ತುಮಕೂರು | ಕೀಲು ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡಿದ ಶಾಸಕ

Date:

ಕೀಲು ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಕೀಲು ಮತ್ತು ಮೂಳೆ ತಜ್ಞರೂ ಆಗಿರುವ ಶಾಸಕ ಡಾ. ರಂಗನಾಥ್ ತಮ್ಮ ವೈದ್ಯ ಮಿತ್ರರೊಂದಿಗೆ ಸೇರಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.

ತುಮಕೂರು ಜಿಲ್ಲೆಯ ಕುಣಿಗಲ್‌ ತಾಲೂಕಿನ ಕುಂದೂರು ಗ್ರಾಮದ ಆಶಾ (42) ಎಂಬುವರಿಗೆ ಮಂಡಿಕೀಲು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಪತಿ ಅನಾರೋಗ್ಯ ಪೀಡಿತರಾಗಿರುವ ಕಾರಣ ತಮ್ಮ ಇಬ್ಬರು ಮಕ್ಕಳ ಪೋಷಣೆಯ ಹೊಣೆ ಆಶಾ ಅವರ ಮೇಲಿದೆ. ಕೂಲಿ ಮಾಡಿ ಜೀವನ ಸಾಗಿಸುತ್ತಿರುವ ಅವರು, ಹತ್ತು ವರ್ಷದ ಹಿಂದೆ ಮಂಡಿಕೀಲು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಇದೀಗ ಮತ್ತೆ ತೀವ್ರ ನೋವು ಕಾಣಿಸಿಕೊಂಡಿತ್ತು.

ಕೀಲು ತಪ್ಪಿದ (ಡಿಸ್‌ಲೊಕೇಟ್‌) ಕಾರಣ ಮತ್ತೆ ಶಸ್ತ್ರಚಿಕಿತ್ಸೆ ಅನಿವಾರ್ಯವಾಗಿತ್ತು. ಶಸ್ತ್ರಚಿಕಿತ್ಸೆಗೆ ₹3 ಲಕ್ಷ ವೆಚ್ಚವಾಗುತ್ತದೆಂದು ವೈದ್ಯರು ಹೇಳಿದ್ದರು. ಹಣ ಹೊಂದಿಸಲಾಗದ ಕಾರಣ ಆಶಾ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರಲಿಲ್ಲ.ಈ ವಿಷಯವನ್ನು ಕುಂದೂರು ಗ್ರಾಮದ ಮುಖಂಡ ವಸಂತ್ ಕುಮಾರ್ ಎಂಬುವರು ಕುಣಿಗಲ್‌ ಕ್ಷೇತ್ರದ ಶಾಸಕ ಡಾ. ರಂಗನಾಥ್ ಅವರ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ರಂಗನಾಥ್‌ ಅವರು ಕೀಲು ಮತ್ತು ಮೂಳೆ ರೋಗ ತಜ್ಞರಾಗಿರುವ ಕಾರಣ ಶಸ್ತ್ರಚಿಕಿತ್ಸೆಗೆ ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶೇಷ ಪ್ರಕರಣಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಸಹಕಾರೊಂದಿಗೆ ಶಸ್ತ್ರಚಿಕಿತ್ಸೆ ನಡೆಸಲು ಕಾನೂನಿನಲ್ಲಿ ಅವಕಾಶವಿದೆ. ಹಾಗಾಗಿ ಬೌರಿಂಗ್‌ ಆಸ್ಪತ್ರೆಯ ನಿರ್ದೇಶಕ ಮನೋಜ್‌ ಅವರ ಸಲಹೆ ಮೇರೆಗೆ ಡಾ. ದೀಪಕ್‌ ಜೊತೆಗೂಡಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ” ಎಂದು ಡಾ.ರಂಗನಾಥ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ₹1 ಲಕ್ಷ ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಸಿಬ್ಬಂದಿ

“ಕುಣಿಗಲ್‌ ತಾಲೂಕಿನಲ್ಲಿ 50ಕ್ಕೂ ಹೆಚ್ಚು ಮಂದಿಗೆ ಕೀಲು ಸಂಬಂಧಿತ ಎರಡನೇ ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಸರ್ಕಾರದ ಉಚಿತ ಚಿಕಿತ್ಸಾ ಯೋಜನೆಯಲ್ಲಿ ಮೊದಲ ಬಾರಿಗೆ ಮಾತ್ರ ಶಸ್ತ್ರಚಿಕಿತ್ಸೆಗೆ ಅವಕಾಶವಿದೆ. ಎರಡನೇ ಶಸ್ತ್ರಚಿಕಿತ್ಸೆಗಾಗಿ ರಾಜ್ಯದಲ್ಲಿ 50 ಸಾವಿರ ರೋಗಿಗಳಿದ್ದಾರೆ. ಸರ್ಕಾರ ಈ ನಿಯಮಗಳನ್ನು ಮರು ಪರಿಶೀಲನೆ ಮಾಡಬೇಕಿದೆ. ಈ ಬಗ್ಗೆ ಸದನದಲ್ಲಿ ದನಿ ಎತ್ತಲಾಗುವುದು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...