ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ತುಮಕೂರು ಉತ್ತಮ ಸ್ಥಳ : ಮಾಜಿ ಸಂಸದ ಜಿ.ಎಸ್. ಬಸವರಾಜು

Date:

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹ. ಇದರ ನಿರ್ಮಾಣಕ್ಕೆ ತುಮಕೂರು ಉತ್ತಮ ಸ್ಥಳ ಎಂದು ಮಾಜಿ ಸಂಸದ ಜಿ.ಎಸ್. ಬಸವರಾಜು ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮೂಲಭೂತ ಸೌಕರ್ಯ ಸಚಿವ ಎಂ.ಬಿ.ಪಾಟೀಲ್ ಕೈಗೊಂಡಿರುವ ನಿರ್ಧಾರಕ್ಕೆ ಪೂರಕವಾಗಿ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಮಂತ್ರಿಗಳು ಹಾಗೂ ಸಂಸದರು ಪಕ್ಷಾತೀತವಾಗಿ ಪ್ರಧಾನಿ ನರೇಂದ್ರ ಮೋದಿಯವರ ಬಳಿ ನಿಯೋಗ ಹೋಗಿ ಸಮಾಲೋಚನೆ ನಡೆಸಬೇಕು ಎಂದು ಅವರು ಸಲಹೆ ನೀಡಿದರು.

“ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು-2 ನಿರ್ಮಾಣ ನನ್ನ ಕನಸಾಗಿತ್ತು. ಎಲ್ಲರಿಗಿಂತ ಮೊದಲೇ, ತುಮಕೂರು ಜಿಲ್ಲಾ ದಿಶಾ ಸಮಿತಿ ಸಭೆಯಲ್ಲಿ ಚರ್ಚಿಸಿ, ತುಮಕೂರು ಸ್ಥಳ ಗುರುತಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಲಾಗಿತ್ತು. ಕಡತದ ಅನುಸರಣೆಯನ್ನು ಮಾಡಲಾಗಿತ್ತು. ಈಗ ಅದರ ಪ್ರತಿಫಲವಾಗಿ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಕೇಂದ್ರ ಸಚಿವರಾದ ವಿ. ಸೋಮಣ್ಣ ಅವರು ಮುಂದುವರೆಸುವ ಆಶಾಭಾವನೆ ಇದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸುವಾಗ, ಮಧುಗಿರಿ, ಕೊರಟಗೆರೆ, ಸಿರಾ ಮತ್ತು ತುಮಕೂರು ತಾಲೂಕು ಸಾವಿರಾರು ಎಕರೆ ಜಮೀನು ಈಗಾಗಲೇ ಗುರುತಿಸಿ, ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಕಳುಹಿಸಲು ಕೇಂದ್ರ ಸಚಿವ ವಿ. ಸೋಮಣ್ಣನವರು ತುಮಕೂರು ಜಿಲ್ಲೆಯ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್, ಸಚಿವರಾದ ಕೆ.ಎನ್.ರಾಜಣ್ಣ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಒಗ್ಗಟ್ಟಾಗಿ ಶ್ರಮಿಸಬೇಕು ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪ್ರಸ್ತಾವನೆಗಳಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವೈಮಾನಿಕ ದೂರ ತುಮಕೂರು 80 ಕಿ.ಮೀ,, ದೊಡ್ಡಬಳ್ಳಾಪುರ 46 ಕಿ.ಮೀ., ದಾಬಸ್‌ಪೇಟೆ 50 ಕಿ.ಮೀ. ನೆಲಮಂಗಲ 42 ಕಿ.ಮೀ, ರಾಮನಗರ 64 ಕಿ.ಮೀ. ದೂರವಿದೆ. ಉದ್ದೇಶಿತ ಎಲ್ಲಾ ಪ್ರಸ್ತಾವನೆಗಳ ವೈಮಾನಿಕ ದೂರಕ್ಕಿಂತ, ತುಮಕೂರು ಪ್ರಸ್ತಾವನೆ ದೂರ ಇದ್ದರೂ ರಾಜ್ಯ ಸರ್ಕಾರ ಗುರುತಿಸಿರುವ ಎಲ್ಲ ಸ್ಥಳಗಳಿಗಿಂತ ಉತ್ತಮವಾಗಿದೆ. ಅಭಿವೃದ್ದಿಯಲ್ಲಿ ಸಾಮಾಜಿಕ ನ್ಯಾಯ ದೊರಕಲಿದೆ ಎಂದು ಮಾಜಿ ಸಂಸದರು ಅಭಿಪ್ರಾಯಿಸಿದರು.

ತುಮಕೂರು ರಾಜ್ಯದ ಬಹುತೇಕ ಪ್ರದೇಶಗಳಿಗೆ ಅನೂಕೂಲವಾಗಲಿದೆ. ಸರ್ಕಾರಿ ಜಮೀನು ಜಾಸ್ತಿ ಇದೆ. ಉದ್ದೇಶಿತ ಬೇರೆ ಪ್ರಸ್ತಾವನೆಗಳ ಜಮೀನಿಗೆ ಹೋಲಿಸಿದರೆ, ಇಲ್ಲಿ ಜಮೀನು ಬೆಲೆ ಕಡಿಮೆ ಇದೆ. ಕೈಗಾರಿಕಾ ಕ್ರಾಂತಿಗೆ ಪೂರಕವಾಗಲಿದೆ. ಯಾವ ಸ್ಥಳ ಸೂಕ್ತ ಎಂಬುದನ್ನು ಕೇಂದ್ರ ಸರ್ಕಾರ ನಿರ್ಧರಿಸಲಿ. 19 ಜಿಲ್ಲೆಗಳ ಹೆಬ್ಬಾಗಿಲು ತುಮಕೂರು. ಬೆಂಗಳೂರು-ಪುಣೆ ಎಕನಾಮಿಕ್ ಕಾರಿಡಾರ್, ಚೆನ್ನೈ ಚಿತ್ರದುರ್ಗ ಇಂಡಸ್ಟ್ರಿಯಲ್ ಕಾರಿಡಾರ್, ಉದ್ದೇಶಿತ ಬೀದರ್-ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ, ಸುಮಾರು 12500 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಇಂಡಸ್ಟ್ರಿಯಲ್ ನೋಡ್ ಅಭಿವೃದ್ದಿಗೂ ಪೂರಕವಾಗಲಿದೆ ಎಂದರು.

ಹೇಮಾವತಿ, ಎತ್ತಿನಹೊಳೆ, ಭದ್ರಾ ಮೇಲ್ದಂಡೆ, ಉದ್ದೇಶಿತ ಶರಾವತಿ ನೀರಿನ ಯೋಜನೆಯ ವಾಟರ್ ಬ್ಯಾಂಕ್ ಜಾಲಗುಣಿಯ ಬಳಿ ನಿರ್ಮಾಣವಾಗಲಿದೆ. ಈ ಎಲ್ಲಾ ನದಿಗಳ ನೀರನ್ನು ಬಳಸಲು ಅನೂಕೂಲವಾಗಲಿದೆ. ಈ ಪ್ರಸ್ತಾವನೆ ಹಿಂದುಳಿದ ಪ್ರದೇಶವಾಗಿದ್ದು, ಅಭಿವೃದ್ದಿಗೆ ಮುನ್ನುಡಿ ಬರೆಯಲಿದೆ ಎಂದರು.

ಉದ್ದೇಶಿತ ಮಾದವಾರ- ತುಮಕೂರು ಮೆಟ್ರೋ ಮಾರ್ಗವನ್ನು ಮತ್ತು ಉದ್ದೇಶಿತ ಉಪನಗರ ರೈಲ್ವೆ ಮಾರ್ಗವನ್ನು ವಸಂತ ನರಸಾಪುರದವರೆಗೆ ವಿಸ್ತರಣೆ ಮಾಡಲೇಬೇಕಿದೆ. ಇಂಡಸ್ಟ್ರಿಯಲ್ ನೋಡ್‌ನಲ್ಲಿ ಜಮೀನು ಪಡೆದವರಲ್ಲಿ ಬೆಂಗಳೂರಿನ ಉದ್ಯಮಿಗಳೇ ಜಾಸ್ತಿ ಇದ್ದಾರೆ. ತುಮಕೂರು ಏರ್‌ಪೋರ್ಟ್ ಪ್ರಸ್ತಾವನೆ, ಉದ್ದೇಶಿತ ಬೀದರ್-ಬೆಂಗಳೂರು ಎಕ್ಸ್ಪ್ರೆಸ್ ಹೈವೆಯಿಂದ, ನೇರವಾಗಿ ಬೆಂಗಳೂರು ಬಿಸಿನೆಸ್ ಕಾರಿಡಾರ್‌ಗೆ ಸಂಪರ್ಕವಾಗುವುದರಿಂದ ಬೆಂಗಳೂರು-ತುಮಕೂರು ರಸ್ತೆ ಒತ್ತಡ ಕಡಿಮೆಯಾಗಲಿದೆ. ಈಗಾಗಲೇ ಮೈಸೂರಿನಲ್ಲಿ ಏರ್‌ಪೋರ್ಟ್ ಇರುವುದರಿಂದ, ಬೆಂಗಳೂರು-ಮೈಸೂರು ರಸ್ತೆಯ ಪ್ರಸ್ತಾವನೆ ಅಭಿವೃದ್ಧಿಯಲ್ಲಿ ಸಾಮಾಜಿಕ ನ್ಯಾಯ ಸಮ್ಮತವಲ್ಲ. ಇಲ್ಲಿನ ಜಮೀನು ಬೆಲೆಯೂ ಅತ್ಯಂತ ದುಬಾರಿಯಾಗಲಿದೆ. ಹಾಗಾಗಿ 19 ಜಿಲ್ಲೆಗಳ ಚುನಾಯಿತ ಜನಪ್ರತಿನಿಧಿಗಳು ಧ್ವನಿ ಎತ್ತಬೇಕಿದೆ. ಯಾವುದೇ ಬೃಹತ್ ವಿಶೇಷ ಯೋಜನೆಗೆ ವೈಜ್ಞಾನಿಕ ಅಭಿವೃದ್ಧಿ ಲಾಭಿ ಬಹಳ ಕೆಲಸ ಮಾಡಲಿದೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕುಂದರನಹಳ್ಳಿ ರಮೇಶ್, ನಿವೃತ್ತ ಪ್ರಾಂಶುಪಾಲರಾದ ಶಿವರುದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...