ತುಮಕೂರು | ನೊಂದವರ ಪರವಾಗಿ ನಿಂತ ಪ್ರಾಮಾಣಿಕ ಅಧಿಕಾರಿ ಎಎಸ್ಪಿ ಅಬ್ದುಲ್ ಖಾದರ್ : ಹೆತ್ತೇನಹಳ್ಳಿ ಮಂಜುನಾಥ್

Date:

ನೊಂದವರು ಮತ್ತು ಶೋಷಿತರ ಪರವಾಗಿ ನಿಂತ ಪ್ರಾಮಾಣಿಕ ಅಧಿಕಾರಿಗಳಲ್ಲಿ ನಿವೃತ್ತ ಎಎಸ್ಪಿ ಅಬ್ದುಲ್ ಖಾದರ್ ಕೂಡ ಒಬ್ಬರು ಎಂದು ರಾಜಕೀಯ ಮುಖಂಡ ಹೆತ್ತೇನಹಳ್ಳಿ ಮಂಜುನಾಥ್ ಶ್ಲಾಘಿಸಿದರು.

ತುಮಕೂರು ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ‘ತುಮಕೂರಿನ ನಿವೃತ್ತ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಖಾದರ್’ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಗಡಿಕಾಯುವ ಸೈನಿಕರಿಗೆ ದೊರೆಯುವ ಸನ್ಮಾನ ಅಬ್ದುಲ್ ಖಾದರ್ ಅವರಿಗೂ ಈ ಜಿಲ್ಲೆಯ ನಾಗರಿಕರಿಂದ ದೊರೆಯುತ್ತಿದೆ. ಜನಪರ ಸೇವೆಯಿಂದಾಗಿ ಅವರು ಜಿಲ್ಲೆಯ ಜನರ ಹೃದಯದಲ್ಲಿದಾರೆ ಎಂದು ಅವರು ಹೇಳಿದರು.

ಅಂಬೇಡ್ಕರ್ ನೀಡಿದಂತ ಕಾನೂನನ್ನು ಎದೆಗಪ್ಪಿಕೊಂಡು, ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ ಇಂದು ನಿವೃತ್ತಿಯಾಗುತ್ತಿದ್ದಾರೆ. ಇವರು ಅಬ್ದುಲ್ ಖಾದರ್ ಅಲ್ಲ, ಅಬ್ದುಲ್ ಕಾನೂನು ಸಾಹೇಬರು ಎಂದು ಬಣ್ಣಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001389990

ಅಧಿಕಾರಿಯಾಗಿದ್ದ ಸಮಯದಲ್ಲಿ ಬಡವರು, ನಿರ್ಗತಿಕರು, ಶೋಷಿತರು, ಮಹಿಳೆಯರ ಪರವಾಗಿ ಗಟ್ಟಿಯಾಗಿ ಹೋರಾಡಿದವರು, ಯಾವ ರಾಜಕಾರಣಿಗಳೂ ಅವರು ಸೊಪ್ಪು ಹಾಕುತ್ತಿರಲಿಲ್ಲ. ಇಂತಹ ದಕ್ಷ ಅಧಿಕಾರಿಯನ್ನು ಪಡೆದದ್ದು ನಮ್ಮ ಜಿಲ್ಲೆಯ ಭಾಗ್ಯ ಎಂದರಲ್ಲದೆ, ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳ ಪುಸ್ತಕಗಳನ್ನು ಪೊಲೀಸ್ ಇಲಾಖೆ ವತಿಯಿಂದ ಪ್ರಕಟಿಸಬೇಕು ಎಂದು ಅವರು ವಿನಂತಿಸಿದರು.

ಸದೃಢ ಸಮಾಜವನ್ನು ನಿರ್ಮಾಣ ಮಾಡುವಂತಹ ಜವಾಬ್ದಾರಿ ಶಿಕ್ಷಕರ ಮೇಲಿದೆ. ಅಂತೆಯೇ ಆ ಸಮಾಜವನ್ನು ರಕ್ಷಣೆ ಮಾಡುವಂತಹ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಆ ರೀತಿಯ ದಕ್ಷತೆಯನ್ನು ತೋರಿಸಿಕೊಟ್ಟವರು ಅಬ್ದುಲ್ ಖಾದರ್ ಅವರು ಎಂದು ಹೆತ್ತೇನಹಳ್ಳಿ ಮಂಜುನಾಥ್ ನುಡಿದರು.

ನಿವೃತ್ತರಾದ ಎಎಸ್ಪಿ ಅಬ್ದುಲ್ ಖಾದರ್ ದಂಪತಿಯನ್ನು ಈ ವೇಳೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಎಡಿಜಿಪಿ ವಝೀರ್ ಅಹಮದ್ ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಗೋಪಾಲ್, 12 ಬಟಾಲಿಯನ್ ಕೆಎಸ್‌ಆರ್‌ಪಿ ಕಮಾಂಡೆಂಟ್ ಹಂಝಾ ಹುಸೇನ್, ತುಮಕೂರು ಎಸ್ಪಿ ಅಶೋಕ್‌ ಕೆ.ವಿ, ಡಿಎಸ್ಪಿರವರುಗಳಾದ ಚಂದ್ರಶೇಖರ್, ಶೇಖರ್, ವಿನಾಯಕ್ ಶೆಟಗೇರಿ, ಮಂಜುನಾಥ, ಓಂ ಪ್ರಕಾಶ್, ಡಿಎಆರ್ ಡಿಎಸ್ಪಿ ಪರಮೇಶ್ ಹಾಗೂ ನಗರ ಮತ್ತು ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಮತ್ತು ನಾಗರಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...