ತುಮಕೂರು-ಬೆಂಗಳೂರು ನೂತನ ಮೆಮು ರೈಲು ಸಂಚಾರಕ್ಕೆ ಸಚಿವ ವಿ. ಸೋಮಣ್ಣ ಚಾಲನೆ

Date:

ತುಮಕೂರು- ಬೆಂಗಳೂರು ಮಾರ್ಗವಾಗಿ ಸಂಚರಿಸುವ ನೂತನ ಮೆಮು ರೈಲಿಗೆ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಶುಕ್ರವಾರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ತುಮಕೂರು ನಗರದ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ಜಿಲ್ಲೆಯು ಅತೀವೇಗವಾಗಿ ಬೆಳೆಯುತ್ತಿದ್ದು, ಬೆಂಗಳೂರು ತುಮಕೂರು ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಜಿಲ್ಲೆಯ ಜನರ ಅನುಕೂಲಕ್ಕಾಗಿ ಭಾನುವಾರ ಹೊರತುಪಡಿಸಿ ಪ್ರತಿದಿನ ಬೆಳಿಗ್ಗೆ 8.45ಗಂಟೆಗೆ ತುಮಕೂರಿನಿಂದ ಹೊರಟು 10.25 ಗಂಟೆಗೆ ಯಶವಂತಪುರ ತಲುಪಲಿದೆ ಮತ್ತು ಸಂಜೆ 5.40 ಗಂಟೆಗೆ ಯಶವಂತಪುರದಿಂದ ಹೊರಟು 7.15 ಗಂಟೆಗೆ ತುಮಕೂರು ತಲುಪಲಿದೆ ಎಂದು ತಿಳಿಸಿದರು.

ತುಮಕೂರು- ಬೆಂಗಳೂರು ಮಾರ್ಗವಾಗಿ ಸಂಚರಿಸುವ ರೈಲುಗಳ ಸಂಖ್ಯೆಯು ಹೆಚ್ಚಾಗಿದ್ದು, 2 ಲೈನ್ ರೈಲ್ವೇ ಹಳಿಯನ್ನು 4 ಲೈನ್ ರೈಲ್ವೇ ಹಳಿಗಳಾಗಿ ಮಾಡಲು ಅನುಮೋದನೆ ನೀಡಲಾಗಿದೆ. ಸುಮಾರು 220 ಕೋಟಿ ರೂ. ವೆಚ್ಚದಲ್ಲಿ ಸ್ವಯಂ ಚಾಲಿತ ಸಿಗ್ನಲ್ ಸ್ಥಾಪಿಸಲಾಗಿದೆ ಮತ್ತು 2026 ಡಿಸೆಂಬರ್ ಅಥವಾ 2027 ಮಾರ್ಚ್ ಅಂತ್ಯದೊಳಗೆ ರಾಯದುರ್ಗ ತುಮಕೂರು ರೈಲ್ವೆ ಯೋಜನೆಯನ್ನು ಪ್ರಧಾನ ಮಂತ್ರಿಯವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಮಾತನಾಡಿ ನೂತನವಾಗಿ ಮೆಮೊ ರೈಲು ಸಂಚಾರದಿAದ ಸಾವಿರಾರು ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದರಲ್ಲದೇ ಜಿಲ್ಲೆಯಲ್ಲಿನ ರೈಲ್ವೆ ಕೆಳ ಸೇತುವೆ ಮತ್ತು ಮೇಲ್ಸೆತುವೆ ಕಾಮಗಾರಿಗೆ ಸುಮಾರು 300 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಸುರೇಶ್ ಗೌಡ, ಸುರೇಶ್ ಬಾಬು, ಎಂ.ಟಿ. ಕೃಷ್ಣಪ್ಪ, ಮಾಜಿ ಸಂಸದ ಜಿ.ಎಸ್. ಬಸವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಯೋಗೀಶ್ ಮೋಹನ್, ನೈರುತ್ಯ ರೈಲ್ವೆ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಅನುಪ್ ದಯಾನಂದ, ಬೆಂಗಳೂರು ವಿಭಾಗ ಹೆಚ್ಚುವರಿ ವ್ಯವಸ್ಥಾಪಕ ಪರೀಕ್ಷಿತ್ ಮೋಹನ್ ಪೊರ್ರ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತಿತರರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...