ತುಮಕೂರು | ಸಿದ್ದಾರ್ಥ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳಿಂದ ಬಿಸಿಯೂಟ ಯೋಜನೆ

Date:

ತುಮಕೂರು ಜಿಲ್ಲೆಯ  ಶಿರಾ ತಾಲ್ಲೂಕಿನ ತಾವರೇಕೆರೆ ಗ್ರಾಮದ ಶ್ರೀ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸೇರಿ ಬಿಸಿಯೂಟ ಸೇವಾ ಕಾರ್ಯವನ್ನು ಬುಧವಾರದಂದು ಅನುಷ್ಠಾನಗೊಳಿಸಿದರು.

ಶಿರಾ ತಾಲೂಕು ಪಂಚಾಯಿತಿ  ಕಾರ್ಯನಿರ್ವಾಹಣಾ ಅಧಿಕಾರಿ ಹರೀಶ್ ಮಾತಾನಾಡಿ ಮಕ್ಕಳು ಆಲೋಚನೆಗಳನ್ನು ಮಾಡಬೇಕು, ಆಲೋಚನೆಗಳಿಗೆ ಜಗತ್ತನ್ನು ಬದಲಿಸುವ ಶಕ್ತಿ ಇರುತ್ತದೆ, ಕಾಲೇಜು ಮಕ್ಕಳಿಗೆ ಬಿಸಿಯೂಟ ನೀಡುತ್ತಿರುವುದು ನಿಜಕ್ಕೂ ಒಳ್ಳೆಯ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

1000626929

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರಾಜು ಮಾತಾನಾಡಿ ಇದು ಬಹಳ ಒಳ್ಳೆಯ ಪರಿಕಲ್ಪನೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕಾಲೇಜಿಗೆ ಬರುತ್ತಿರುವುದರಿಂದ ಈ ಯೋಜನೆಯೂ ಮಕ್ಕಳಿಗೆ ಸಹಾಯಕವಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶಿವಕುಮಾರ್ ನಾಯಕ್ ಮಾತಾನಾಡಿ ಈ ವ್ಯವಸ್ಥೆಯನ್ನು ನಿಮ್ಮ ಪ್ರಗತಿಗಾಗಿ ಮಾಡುತ್ತಿದ್ದೇವೆ, ಇದರ ಸದುಪಯೋಗ ಮಾಡಿಕೊಂಡು ಕಾಲೇಜಿಗೆ ಒಳ್ಳೆಯ ಕೀರ್ತಿ ತರುವುದು ನಿಮ್ಮ ಜವಾಬ್ದಾರಿ ಎಂದರು.

ಕಾರ್ಯಕ್ರಮದಲ್ಲಿ ತಾವರೇಕೆರೆ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಚಂದ್ರಶೇಖರ್, ನಿವೃತ್ತ ಪ್ರಾಂಶುಪಾಲ ದೇವರಾಜ, ಬಲರಾಮ, ಶಿವು ಸ್ನೇಹಪ್ರಿಯ,ರವಿತೇಜ ಚಿಗಳಿಕಟ್ಟೆ ಹಾಗೂ ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...