ತುಮಕೂರು | ಸ್ವಚ್ಛತಾ ಹೀ ಸೇವಾ-2025 ಅಭಿಯಾನ’ಕ್ಕೆ ಸಿಇಒ ಚಾಲನೆ

Date:

ತುಮಕೂರು ತಾಲ್ಲೂಕು ಹೆತ್ತೇನಹಳ್ಳಿ ಗ್ರಾಮ ಪಂಚಾಯಿತಿ ಕೈದಾಳ ಗ್ರಾಮದ ಶ್ರೀ ಚೆನ್ನಕೇಶವ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ‘ಸ್ವಚ್ಛತಾ ಹೀ ಸೇವಾ-2025 ಅಭಿಯಾನ’ಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ. ಚಾಲನೆ ನೀಡಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ನಾಗರಿಕತೆಗಳ ಕಾಲದಿಂದಲೂ ನಮ್ಮ ದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತಿದೆ. ಹಸಿ ಕಸ, ಒಣ ಕಸ ವಿಂಗಡಣೆ ಮಾಡಿ ಸ್ವಚ್ಛತಾ ವಾಹಿನಿಗೆ ನೀಡುವ ಮೂಲಕ ಸ್ವಚ್ಛತೆ ಕಾಪಾಡಿಕೊಳ್ಳುವ ಕುರಿತು ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದರು.

1002066328

ಸ್ವಚ್ಛ ಪರಿಸರವನ್ನು ನಿರ್ಮಿಸುವ ನಿಟ್ಟಿನಲ್ಲಿ ಅನೈರ್ಮಲ್ಯ ನಿವಾರಣೆಗಾಗಿ ಸರ್ಕಾರದಿಂದ ಸುಮಾರು 4.5 ಲಕ್ಷ ಕೋಟಿ ರೂ. ಗಳನ್ನು ಖರ್ಚು ಮಾಡಲಾಗುತ್ತಿದೆ. ಪ್ರತಿ ಹಳ್ಳಿಗಳಲ್ಲಿ ಸ್ವಚ್ಛತಾಗಾರರು, ಸ್ವಸಹಾಯ ಸಂಘದ ಮಹಿಳೆಯರು ಸ್ವಚ್ಛತೆ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಸ್ವಚ್ಛತಾ ಕಾರ್ಯವನ್ನು ನಿರ್ವಹಿಸುವ ಪೌರಕಾರ್ಮಿಕರ ಸೇವೆ ನಿಜವಾದ ದೇಶ ಸೇವೆ. ಪ್ರತಿಯೊಬ್ಬರೂ ತಮ್ಮ ಸುತ್ತ ಮುತ್ತಲಿನ ವಾತಾವರಣವನ್ನು ಸುಂದರವಾಗಿ, ಸ್ವಚ್ಛವಾಗಿಟ್ಟುಕೊಂಡರೆ ನಮ್ಮ ದೇಶವೂ ಸುಂದರವಾಗಿರುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002066327

ಸ್ವಚ್ಛತೆ ನಿರ್ವಹಣೆಯಲ್ಲಿ ಕಳೆದ ಬಾರಿ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಗ್ರಾಮ ಪಂಚಾಯಿತಿಯು ಮಾದರಿ ಗ್ರಾಮ ಪಂಚಾಯಿತಿ ಪ್ರಶಸ್ತಿಗೆ ಭಾಜನವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀನಾರಾಯಣ ಸ್ವಾಮಿ ಸ್ವಚ್ಛತೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಸಹಾಯಕ ನಿರ್ದೇಶಕ(ಗ್ರಾ.ಉ) ಎಸ್.ಎಸ್. ಮಂಜುನಾಥ, ಗ್ರಾಮ ಪಂಚಾಯತಿ ಅಧ್ಯಕ್ಷೆ ಧನಲಕ್ಷ್ಮೀ ಹಾಗೂ ಮಾಜಿ ಉಪಾಧ್ಯಕ್ಷ ಉಮಾ ಶಂಕರ್, ಚುನಾಯಿತ ಸದಸ್ಯರು 41 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿ ಭಾಗಿಯಾಗಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...