ತುಮಕೂರು | ಆದಿಚುಂಚನಗಿರಿ ವಿವಿಗೆ ಬಸ್ ವ್ಯವಸ್ಥೆ : ಮನವಿಗೆ ಸ್ಪಂದಿಸಿದ ಶಾಸಕ ಎಸ್.ಆರ್ ಶ್ರೀನಿವಾಸ್

Date:

ವಿದ್ಯಾರ್ಥಿಗಳ ಕಷ್ಟಕ್ಕೆ ಸ್ಪಂದಿಸಿದ ಕೆ ಎಸ್‌ ಆರ್‌ ಟಿ ಸಿ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಎಸ್.ಆರ್ ಶ್ರೀನಿವಾಸ್  ಮನವಿಗೆ ಸ್ಪಂದಿಸಿದ ಶಾಸಕರು ತುಮಕೂರು- ಕುಣಿಗಲ್‌- ಎಡೆಯೂರು ಮಾರ್ಗವಾಗಿ ಬಿ ಜಿ ನಗರಕ್ಕೆ ಬಸ್‌ ಓಡಾಡಲು ಹಸಿರು ನಿಶಾನೆ ತೋರಿದರು. 

ಹತ್ತಾರು ವರ್ಷಗಳ ವಿದ್ಯಾರ್ಥಿಗಳ, ಭಕ್ತರ ಮತ್ತು ರೋಗಿಗಳ ಬೇಡಿಕೆಯಾಗಿದ್ದ ತುಮಕೂರು-ಹೆಬ್ಬೂರು-ಕುಣಿಗಲ್ ಮಾರ್ಗವಾಗಿ ಶ್ರೀಕ್ಷೇತ್ರ ಆದಿಚುಂಚನಗಿರಿ ಹೋಗಲು ಅನುಕೂಲವಾಗುವಂತೆ ಆದಿಚುಂಚನಗಿರಿ ವಿಶ್ವವಿದ್ಯಾನಿಲಯಕ್ಕೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಎಸ್.ಆರ್ ಶ್ರೀನಿವಾಸ್ ಅವರಿಗೆ ಭೖರವೇಶ್ವರ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗೇಗೌಡ, ತುಮಕೂರು ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ರವಿ ಗೌಡ, ಕಾಂಗ್ರೆಸ್ ಮುಖಂಡ ಹೆತ್ತೆನಹಳ್ಳಿ ಮಂಜುನಾಥ್, ವಕೀಲ ಸಿ. ಕೆ. ಮಹೇಂದ್ರ ನಿಯೋಗ ಅವರನ್ನೊಳಗೊಂಡ ಶುಕ್ರವಾರ ತುಮಕೂರಿನ ಅವರ ನಿವಾಸದಲ್ಲಿ ಅಧ್ಯಕ್ಷರಿಗೆ ಮನವಿ ಸಲ್ಲಿಸಿತು.

ಶ್ರೀ ಆದಿಚುಂಚನಗಿರಿ ಧಾರ್ಮಿಕ ಕ್ಷೇತ್ರವು ಜಿಲ್ಲೆಯಲ್ಲಿ ಅಸಂಖ್ಯಾತ ಭಕ್ತವೃಂದವನ್ನು ಹೊಂದಿದ್ದು ಜೊತೆಗೆ ವಿದ್ಯಾರ್ಜನೆಯಲ್ಲಿ ಇಂದು ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದ್ದು ಉತ್ತಮ ಶಿಕ್ಷಣ ಕಲ್ಪಿಸುತ್ತಿದೆ. ಬಿ ಜಿ ನಗರದ ವಿಶ್ವವಿದ್ಯಾಲಯದ ಆವರಣದಲ್ಲಿ 9 ಶಾಲಾ ಕಾಲೇಜುಗಳು ಭಿನ್ನ, ಭಿನ್ನ ಕೋರ್ಸ್‌ ಗಳನ್ನು ಆಭ್ಯಸಿಸಲು ಅವಕಾಶವಿದೆ. ಇಲ್ಲಿನ ವಿವಿಧ ಕೋರ್ಸ್‌ ಗಳನ್ನು ಅಭ್ಯಾಸ ಮಾಡಲು ತುಮಕೂರು, ಕುಣಿಗಲ್‌ ಮಾರ್ಗದಿಂದ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿನ ನಿತ್ಯ ಓಡಾಡುತ್ತಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೇ ಆದಿಚುಂಚನಗಿರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ರಾಜಧಾನಿಯ ಯಾವ ಹೈ ಟೆಕ್ ಆಸ್ಪತ್ರೆಗಳಿಗೂ ಕಡಿಮೆ ಇಲ್ಲದಂತೆ ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ಚಿಕಿತ್ಸೆ ನೀಡುತ್ತಿದೆ. ನರರೋಗ ವಿಭಾಗವು ಅತ್ಯಂತ ಸುಧಾರಿತ ವೈಶಿಷ್ಟ್ಯಗಳನ್ನೊಳಗೊಂಡಿದೆ. ಈ ಕಾರಣಕ್ಕೂ ದಿನಂಪ್ರತಿ ಕನಿಷ್ಟ 50-100 ಜನ ರೈತರು, ಬಡವರು ಚಿಕಿತ್ಸೆಗಾಗಿ ಹೋಗುತ್ತಿದ್ದಾರೆ. ಗೂಳೂರು, ನಾಗವಲ್ಲಿ, ಹೆಬ್ಬುರು ಕಡೆಯಿಂದ ವಿದ್ಯಾರ್ಥಿಗಳು, ರೋಗಿಗಳು, ಭಕ್ತರು ಪ್ರತಿದಿನ ಬಿ. ಜಿ. ನಗರದ ಆಸ್ಪತ್ರೆ ಗೆ ತೆರಳಲು ಪರದಾಡುತ್ತಾರೆ.

ಬಸ್ ಕಲ್ಪಿಸಿಕೊಡುವುದರಿಂದ ಬಡ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ಸಮಯಕ್ಕೆ ಸರಿಯಾಗಿ ತಲುಪಲು ಅನುಕೂಲ ಆಗಲಿದೆ. ವಿಶ್ವವಿದ್ಯಾಲಯದ ಆವರಣದಲ್ಲಿರುವ ಆಸ್ಪತ್ರೆಯಲ್ಲಿ ಕಡಿಮೆ ವೆಚ್ಚದ ಚಿಕಿತ್ಸೆ ಪಡೆಯಲು ಬಡವರಿಗೆ ಅನುಕೂಲವಾಗಲಿದೆ ಎಂದು ಭೈರವೇಶ್ವರ ಬ್ಯಾಂಕಿನ ಅಧ್ಯಕ್ಷರಾದ ಚಿಕ್ಕ ರಂಗಣ್ಣ ಅವರು ಶಾಸಕರಿಗೆ ವಿದ್ಯಾರ್ಥಿಗಳ ಕಷ್ಟವನ್ನು ಮನವರಿಕೆ ಮಾಡಿಕೊಟ್ಟರು.

ವಿದ್ಯಾರ್ಥಿಗಳು ದಿನನಿತ್ಯ ಈ ಮಾರ್ಗವಾಗಿ ಪ್ರಯಾಣ ಬೆಳೆಸುತ್ತಿದ್ದು ಬಸ್ ನಲ್ಲಿ ಒಂದು ಗಂಟೆ ತೆಗೆದುಕೊಳ್ಳುವ ಪ್ರಯಾಣ ಎರಡು ಮೂರು ಬಸ್‌ ಹತ್ತಿ ಇಳಿದು ಅಲ್ಲಿಗೆ 3 ಗಂಟೆಯಾಗುತ್ತಿದೆ. ತುಮಕೂರಿನಿಂದ ನೇರವಾಗಿ ಆದಿಚುಂಚನಗಿರಿ ವಿಶ್ವವಿದ್ಯಾನಿಲಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದರೆ ವಿದ್ಯಾರ್ಥಿಗಳಿಗೆ, ಭಕ್ತರಿಗೆ, ರೋಗಿಗಳಿಗೆ, ಅನುಕೂಲವಾಗುತ್ತದೆಂಬ ನಿಯೋಗದ ಮನವಿಗೆ ಸ್ಪಂದಿಸಿದ ಶಾಸಕ ಎಸ್.ಆರ್ ಶ್ರೀನಿವಾಸ್ ರವರು ಒಂದು ವಾರದೊಳಗೆ ಶಾಲಾ ಕಾಲೇಜಿನ ಸಮಯಕ್ಕೆ ಅನುಕೂಲ ವಾಗುವಂತೆ ಬಸ್ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ತುಮಕೂರಿನಿಂದ ಬೆಳಗ್ಗೆ 7.10 ಕ್ಕೆ ಹೊರಡುವ ಈ ಬಸ್‌ ಕುಣಿಗಲ್‌ ಹಾಗೂ ಎಡೆಯೂರು ಮಾರ್ಗವಾಗಿ 8.50ಕ್ಕೆ ಬಿ ಜಿ ನಗರದ ವಿಶ್ವವಿದ್ಯಾನಿಲಯದ ಆವರಣ ತಲುಪಲಿದೆ. ಸಂಜೆ 4.10ಕ್ಕೆ ಅಲ್ಲಿಂದ ಹೊರಡಲಿದೆ. ರೋಗಿಗಳು, ವಿದ್ಯಾರ್ಥಿಗಳು ಮತ್ತು ಎಡೆಯೂರು ಹಾಗೂ ಶ್ರೀ ಕ್ಷೇತ್ರ ಆದಿಚುಂಚನಗಿರಿಯ ಭಕ್ತಾಧಿಗಳಿಗೂ ಅನುಕೂಲವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...