ತುಮಕೂರು | ಗುಲಗಂಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಎಐಡಿಎಸ್ಒ ಆಗ್ರಹ

Date:

ತುಮಕೂರು ತಾಲೂಕಿನ ಗುಲಗಂಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ ನಡೆಯಿತು.

“ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ” ಎಂದು ಹಳ್ಳಿಯ ಜನರು ಸರ್ಕಾರದ
ವಿರುದ್ಧ ಒಕ್ಕೊರಲಿನಿಂದ ದನಿಯೆತ್ತಿದರು.

ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಮಾತನಾಡುತ್ತ, “ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಯೋಜನೆ ಭಾಗವಾಗಿ ಗುಬ್ಬಿ ವೀರಣ್ಣನವರು ಕಟ್ಟಿಸಿ, ಬೆಳೆಸಿರುವ ಗುಲಗಂಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನೂ ಮುಚ್ಚಿ ಸಮುದ್ರನಹಳ್ಳಿ ಮ್ಯಾಗ್ನೆಟ್‌ಗೆ ವಿಲೀನ ಮಾಡಲು ಮುಂದಾಗಿದೆ. ಈ ನಿರ್ಧಾರವು ಅತ್ಯಂತ ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿನ್ನೆ ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಸರ್ಕಾರಿ ಶಾಲೆ ಮುಚ್ಚುವುದಿಲ್ಲವೆಂದು ಹೇಳಿದ್ದಾರೆ. ಜತೆಗೆ, ಈ ರೀತಿಯ ಅಪಾದನೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿರುವ ಅಸತ್ಯದಿಂದ ಕೂಡಿದ ವಾದ ಎಂದೂ ಕೂಡ ಹೇಳಿದ್ದಾರೆ. ಆದರೆ, ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಅಕ್ಟೋಬರ್‌ 15ರಂದು ಹೊರಡಿಸಿರುವ ಸುತ್ತೋಲೆಯಲ್ಲಿ, ʼಕೆಪಿಎಸ್‌ ಶಾಲೆಗಳೊಂದಿಗೆ ಸುತ್ತಲಿನ ಕಡಿಮೆ ದಾಖಲಾತಿಯುಳ್ಳ ಶಾಲೆಗಳನ್ನು ವಿಲೀನಗೊಳಿಸಬೇಕುʼ ಎಂದು ಆದೇಶಿಸಿದೆ. ಅಂತೆಯೇ, ಕೆಪಿಎಸ್‌ ಶಾಲೆಯನ್ನಾಗಿ ಉನ್ನತೀಕರಿಸುತ್ತಿರುವ ಹಲವು ಶಾಲೆಗಳಿಗೆ ಸುತ್ತಲಿನ ಶಾಲೆಗಳನ್ನು ವಿಲೀನಗೊಳಿಸಿಸಬೇಕು ಎಂಬ ಆದೇಶವನ್ನು ಈಗಾಗಲೇ ಗ್ರಾಮ ಪಂಚಾಯಿತಿ ಮಟ್ಟದ ಹಲವು ಶಾಲೆಗಳಿಗೆ ನೀಡಲಾಗಿದೆ” ಎಂದು ಹೇಳಿದರು.

“ಅಧಿವೇಶನದಲ್ಲಿ ಸಚಿವರೇ ಹೇಳಿದಂತೆ, ಗ್ರಾಮ ಪಂಚಾಯಿತಿಗೊಂದರಂತೆ ಕೆಪಿಎಸ್ ಮ್ಯಾಗ್ನೆಟ್ ಶಾಲೆ
ತೆರೆಯಲಾಗುತ್ತದೆ, ಅಂದರೆ ತಮ್ಮದೇ ಇಲಾಖೆಯ‌ ಆದೇಶದಂತೆ ಸರ್ಕಾರ ಮುಂದುವರೆಯುತ್ತಿದೆ. ಈಗ ಮೂಡುವ ಪ್ರಶ್ನೆಯೆಂದರೆ, ಸರ್ಕಾರದ ಆದೇಶಗಳು ಹೇಳುವುದೇ ಒಂದು, ಮಂತ್ರಿಗಳ ಹೇಳಿಕೆ ಮತ್ತೊಂದು. ಜನ
ಯಾವುದನ್ನು ನಂಬಬೇಕು” ಎಂದು ಪ್ರಶ್ನಿಸಿದರು.

“ಕನ್ನಡ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂಬ ಸಚಿವರ ಒಳ್ಳೆಯ ಆಶಯ ನಿಜವಾದಲ್ಲಿ, ಈ ಕೂಡಲೇ ರಾಜ್ಯ ಸರ್ಕಾರ ತನ್ನ ಅಕ್ಟೋಬರ್ 15ರ ಆದೇಶದಲ್ಲಿ ನಮೂದಿಸಿರುವ ವಿಲೀನದ ಅಂಶವನ್ನು ಹಿಂಪಡೆಯಲಿ. ಜತೆಗೆ ವಿಲೀನದ ಹೆಸರಿನಲ್ಲಿ ಕಡಿಮೆ ದಾಖಲಾತಿಯ ಶಾಲೆಗಳನ್ನು ಮುಚ್ಚುವುದಿಲ್ಲವೆಂದು ಲಿಖಿತ ಆದೇಶ ಹೊರಡಿಸಲಿ”
ಎಂದು ಎಐಡಿಎಸ್ಒ ಪರವಾಗಿ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಜನರ ಬದುಕು ಹಸನುಗೊಳಿಸಲು ಅಗತ್ಯ ಬೇಡಿಕೆ ಈಡೇರಿಸಬೇಕು: ಸಿಪಿಐಎಂ ಆಗ್ರಹ

ಈ ಶಾಲೆಯು ಗುಬ್ಬಿ ವೀರಣ್ಣನವರು ಕಟ್ಟಿಸಿರುವ ಶಾಲೆ. ಈ ಶಾಲೆಯಲ್ಲಿ ಓದಿದವರು ಇಂದು ಉನ್ನತ ಉದ್ಯೋಗಗಳಲ್ಲಿದ್ದಾರೆ.
ಸರಿಯಾದ ರಸ್ತೆಯಿಲ್ಲದ ಸಮುದ್ರನಹಳ್ಳಿಗೆ ನಮ್ಮೂರಿನ ಚಿಕ್ಕ ಮಕ್ಕಳನ್ನ ಹೇಗೆ ಕಳಿಸಬೇಕು. ನಮ್ಮೂರಿನ ಶಾಲೆ ನಮ್ಮ ಹೆಮ್ಮೆ ಅದನ್ನು ನಾವು ಎಂದಿಗೂ ಮುಚ್ಚಲು ಬಿಡುವುದಿಲ್ಲ” ಎಂದು ಗ್ರಾಮಸ್ಥರು ಸರ್ಕಾರದ ಮ್ಯಾಗ್ನೆಟ್ ಯೋಜನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನಂತರ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಲಾಯಿತು.

ಪ್ರತಿಭಟನೆಯಲ್ಲಿ ಜಿಲ್ಲಾ ಪದಾಧಿಕಾರಿಗಳಾದ ಭರತ್, ಸಂದೀಪ್, ಗ್ರಾಮದ ಪೋಷಕರು ಮತ್ತು ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...