ತುಮಕೂರು | ಊರಾಚೆ ಗುಡಿಸಲಲ್ಲಿ ಮಗು ಸಾವು ಪ್ರಕರಣ; ಮೂವರ ವಿರುದ್ಧ ಪ್ರಕರಣ ದಾಖಲು

Date:

ಸೂತಕ-ಸಂಪ್ರದಾಯದ ಹೆಸರಿನಲ್ಲಿ ಹೆರಿಗೆ ನಂತರ ಬಾಣಂತಿ ಮತ್ತು ನವಜಾತ ಶಿಶುವನ್ನು ಊರಾಚೆಯ ಗುಡಿಸಲಲ್ಲಿ ಇಟ್ಟು ಮೌಢ್ಯ ಆಚರಣೆ ಮಾಡಿದ್ದ ಆರೋಪದ ಮೇಲೆ ಬಾಣಂತಿಯ ತಂದೆ, ತಾಯಿ ಮತ್ತು ಗಂಡನ ವಿರುದ್ಧ ಕೋರಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ಹೈಕೋರ್ಟ್‌ ನಿರ್ದೇಶನದ ಮೇರೆಗೆ ತುಮಕೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶೆ ನೂರುನ್ನಿಸಾ ಅವರು ಅಧಿಕಾರಿಗಳ ತಂಡದೊಂದಿಗೆ ಮಲ್ಲೇನಹಳ್ಳಿ ಗೊಲ್ಲರಹಟ್ಟಿ ಗುಡಿಸಲಿಗೆ ಗುರುವಾರ ಭೇಟಿ ನೀಡಿದ್ದರು.

ಕೋಳಿಗೂಡಿನಂತಹ ಪುಟ್ಟ ಗುಡಿಸಲಲ್ಲಿ ಇರಿಸಲಾಗಿದ್ದ ಬಾಣಂತಿ ಅಪೌಷ್ಟಿಕತೆಯಿಂದ ಬಳಲುತ್ತಿರುವುದನ್ನು ಕಂಡು ಕಿಡಿಕಾರಿದ ಅವರು ನವಜಾತ ಶಿಶುವಿನ ಸಾವಿಗೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಸಮ್ಮುಖದಲ್ಲಿಯೇ ಗುಡಿಸಲು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಗುಡಿಸಲು ತೆರವುಗೊಳಿಸಿದ ಬಳಿಕ ಬಾಣಂತಿಯನ್ನು ಗೊಲ್ಲರಹಟ್ಟಿಯ ಆಕೆಯ ಮನೆಗೆ ಕರೆದೊಯ್ಯುವ ಶಾಸ್ತ್ರ ಮುಗಿಸಲಾಯಿತು.

ಅಧಿಕಾರಿಗಳ ತಂಡದೊಂದಿಗೆ ಗೊಲ್ಲರಹಟ್ಟಿಗೆ ತೆರಳಿದ ನ್ಯಾಯಾಧೀಶೆ, ಆಂಬುಲೆನ್ಸ್‌ ತರಿಸಿ ಬಾಣಂತಿಯನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಕಳಿಸಿಕೊಟ್ಟಿದ್ದು, ಆಕೆ ಗುಣಮುಖವಾಗುವವರಗೂ ಸೂಕ್ತ ಚಿಕಿತ್ಸೆ ನೀಡಿ ಆರೈಕೆ ಮಾಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಮಗು ಸತ್ತರೂ ಊರಾಚೆಯೇ ಉಳಿದಿದ್ದ ತಾಯಿ; ಮನೆಗೆ ಸೇರಿಸಿದ ನ್ಯಾಯಾಧೀಶೆ

ಗೊಲ್ಲರಹಟ್ಟಿಯ ಶಾಲೆಯ ಆವರಣದಲ್ಲಿ ಅಧಿಕಾರಿಗಳು, ಗೊಲ್ಲ ಸಮುದಾಯದ ಜನರು ಮತ್ತು ಮುಖಂಡರ ಸಭೆ ನಡೆಸಿದರು. ಸಂಪ್ರದಾಯದ ಹೆಸರಲ್ಲಿ ಮೌಢ್ಯಚಾರಣೆ ನಿಲ್ಲಿಸುವಂತೆ ತಿಳಿ ಹೇಳಿದರು.

“ಸಂಪ್ರದಾಯದ ಹೆಸರಲ್ಲಿ ಪಾಲಿಸುತ್ತಿರುವ ಮೌಢ್ಯ ತೊರೆಯುವಂತೆ ಸಮುದಾಯದವರಿಗೆ ಹೇಳಿದರೆ ನಮಗೇ ಬೆದರಿಕೆ ಹಾಕುತ್ತಾರೆ” ಎಂದು ಅಧಿಕಾರಿಗಳು ಅವಲತ್ತುಕೊಂಡರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...