ತುಮಕೂರು | ಸರ್ಕಾರಿ ಶಾಲೆಗೆ ಮೂಲ ಸೌಕರ್ಯ ಒದಗಿಸುವಂತೆ ಎಐಡಿಎಸ್ಒ ಆಗ್ರಹ

Date:

ತುಮಕೂರು ನಗರದ ಡಿಸಿ ಕಚೇರಿ ಬಳಿಯ ಶತಮಾನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲ ಸೌಕರ್ಯ ಕಲ್ಪಿಸಲು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎಐಡಿಎಸ್ಒ ಸಂಘಟನೆಯಿಂದ ಎನ್‌ಎಸ್‌ಎಪಿ ವಿಭಾಗದ ಸಹ ನಿರ್ದೇಶಕಿ ಸವಿತಾರವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ಶಾಲೆಗೆ ಸರಿಯಾದ ಕಾಂಪೌಂಡ್ ಇಲ್ಲದೆ ಅನೈತಿಕ ಕೃತ್ಯಗಳ ತಾಣವಾಗಿದೆ. ಸರಿಯಾದ ಕಟ್ಟಡ ಹಾಗೂ ಮೇಲ್ಛಾವಣಿ ವ್ಯವಸ್ಥೆ ಇಲ್ಲ, ಶೌಚಾಲಯಗಳು ಹಾಳಾಗಿವೆ. ಶಾಲಾ ಆವರಣದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಕಲ್ಲುಗಳು ಮತ್ತು ಕಸದ ಗುಂಡಿಗಳಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಶೈಕ್ಷಣಿಕ ನಗರಿ ತುಮಕೂರು ನಗರದ ಹೃದಯ ಭಾಗದ ಡಿಸಿ ಕಚೇರಿ ಹತ್ತಿರದಲ್ಲೇ ಇರುವ ಶತಮಾನದ ಇತಿಹಾಸ ಬರೆದಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದು ಕನಿಷ್ಟ ಮೂಲ ಸೌಕರ್ಯಗಳ ಕೊರತೆಯಿಲ್ಲದೆ ನಲುಗುತ್ತಿದೆ. ನಗರದಲ್ಲೇ ಇಂತಹ ದುಃಸ್ಥಿತಿಯಲ್ಲಿರುವ ಶಾಲೆಗಳು ಬಹಳಷ್ಟಿರುವುದು ಶೋಚನೀಯ ಸಂಗತಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪತ್ರಿಕೆಯಲ್ಲಿ ವರದಿಯಾದ ಹಿನ್ನೆಲೆಯಲ್ಲಿ ಈಗಾಗಲೇ ತುಮಕೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿರುತ್ತಾರೆ. ಆದರೆ ಇದು ಕೇವಲ ಭೇಟಿಗೆ ಸೀಮಿತವಾಗದೆ ಈ ಕೂಡಲೇ ಶಾಲೆಗೆ ಮೂಲ ಸೌಕರ್ಯ ಕಲ್ಪಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪೂರಕವಾದ ವಾತಾವರಣ ನಿರ್ಮಿಸಬೇಕು” ಎಂದು ಎಐಡಿಎಸ್‌ಒ ತುಮಕೂರು ಜಿಲ್ಲಾ ಸಮಿತಿ ಆಗ್ರಹಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಲೋಕಸಭಾ ಚುನಾವಣೆ: ಜಗದೀಶ್ ಶೆಟ್ಟರ್ ವಿರುದ್ಧ ಬ್ಯಾನರ್‌ ಅಳವಡಿಕೆ

ಇದೇ ಸಂದರ್ಭದಲ್ಲಿ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಸಿ ಬಿ, ಜಿಲ್ಲಾ ಸೆಕ್ರಟೆರಿಯೇಟ್ ಸದಸ್ಯರುಗಳಾದ ಭರತ್‌ ಎಸ್, ಸಚಿನ್ ಹಾಗೂ ಕೌನ್ಸಿಲ್ ಸದಸ್ಯ ದಂಡಪ್ಪ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...