ತುಮಕೂರು | ಮುಕ್ತ ವಿಶ್ವವಿದ್ಯಾಲಯದಲ್ಲಿ ಸ್ನಾತಕ, ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶಾತಿ‌ ಆರಂಭ

Date:

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪದವಿ ಪೂರ್ವ ಮತ್ತು ಸ್ನಾತಕ ಪದವಿ ವಿದ್ಯಾರ್ಹತೆ ಹೊಂದಿರುವ ಎಲ್ಲ ವಯೋಮಾನದ ವಿದ್ಯಾರ್ಥಿಗಳು ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶಾತಿ‌ ಪಡೆಯಬಹುದಾಗಿದ್ದು, ಕರಾಮುವಿಯು ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಲಿಬ್‌ಐಎಸ್‌ಸಿ, ಬಿಎಸ್‌ಸಿ, ಬಿಎಸ್‌ಡಬ್ಲ್ಯೂ, ಎಂಎ, ಎಂಸಿಜೆ, ಎಂಕಾಂ, ಎಂಎಸ್‌ಸಿ, ಎಂಲಿಬ್‌ಐಎಸ್‌ಸಿ, ಎಂಬಿಎ, ಎಂಸಿಎ, ಎಂಎಸ್‌ಡಬ್ಲ್ಯೂ ಮತ್ತು ಪಿಜಿ ಸರ್ಟಿಫಿಕೇಟ್, ಡಿಪ್ಲೊಮಾ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ.

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾಲಯವಾಗಿರುತ್ತದೆ.

ಪ್ರಥಮ ವರ್ಷದ ಪ್ರವೇಶಾತಿ ಶುಲ್ಕದ ವಿವರ:- ಬಿಎ ₹9,240, ಬಿಕಾಂ ₹9,790, ಬಿಬಿಎ/ಬಿಎಲ್‌ಐಎಸ್‌ಸಿ ₹13,640, ಬಿಸಿಎ/ಬಿಎಸ್‌ಸಿ ₹26,290, ಬಿಎಸ್‌ಡಬ್ಲ್ಯೂ ₹14,190, ಎಂಎ ₹11,660, ಎಂಸಿಜೆ ₹17,820, ಎಂಕಾಂ ₹13,640, ಎಂಬಿಎ ₹32,890, ಎಂಎಸ್‌ಸಿ/ಎಂಸಿಎ ₹32,670, ಎಂಎಸ್‌ಡಬ್ಲ್ಯೂ ₹23,430, ಎಂಎಲ್‌ಐಎಸ್‌ಸಿ ₹19,965ಗಳಾಗಿರುತ್ತದೆ.
ಪ್ರಥಮ ವರ್ಷದ ಪ್ರವೇಶಾತಿಗೆ 2025ರ ಅಕ್ಟೋಬರ್ 15 ಕೊನೆಯ ದಿನಾಂಕವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೋಧನಾ ಶುಲ್ಕ ರಿಯಾಯಿತಿ

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್/ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಪತಿ/ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ, KSRTC/BMTC ನೌಕರರಿಗೆ ಸ್ನಾತಕ/ಸ್ನಾತಕೋತ್ತರ ಪದವಿಗಳ ಬೋಧನಾ ಶುಲ್ಕದಲ್ಲಿ ಶೇ.10ರಷ್ಟು ರಿಯಾಯಿತಿ ಇರುತ್ತದೆ.

ಉಚಿತ ಪ್ರವೇಶಾತಿ

ಕೋವಿಡ್‌ನಿಂದ ಮರಣ ಹೊಂದಿದ ಪೋಷಕ ಮಕ್ಕಳಿಗೆ, ಟ್ರಾನ್ಸ್ ಜೆಂಡರ್/ತೃತೀಯ ಲಿಂಗಿಗಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ (ಬಿಎಡ್/ಎಂಬಿಎ ಹೊರತು ಪಡಿಸಿ) ಉಚಿತ ಪ್ರವೇಶಾತಿ ನೀಡಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿಯಲ್ಲಿ ಮರ್ಯಾದೆಗೇಡು ಹತ್ಯೆ | ಅನ್ಯಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದ ತಂದೆ

ಹೆಚ್ಚಿನ ವಿವರಗಳಿಗಾಗಿ: ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339ಕ್ಕೆ ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕ ಡಾ. ಲೋಕೇಶ ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...