದ್ದ ರಾಮಕೃಷ್ಣನವರ ಮಗ ಆರೋಪಿ ನಾಗೇಶ್, ತನ್ನ ಪಿಕಪ್ ವಾಹನದಲ್ಲಿ ವೇಗವಾಗಿ ಹೋಗಿ ಗುದ್ದಿ ಆನಂದನ ಕೊಲೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೇ, ಘಟನಾ ಸ್ಥಳದಲ್ಲಿ ಮಚ್ಚು ಕೂಡ ಪತ್ತೆಯಾಗಿದ್ದು, ಪೊಲೀಸರು ಮಹಜರು ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನೆ ಸಂಬಂಧ ಆರೋಪಿ ನಾಗೇಶ್‌ನನ್ನು ಬಂಧಿಸಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...