ತುಮಕೂರು | ಬಿಜೆಪಿ-ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

Date:

ಜೆಡಿಎಸ್‌ನ ಯುವ ಮುಖಂಡ ಹೆಬ್ಬೂರಿನ ದೀಪಕ್‌ಗೌಡ ಹಾಗೂ ಬಿಜೆಪಿ ಮುಖಂಡ ನರಸೇಗೌಡ ಅವರುಗಳು ಗುರುವಾರದಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ಕಾಂಗ್ರೆಸ್ ಪಕ್ಷದ ಶಾಲು ಹಾಕಿ, ಕೈಗೆ ಬಾವುಟ ನೀಡಿ ಜೆಡಿಎಸ್‌ನ ದೀಪಕ್‌ಗೌಡ, ಬಿಜೆಪಿಯ ನರಸೇಗೌಡ, ದಯಾನಂದಗೌಡ ಅವರುಗಳನ್ನು ಪಕ್ಷಕ್ಕೆ ಬರ ಮಾಡಿಕೊಂಡ ಡಾ.ಜಿ.ಪರಮೇಶ್ವರ್ ಅವರು, ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿ ಯಾರೇ ಬಂದರೂ ಸ್ವಾಗತಿಸುವುದಾಗಿ ತಿಳಿಸಿದರು.

“ಇಂದು ಇಬ್ಬರು ಯುವ ಮುಖಂಡರು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದರಿಂದ ತುಮಕೂರು ನಗರ ಮತ್ತು ಗ್ರಾಮಾಂತರದಲ್ಲಿ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಧೋರಣೆಗಳಿಂದ ಬೇಸತ್ತು ಕಾಂಗ್ರೆಸ್ ಪಕ್ಷ ಸೇರಿದ್ದು, ನಮ್ಮ ಅಭ್ಯರ್ಥಿ ಮುದ್ದಹನುಮೇಗೌಡ ಪರವಾಗಿ ಕೆಲಸ ಮಾಡಲಿದ್ದಾರೆ” ಎಂದು ಪರಮೇಶ್ವರ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯುವಕರಾಗಿರುವ ದೀಪಕ್‌ಗೌಡ ಅವರಿಗೆ ಒಳ್ಳೆಯ ಭವಿಷ್ಯವಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನಗಳನ್ನು ಪಕ್ಷ ನೀಡಲಿದೆ. ತಮ್ಮ ತಮ್ಮ ವಾರ್ಡ್‌ಗಳು, ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಸಾಧನೆಗಳು ಮತ್ತು ಹೊಸ ಗ್ಯಾರಂಟಿಗಳ ಕರಪತ್ರ ಹಂಚುವ ಮೂಲಕ ಎಸ್ ಪಿ ಮುದ್ದಹನುಮೇಗೌಡರ ಗೆಲುವಿಗೆ ಶ್ರಮಿಸಬೇಕು” ಎಂದು ಸಲಹೆ ನೀಡಿದರು.

“ಬಿಜೆಪಿ ಧರ್ಮದ ಹೆಸರಿನಲ್ಲಿ ಜನರನ್ನು ಒಡೆದಾಳುವ ನೀತಿ ಅನುಸರಿಸುತ್ತಿದೆ. ಇದಕ್ಕೆ ಅವಕಾಶ ನೀಡಬಾರದೆಂಬ ಕಾರಣಕ್ಕೆ ಕೇಂದ್ರದಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕೆಂಬುದು ನಮ್ಮ ಆಶಯವಾಗಿದೆ. ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. 10 ವರ್ಷದ ಬಿಜೆಪಿಯ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಮುದ್ದಹನುಮೇಗೌಡರ ಪರ ಅಲೆ ಇದೆ. ಸರಳ ಸಜ್ಜನ ಎಂಬ ಮಾತುಗಳು ಮತದಾರರಿಂದಲೇ ಕೇಳಿ ಬರುತ್ತಿವೆ. ಇದು ನಮ್ಮ ಅಭ್ಯರ್ಥಿಯ ಗೆಲುವಿಗೆ ಸಹಕಾರಿಯಾಗಲಿದೆ” ಎಂದು ನುಡಿದರು.

ದೀಪಕ್‌ಗೌಡ ಮಾತನಾಡಿ, “ಜೆಡಿಎಸ್ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಪಕ್ಷ ಸೇರಲು ಹಲವು ಕಾರಣಗಳಿವೆ. ಬಿಜೆಪಿ ನೀಡಿದ್ದ ಒಂದು ಭರವಸೆಯನ್ನೂ ಈಡೇರಿಸಿಲ್ಲ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಯಾವುದರ ಬೆಲೆಯೂ ಕಡಿಮೆಯಾಗಿಲ್ಲ. ಬೆಲೆ ಹೆಚ್ಚಳದಿಂದ ದೇಶದ ಜನತೆ ತತ್ತರಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮುದ್ದಹನುಮೇಗೌಡರು ಸ್ಥಳೀಯ ಅಭ್ಯರ್ಥಿಯಾಗಿದ್ದು, ಅವರನ್ನು ಬೆಂಬಲಿಸಬೇಕೆಂಬ ಕಾರಣಕ್ಕೆ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ” ಎಂದು ಹೇಳಿದರು.

“ಕಾಂಗ್ರೆಸ್ ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಸ್ವಾತಂತ್ರ್ಯ ನಂತರದಲ್ಲಿ ಬಡವರಿಗಾಗಿ ಕೆಲಸ ಮಾಡುತ್ತಾ ಬಂದಿದೆ. ಬಿಜೆಪಿಯಂತೆ ಈ ದೇಶದ ಜನರ ನಡುವೆ ಧರ್ಮದ ವಿಚಾರದಲ್ಲಿ ಕೋಮು ಭಾವನೆ ಉಂಟು ಮಾಡುತ್ತಿಲ್ಲ. ಭಾರತೀಯರೆಲ್ಲರೂ ಒಂದೇ ಎಂಬ ಭಾವನೆಯನ್ನು ಕಾಂ‌ಗ್ರೆಸ್ ಹೊಂದಿದೆ. ಹಾಗಾಗಿ ಕಾಂಗ್ರೆಸ್ ಪಕ್ಷವನ್ನು ಸೇರುತಿದ್ದು, ಮುದ್ದಹನುಮೇಗೌಡರ ಗೆಲುವಿಗೆ ಶ್ರಮಿಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗ್ಯಾರಂಟಿ ನೀಡಿದಂತೆ ಕೇಂದ್ರದಲ್ಲೂ ಗ್ಯಾರಂಟಿ ಅನುಷ್ಠಾನ: ಮುನಿರಾ ಎ ಮಕಾಂದಾರ್

ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಅಹಮದ್, ಮಾಜಿ ಉಪಮೇಯರ್ ಅಸ್ಲಾಂಪಾಷ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್, ದೀಪಕ್‌ಗೌಡ, ನರಸೇಗೌಡ, ದಯಾನಂದಗೌಡ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...