ತುಮಕೂರು | ಶಿಥಿಲಾವಸ್ಥೆಯಲ್ಲಿರುವ ಶಾಲೆ, ಅಂಗನವಾಡಿ ಕೊಠಡಿಗಳ ನೆಲಸಮಕ್ಕೆ ಸಿಇಓ ಸೂಚನೆ

Date:

ತುಮಕೂರು ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲೆ ಹಾಗೂ ಅಂಗನವಾಡಿ ಕೊಠಡಿ, ಶೌಚಾಲಯಗಳನ್ನು ನೆಲಸಮ ಮಾಡಲು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಸೂಚನೆ ನೀಡಿದರು.

ತುಮಕೂರು ಜಿಲ್ಲಾ ಪಂಚಾಯತಿ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ಮಕ್ಕಳಿಗೆ ಪಾಠ ಮಾಡಲು ಯೋಗ್ಯವಿಲ್ಲದ, ದುಸ್ಥಿತಿಯಲ್ಲಿರುವ ಕೊಠಡಿಗಳನ್ನು ನೆಲಸಮ ಮಾಡಲು ಜಿಲ್ಲಾ ಪಂಚಾಯತಿ ಅನುಮೋದನೆ ಪಡೆದ ನಂತರ ಕ್ರಮವಹಿಸಬೇಕೆಂದು ಅವರು ನಿರ್ದೇಶಿಸಿದರು.

ಮಕ್ಕಳಿಗೆ ಪಾಠ ಮಾಡುವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದುಸ್ಥಿತಿಯಲ್ಲಿರುವ ಕೊಠಡಿಗಳ ನೆಲಸಮಕ್ಕೆ ಜಿಲ್ಲಾ ಪಂಚಾಯತಿ ಮುಂದಾಗಿದೆ. ಮಳೆಗಾಲವಿರುವುದರಿಂದ ಸಂಬಂಧಿಸಿದ ಗ್ರಾಮ ಪಂಚಾಯತಿಗಳು ತಮ್ಮ ವ್ಯಾಪ್ತಿಯಲ್ಲಿ ದುರಸ್ತಿಪಡಿಸಲಾಗದ, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ನೆಲಸಮ ಮಾಡುವ ಕಾರ್ಯವನ್ನು ವಿಳಂಬ ಮಾಡದೆ ಬರುವ ಸೆಪ್ಟೆಂಬರ್ ಮಾಹೆಯೊಳಗಾಗಿ ಪೂರ್ಣಗೊಳಿಸಬೇಕು. ನೆಲಸಮ ಮಾಡಿದ ಕೊಠಡಿಗಳ ತ್ಯಾಜ್ಯವನ್ನು ಉಳಿಸದೆ ಶಾಲಾ ಆವರಣದಿಂದ ಕೂಡಲೇ ತೆರವುಗೊಳಿಸಬೇಕೆಂದು ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 08 30 at 9.39.07 AM 1

ನೆಲಸಮಗೊಳಿಸುವ ಮುನ್ನ ಶಿಥಿಲ ಕೊಠಡಿಗಳ ಸ್ಥಿತಿ-ಗತಿಯ ಛಾಯಾಚಿತ್ರ ಹಾಗೂ ವಿಡಿಯೋ ಚಿತ್ರೀಕರಣ ಮಾಡಬೇಕು ಎಂದರಲ್ಲದೆ, ಶಾಲೆಗಳಲ್ಲಿ ಮಕ್ಕಳ ಅನುಭವಾತ್ಮಕ ಕಲಿಕೆ ಹಾಗೂ ಗುಣಮಟ್ಟದ ಶಿಕ್ಷಣಕ್ಕಾಗಿ ಶಿಕ್ಷಕರ ಕಾರ್ಯಕ್ಷಮತೆ ಹೆಚ್ಚಿಸಲು ತರಬೇತಿ ಕಾರ್ಯಕ್ರಮವನ್ನು ಆಯೋಜಿಸಬೇಕೆಂದು ಡಿಡಿಪಿಐಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶವನ್ನು ಉತ್ತಮಗೊಳಿಸುವ ದೃಷ್ಟಿಯಿಂದ ಶಿಕ್ಷಕರಿಗೆ ಈ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಪಠ್ಯಬೋಧನಾ ಕ್ರಮ, ಮಕ್ಕಳ ಕಲಿಕೆಗೆ ಉತ್ತೇಜನ, ವಿದ್ಯಾರ್ಥಿಗಳಲ್ಲಿ ಕೌಶಲ್ಯ ಹಾಗೂ ಸೃಜನಶೀಲತೆಯನ್ನು ಹೆಚ್ಚಿಸಲು ಅಳವಡಿಸಿಕೊಳ್ಳಬೇಕಾದ ವಿಧಾನಗಳ ಬಗ್ಗೆ ಶಿಕ್ಷಕರಿಗೆ ವಸತಿ ತರಬೇತಿ ನೀಡಲು ಎಲ್ಲಾ ಸಿದ್ಧತೆ ಕೈಗೊಳ್ಳಬೇಕೆಂದು ತಿಳಿಸಿದರಲ್ಲದೆ, ಎಸ್.ಎಸ್.ಎಲ್.ಸಿ. ಫಲಿತಾಂಶ ಕಳಪೆ ಮಟ್ಟದಲ್ಲಿರುವ ಅನುದಾನಿತ ಶಾಲೆಗಳನ್ನು ಮುಚ್ಚಿಸಲು ಕ್ರಮಕೈಗೊಳ್ಳಬೇಕು. ಕರ್ತವ್ಯ ನಿರ್ಲಕ್ಷ ತೋರುವ ಶಿಕ್ಷಣ ಇಲಾಖೆ ಅಧಿಕಾರಿ, ಸಿಬ್ಬಂದಿಗಳನ್ನು ಮುಲಾಜಿಲ್ಲದೆ ಅಮಾನತ್ತು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯ ಪಾವಗಡ ತಾಲ್ಲೂಕಿನ ಕೆಲವು ಶಿಕ್ಷಕರು ಶಾಲೆಗಳಿಗೆ ಕುಡಿದು ಬಂದು ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ಪೋಷಕರಿಂದ ದೂರುಗಳು ಬರುತ್ತಿವೆ. ಶಿಕ್ಷಕರು ಮಕ್ಕಳಿಗೆ ಮಾದರಿಯಾಗಿರಬೇಕು. ಶಾಲೆಗೆ ಗೌರವಯುತವಾಗಿ ಆಗಮಿಸಬೇಕು. ಶಾಲೆಯಲ್ಲಿ ಅಶಿಸ್ತು ತೋರುವ ಶಿಕ್ಷಕರ ಪಟ್ಟಿ ಮಾಡಿ ತಮಗೆ ಸಲ್ಲಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಶಾಲೆಯಲ್ಲಿ ಅಶಿಸ್ತು ತೋರುವ ಶಿಕ್ಷಕರನ್ನು ಕಠಿಣ ಕ್ರಮಕ್ಕೆ ಗುರಿ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಲ್ಲಿ ಸುವ್ಯವಸ್ಥೆಯ ಕೊಠಡಿ ಹಾಗೂ ಶೌಚಾಲಯ, ಶಾಲಾ ಆವರಣ ಗೋಡೆ, ಆಟದ ಮೈದಾನ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಅವಶ್ಯವಿರುವ ಕಡೆ ಹೊಸ ಶಾಲಾ ಕೊಠಡಿಯನ್ನು ನಿರ್ಮಾಣ ಮಾಡಬೇಕೆಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ(ತುಮಕೂರು ಹಾಗೂ ಮಧುಗಿರಿ)ರುಗಳಿಗೆ ಸೂಚನೆ ನೀಡಿದರು.

WhatsApp Image 2024 08 30 at 9.39.07 AM

ಜಿಲ್ಲೆಯಲ್ಲಿ ವಿವೇಕ ಯೋಜನೆಯಡಿ ಮಂಜೂರಾಗಿರುವ 360 ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಯನ್ನು 2025ರ ಜನವರಿ ಮಾಹೆಯೊಳಗಾಗಿ ಪೂರ್ಣಗೊಳಿಸಬೇಕು. ಪೂರ್ಣಗೊಳಿಸದೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.

ಆಯಾ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕಾಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ ವಿವೇಕ ಶಾಲೆಗಳ ಕಾಮಗಾರಿ ಗುಣಮಟ್ಟ ಹಾಗೂ ಪ್ರಗತಿಯನ್ನು ಪರಿಶೀಲಿಸಬೇಕು. ಸರ್ಕಾರದಿಂದ ಅನುದಾನ ಒದಗಿಸಿದ್ದರೂ ಮೌಲ್ಯಯುತ ಬಳಕೆ ಮಾಡದೆ ಕೆಲವು ಅಧಿಕಾರಿಗಳು ಬೇಜವಾಬ್ದಾರಿ ತೋರುತ್ತಿದ್ದಾರೆ. ಕೆಲಸ ಮಾಡಲು ಆಸಕ್ತಿ ಇರದ ಅಧಿಕಾರಿಗಳು ಜಿಲ್ಲೆಯಿಂದ ವರ್ಗಾವಣೆಯಾಗಿ ಹೋಗಬೇಕೆಂದು ತಾಕೀತು ಮಾಡಿದರು.

ದಕ್ಷಿಣ ಶೈಕ್ಷಣಿಕ ಜಿಲ್ಲೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮನಮೋಹನ್ ಮಾತನಾಡಿ, 2024-25ನೇ ಸಾಲಿನಲ್ಲಿ ವಿವೇಕ ಯೋಜನೆಯಡಿ ಜಿಲ್ಲೆಯ ಎರಡೂ ಶೈಕ್ಷಣಿಕ ಜಿಲ್ಲೆಗಳಲ್ಲಿ 54.62 ಕೋಟಿ ರೂ. ವೆಚ್ಚದಲ್ಲಿ ಒಟ್ಟು 479 ಹೊಸ ಕೊಠಡಿಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ ಹಾಗೂ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ 953 ಶಾಲಾ ಕೊಠಡಿಗಳ ದುರಸ್ತಿಗಾಗಿ 19.06 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 1161 ಶಾಲೆಗಳಲ್ಲಿ ಆವರಣ ಗೋಡೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಅದೇ ರೀತಿ 874 ಶೌಚಾಲಯ, 945 ಆಟದ ಮೈದಾನಗಳ ಅವಶ್ಯವಿದೆ. ಶಿಥಿಲಾವಸ್ಥೆಯಲ್ಲಿರುವ 1087 ಕೊಠಡಿಗಳನ್ನು ನೆಲಸಮಗೊಳಿಸಲು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರಸ್ತುತ ಜಿಲ್ಲೆಯಲ್ಲಿ 2657 ಪ್ರಾಥಮಿಕ ಹಾಗೂ 196 ಪ್ರೌಢಶಾಲೆಗಳ ಆಸ್ತಿ ನೋಂದಣಿಯಾಗಿದ್ದು, ಉಳಿದಂತೆ 582 ಪ್ರಾಥಮಿಕ ಹಾಗೂ 31 ಪ್ರೌಢಶಾಲೆಗಳ ಆಸ್ತಿಗಳನ್ನು ನೋಂದಣಿ ಮಾಡಬೇಕಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಮಧುಗಿರಿ ಡಿಡಿಪಿಐ ಗಂಗಾಧರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಹಾಲಸಿದ್ಧಪ್ಪ ಪೂಜೇರಿ, ಸಣ್ಣ ಮಸಿಯಪ್ಪ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಿ.ತಿಮ್ಮರಾಯಪ್ಪ, ವಿವಿಧ ತಾಲ್ಲೂಕಿನ ನರೇಗಾ ಯೋಜನೆಯ ಸಹಾಯಕ ನಿರ್ದೇಶಕರು, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರುಗಳು, ಮತ್ತಿತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...