ತುಮಕೂರು | ಉದ್ಯೋಗ ಕಲ್ಪಿಸಲು ಮೂರೂ ಪಕ್ಷಗಳಿಗೆ ಇಚ್ಛಾಶಕ್ತಿ ಇಲ್ಲ : ಶಾಸಕ ಎಂ.ಟಿ.ಕೃಷ್ಣಪ್ಪ

Date:

 ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಯಾವುದೇ ಸರ್ಕಾರಗಳಿದ್ದರೂ ಯುವಜನರಿಗೆ ಉದ್ಯೋಗ ನೀಡುತ್ತಿಲ್ಲ. ಯುವ ಸಂಪನ್ಮೂಲವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಆದರೇನು ಮಾಡುವುದು, ನಮ್ಮಲ್ಲಿ ಆರ್ಥಿಕ ಸಂಪನ್ಮೂಲ ಇದ್ದರೂ ಉದ್ಯೋಗ ಕಲ್ಪಿಸಲು ಇಚ್ಛಾಶಕ್ತಿ ತೋರುತ್ತಿಲ್ಲ. ಸರ್ಕಾರ ಕಮಿಷನ್ ದಂಧೆಯಲ್ಲಿ ಮುಳುಗಿದೆ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ‌ ಮಾಡಿದರು.

ತುಮಕೂರು ನಗರದಲ್ಲಿ ಜಿಲ್ಲಾಧಿಕಾರಿಗಳ‌ ಕಚೇರಿ ಎದುರು ತುಮಕೂರು ಜಿಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ಕರ್ನಾಟಕ ರಾಜ್ಯದ ವಿವಿಧ ಇಲಾಖೆಗಳಲ್ಲಿ ಮತ್ತು ಪೊಲೀಸ್ ಇಲಾಖೆಯಲ್ಲಿ ಪಿಸಿ, ಪಿಎಸ್‌ಐ ಇತ್ಯಾದಿ ಸೇರಿದಂತೆ ಹಲವು ಹುದ್ದೆಗಳಿಗೆ ವಯೋಮಿತಿ ಹೆಚ್ಚಿಸಿ ನೇಮಕಾತಿ ಆರಂಭಿಸುವಂತೆ ಆಗ್ರಹಿಸಿ

ಯುವಜನತೆ ನಡೆಸುತ್ತಿದ್ದ ಹೋರಾಟದಲ್ಲಿ ಪಾಲ್ಗೊಂಡ ಅವರು, ರಾಜ್ಯದಲ್ಲಿ ಎರಡು ಮುಕ್ಕಾಲು ಲಕ್ಷ ಹುದ್ದೆ ಖಾಲೆ ಇವೆ. ಕೊನೇ ಪಕ್ಷ ಗುತ್ತಿಗೆ ಆಧಾರದ ಮೇಲೆ ತೆಗೆದುಕೊಂಡು ಪರಮನೆಂಟ್ ಆದರೂ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ನೇಮಕಾತಿ ಮಾಡಲು ಇಲ್ಲೀವರೆಗೆ ಮನಸ್ಸು ಮಾಡಿಲ್ಲ. ದೇಶ ಅಭಿವೃದ್ಧಿ ಪಥದಲ್ಲಿ ಸಾಗಬೇಕಾದರೆ ಮೊದಲು ದುಡಿಯುವ ಕೈಗಳಿಗೆ ಕೆಲಸ ಕೊಡಿ ಎಂದರಲ್ಲದೆ, ಯುವಜನರ ಹೋರಾಟದ ಶಕ್ತಿ ಮುಂದೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಹೀಗೆ ಯಾವ ಸರ್ಕಾರಗಳೂ‌ ನಿಲ್ಲುವುದಿಲ್ಲ ಎಂದು ಹೋರಾಟ ನಿರತ ಯುವಜನರನ್ನು ಶಾಸಕರು ಹುರಿದುಂಬಿಸಿದರು. 

ಉದ್ಯೋಗ ನೀಡುವಂತೆ ಆಗ್ರಹಿಸಿ ಮಾತನಾಡಿದ ಯುವತಿ ಅನುಷ, ಸರ್ಕಾರ ನಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ನೇಮಕಾತಿ ಮಾಡದೆ ಸರ್ಕಾರ ನಿರ್ಲಕ್ಷ್ಯ ತೋರಿರುವುದರಿಂದ ವಯಸ್ಸು ಮಿತಿ ದಾಟುತ್ತಿದೆ. ಈ ನಿಟ್ಟಿನಲ್ಲಿ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸುವ ಕೆಲಸ ಮಾಡಬೇಕು ಎಂದರು. 

ತಿಂಗಳಲ್ಲಿ ಜೀವನ ನಡೆಸುವ ಹಣ ನೌಕರಿಗೆ ಅಪ್ಲಿಕೇಶನ್‌ ಹಾಕಲು ಖರ್ಚಾಗುತ್ತಿದೆ. ಪದವಿ ಮುಗಿಸಿ ಎರಡು ವರ್ಷ ಕಳೆದರೂ ನೌಕರಿ ಇಲ್ಲ. ನಮ್ಮ ಮನೆಯಲ್ಲಿ ಮದುವೆ ಮಾಡಿದರೂ ಓದಿಸಲು ಮನಸ್ಸು ಮಾಡಿರುವುದೇ ಹೆಚ್ಚು. ಈ ನಡುವೆ ಕೆಲಸ ಸಿಗದಿದ್ದರೆ ನಾವೇನು ಮಾಡಬೇಕು. ದಯತೋರಿ ಸರ್ಕಾರ ಉದ್ಯೋಗ ನೀಡಬೇಕು ಎಂದು ಅವಲತ್ತು ಕೊಂಡರು.

ಹೋರಾಟದಲ್ಲಿ ಉದ್ಯೋಗಾಕಾಂಕ್ಷಿ ನೂರಾರು ಯುವಕ ಯುವತಿಯರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...