ತುಮಕೂರು | ಬಾಬು ಜಗಜೀವನರಾಂ ರವರ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸಬೇಕು: ಜಿಲ್ಲಾಧಿಕಾರಿ

Date:

ಹಸಿರುಕ್ರಾಂತಿಯ ಹರಿಕಾರ ಹಾಗೂ ಮಾಜಿ ಉಪಪ್ರಧಾನ ಮಂತ್ರಿ ಡಾ. ಬಾಬು ಜಗಜೀವನ್‌ ರಾಂ ಅವರ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು ಎಂದು ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಕರೆ ನೀಡಿದರು.

ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿ ಪಂ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಸರಳವಾಗಿ ಆಯೋಜಿಸಿದ್ದ ಮಾಜಿ ಉಪಪ್ರಧಾನಿ ಡಾ ಬಾಬು ಜಗಜೀವನ್ ರಾಂರವರ 117ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಬಾಬೂ‌ ಜಗಜೀವನ್‌ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿ ಮಾತನಾಡಿದರು.

“ಬಾಬು ಜಗಜೀವನರಾಂರವರು 1908ರ ಏಪ್ರಿಲ್‌ 5ರಂದು ಬಿಹಾರದಲ್ಲಿ ಬಡತನದ ಕುಟುಂಬದಲ್ಲಿ ಜನಿಸಿ, 10ನೇ ತರಗತಿಯಲ್ಲಿ ಗಣಿತ ವಿಷಯದಲ್ಲಿ 100ಕ್ಕೆ 100 ಅಂಕಗಳನ್ನು ಪಡೆದಿದ್ದರು. ಚೆನ್ನಾಗಿ ಓದಿದ ನಂತರ ಇವರಿಗೆ ಸರ್ಕಾರಿ ಉದ್ಯೋಗ ಸಿಕ್ಕಿತ್ತು. ಆದರೆ ಬಾಬೂಜಿಯವರು ಸರ್ಕಾರಿ ಉದ್ಯೋಗ ಬೇಡ ಎಂದು ಹೇಳಿ, ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡರು. ಸ್ವಾತಂತ್ರ್ಯ ಹೋರಾಟದಲ್ಲೂ ಇವರ ಕೊಡುಗೆ ಬಹಳ ದೊಡ್ಡದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುಮಾರು 31 ವರ್ಷಗಳ ಕಾಲ ಕೇಂದ್ರ ಮಂತ್ರಿಗಳಾಗಿದ್ದ ಬಾಬು ಜಗಜೀವನ್‌ ರಾಂ ಅವರು ಕೃಷಿ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ರೈಲ್ವೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ದೇಶದಲ್ಲಿ ಬರ ಪರಿಸ್ಥಿತಿ ಇದ್ದಾಗ ಹಸಿರುಕ್ರಾಂತಿಗೆ ಕಾರಣಕರ್ತರಾಗಿದ್ದಾರೆ. ಇಂತಹ ಮಹಾತ್ಮರ ತತ್ವಗಳನ್ನು ನಮ್ಮೆಲ್ಲರ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಪಾಲನೆ ಮಾಡಬೇಕು” ಎಂದರು.

“ನಾವು ಹೇಗೆ ನಡೆದುಕೊಳ್ಳುತ್ತೇವೆಯೋ ಅದನ್ನೇ ದೇಶ ಬಿಂಬಿಸುತ್ತದೆ. ಪ್ರತಿಯೊಬ್ಬರಿಗೂ ಆತ್ಮಶಕ್ತಿ ಬಹಳ ಮುಖ್ಯ, ಬದುಕಿನಲ್ಲಿ ಸತ್ಯ ಒಂದೇ ಇರಬೇಕೆಂದು ಬಾಬು ಜಗಜೀವನರಾಂ ಹೇಳಿದ್ದಾರೆ. ಮುಂದಿನ ಪೀಳಿಗೆಗೆ ಇವರ ಬಗ್ಗೆ ತಿಳಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ” ಎಂದು ಹೇಳಿದರು.

ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, “ಹಸಿರುಕ್ರಾಂತಿಯ ಹರಿಕಾರರಾಗಿ ತಮ್ಮ ಸ್ವಂತ ಸಾಮರ್ಥ್ಯದ ಮೇಲೆ ಅತ್ಯಂತ ತಳಮಟ್ಟದಿಂದ ಇಡೀ ದೇಶವನ್ನೇ ಮುನ್ನಡೆಸುವಂತಹ ಹಂತಕ್ಕೆ ತಲುಪಿದವರು ಬಾಬು ಜಗಜೀವನ ರಾಂ ಅವರು. ಇವರು ಅತ್ಯುನ್ನತ ಸಾಧನೆಯನ್ನು ಮಾಡಿ ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದಾರೆ” ಎಂದರು.

“ಮಹಾತ್ಮರ ಜಯಂತಿ, ಉತ್ಸವಗಳನ್ನು ತೋರಿಕೆಗಾಗಿ ಆಚರಣೆ ಮಾಡಬಾರದು. ಅವರ ತತ್ವಾದರ್ಶ, ಮೌಲ್ಯಗಳನ್ನು ನಾವೆಲ್ಲರೂ ಬದುಕಿನಲ್ಲಿ ರೂಢಿಸಿಕೊಳ್ಳಬೇಕು. ಗಾಂಧೀಜಿ ಮತ್ತು ಬಾಬೂಜಿ ಇವರಿಬ್ಬರೂ ಕೂಡ ಸಾಧನೆಯ ಎರಡು ತುದಿಯನ್ನು ಮುಟ್ಟಿದವರು. ಇಂತಹ ಮಹನೀಯರು ಎಲ್ಲರಿಗೂ ಆದರ್ಶಪ್ರಾಯರು” ಎಂದು ಹೇಳಿದರು.

“ಮಹಾತ್ಮರ ಚರಿತ್ರೆಯನ್ನು ಆಳವಾಗಿ ಅಧ್ಯಯನ ಮಾಡಿದರೆ ಅವರ ಬದುಕಿನ ಪ್ರತಿ ಘಟ್ಟವೂ ಎಲ್ಲರಿಗೂ ಮನವರಿಕೆಯಾಗುತ್ತದೆ. ಬಾಬೂಜಿಯವರು ಕೇಂದ್ರ ಸಚಿವರಾಗಿ ಅನೇಕ ಇಲಾಖೆಯ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವ ವಿಚಾರದಲ್ಲೂ ಕೂಡ ಮುಂಚೂಣಿಯಲ್ಲಿದ್ದು, ಸ್ವಾತಂತ್ರ್ಯ ಹೋರಾಟದಲ್ಲೂ ಪಾಲ್ಗೊಂಡು ದೊಡ್ಡ ಕೊಡುಗೆಯನ್ನು ನೀಡಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | ಚುನಾವಣೆ ಅಕ್ರಮಗಳ ಬಗ್ಗೆ “ಸಿ-ವಿಜಿಲ್ ಸಿಟಿಜನ್ ಆ್ಯಪ್‌ನಲ್ಲಿ ದೂರು ಸಲ್ಲಿಸಿ: ಜಿಲ್ಲಾಧಿಕಾರಿ

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ಸಹಾಯಕ ನಿರ್ದೇಶಕ ಬಿ ಎಂ ದಿನೇಶ್ ಸೇರಿದಂತೆ ಸಮುದಾಯದ ಮುಖಂಡರುಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...