ತುಮಕೂರು | ಸಹಕಾರ ಸಚಿವ ಕೆ.ಎನ್.ರಾಜಣ್ಣ ಅಮೃತ ಮಹೋತ್ಸವ ಕಾರ್ಯಕ್ರಮ ಮುಂದೂಡಿಕೆ : ಆರ್.ರಾಜೇಂದ್ರ

Date:

ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಅಭಿಮಾನಿಗಳು, ಹಿತೈಷಿಗಳು, ಸಹಕಾರ ಕ್ಷೇತ್ರದ ಜನರು ಕೆ.ಎನ್.ಆರ್‌ಅವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.13 ರಂದು ಆಯೋಜಿಸಿದ್ದ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭವನ್ನು,ದೇಶದಲ್ಲಿ ಯುದ್ದದ ಕಾರ್ಮೋಡ ಕವಿದಿರುವ ಹಿನ್ನೆಲೆಯಲ್ಲಿ ಭಾರತದ ಸೈನಿಕರಿಗೆ ಬೆಂಬಲವಾಗಿ ನಿಲ್ಲುವ ಉದ್ದೇಶದಿಂದ ಮುಂದೂಡಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ತಿಳಿಸಿದ್ದಾರೆ.

ತುಮಕೂರು ನಗರದಲ್ಲಿ  ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯ ಪ್ರತಿಕಾರವಾಗಿ ಭಾರತ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿರುವುದು ಪಾಕಿಸ್ಥಾನ ಮತ್ತು ಭಾರತದ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಎರಡು ದೇಶಗಳ ನಡುವೆ ನಡೆಯುತ್ತಿರುವ ಕ್ಷಿಪಣಿ ಮತ್ತು ಯುದ್ಧ ವಿಮಾನಗಳ ಶೆಲ್ ದಾಳಿಯಿಂದ ಉಗ್ರರ ನೆಲೆಗಳು ದ್ವಂಶಗೊಂಡಿವೆ. ಇಂತಹ ಸಂದರ್ಭದಲ್ಲಿ ಭಾರತೀಯರೆಲ್ಲರೂ ಸೈನಿಕರೊಂದಿಗೆ ನಿಲ್ಲಬೇಕಾಗಿದೆ. ಹಾಗಾಗಿ ಮೇ.13ರ ಕಾರ್ಯಕ್ರಮವನ್ನು ಮುಂದೂಡಿದ್ದು,ದೇಶದಲ್ಲಿ ವಾತಾವರಣ ತಿಳಿಗೊಂಡ ನಂತರ ಕಾರ್ಯಕ್ರಮದ ಮುಂದಿನ ದಿನಾಂಕವನ್ನು ಅಭಿನಂದನಾ ಸಮಿತಿ ತಿಳಿಸಲಿದೆ ಎಂದರು.

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾಧಕರು ದಾಳಿ ನಡೆಸಿದ್ದಾರೆ.ಭಯೋತ್ಪಾಧಕರಿಗೆ ಜಾತಿ, ಧರ್ಮ ಎಂಬುದು ಇಲ್ಲ.ಹಾಗಾಗಿ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಹೀಯಾಳಿಸುವುದು ತರವಲ್ಲ.ಈ ಹಿಂದೆ ರಾಷ್ಟçಪಿತ ಮಹಾತ್ಮಗಾಂಧಿ ಅವರನ್ನು ಕೊಂದಿದ್ದು ಸಹ ಓರ್ವ ವ್ಯಕ್ತಿ, ಆದರೆ ಅಂದು ಕೊಲೆ ಮಾಡಿದ ವ್ಯಕ್ತಿಯನ್ನು ಮಾತ್ರ ಅಪರಾದಿ ಎಂದು ತೀರ್ಮಾನಿಸಲಾಯಿತೇ ಹೊರತು, ಆತನ ಧರ್ಮ ಮತ್ತು ಸಮುದಾಯವನ್ನಲ್ಲ. ಇಂದಿರಾಗಾಂಧಿ ಅವರಿಗೆ ಅವರ ಅಂಗರಕ್ಷಕರೇ ಗುಂಡಿಟ್ಟುಕೊಂದಾಗ, ಗುಂಡಿಟ್ಟ ವ್ಯಕ್ತಿಗಳ ಸಮುದಾಯವನ್ನು ಅಪರಾಧಿ ಎಂಬಂತೆ ಜನತೆ ನಡೆದುಕೊಳ್ಳಲಿಲ್ಲ. ಈ ಘಟನೆಯಲ್ಲಿಯೂ ಒಂದು ಸಮುದಾಯವನ್ನು ಗುರಿಯಾಗಿಸುವುದು ಭಾರತದಂತಹ ಬಹುಸಂಸ್ಕೃತಿಯ ನಾಡಿಗೆ ತರವಲ್ಲ ಎಂದು ಆರ್.ರಾಜೇಂದ್ರ ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇ.13 ರಂದು ಕೆ.ಎನ್.ಆರ್. ಅವರ 75ನೇ ವರ್ಷದ ಅಮೃತಮಹೋತ್ಸವ ಮತ್ತು ಅಭಿನಂದನಾ ಗ್ರಂಥ ಬಿಡುಗಡೆಗೆ ಸಕಲ ಸಿದ್ದತೆಗಳನ್ನು ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದಿತ್ತು. ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು 1.50 ಲಕ್ಷ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇತ್ತು.ಅದಕ್ಕಾಗಿ ಎಲ್ಲಾ ಸಿದ್ದತೆಗಳನ್ನು ಅಭಿನಂದನಾ ಸಮಿತಿ ಮತ್ತು ಕೆ.ಎನ್.ಆರ್.ಅಭಿಮಾನಿಗಳು, ಹಿತೈಷಿಗಳು ಮಾಡಿಕೊಂಡಿದ್ದರು.ಆದರೆ ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದಾಗ,ಇಂತಹ ಅದ್ದೂರಿಯ ಕಾರ್ಯಕ್ರಮ ಮಾಡಿದರೆ ಅದು ಜನರಿಗೆ ಬೇರೆಯದೆ ಸಂದೇಶ ನೀಡಿದಂತಾಗುತ್ತದೆ. ಹಾಗಾಗಿ ಪರಿಸ್ಥಿತಿ ತಿಳಿಯಾಗುವವರೆಗೂ ಕಾಯ್ದು, ತದನಂತರ ಕಾರ್ಯಕ್ರಮ ಮಾಡುವುದಾಗಿ ಮುಖ್ಯಮಂತ್ರಿಗಳಿಗೆ, ಉಪಮುಖ್ಯಮಂತ್ರಿಗಳಿಗೆ ಹಾಗೂ ಕರ್ನಾಟಕ ಸರಕಾರ ಸಚಿವ ಸಂಪುಟದ ಸಹೋದ್ಯಗಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೆವೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರುಗಳು ಒಪ್ಪಿಗೆ ಸೂಚಿಸಿದ್ದಾರೆ ಎಂದು ಆರ್.ರಾಜೇಂದ್ರ ತಿಳಿಸಿದರು. 

ಅಭಿನಂದನಾ ಸಮಿತಿ ಅಧ್ಯಕ್ಷರಾದ ಪತ್ರಕರ್ತ ಎಸ್.ನಾಗಣ್ಣ ಮಾತನಾಡಿ,ಸುಮಾರು 600 ಪುಟುಗಳ ಎರಡು ಸಂಪುಟಗಳನ್ನು ಒಳಗೊಂಡಂತೆ ಸಹಕಾರ ಸಚಿವ ಸಮಗ್ರ ಜೀವನ ಮತ್ತು ಸಾಧನೆಯನ್ನು ಒಳಗೊಂಡ ಅಭಿನಂದನಾ ಗ್ರಂಥ ಮುದ್ರಣ ಆರಂಭವಾಗಿತ್ತು. ಆದರೆ ದೇಶದಲ್ಲಿ ಪಾಕಿಸ್ಥಾನ ಮತ್ತು ಭಾರತದ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಮೇ.13 ರ ಕಾರ್ಯಕ್ರಮ ಮುಂದೂಡಲಾಗಿದೆ.ಮುಂದಿನ ದಿನಗಳಲ್ಲಿಯೂ ಇಷ್ಟೇ ಆಸಕ್ತಿಯಿಂದ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಅಭಿನಂದನಾ ಸಮಿತಿ ಮುರುಳೀ ಕೃಷ್ಣಪ್ಪ, ಎನ್.ಗೋವಿಂದರಾಜು, ಗಂಗಣ್ಣ, ಕೆ.ಎ.ದೇವರಾಜು, ಧನಿಯಕುಮಾರ್, ಲಕ್ಷಿö್ಮನಾರಾಯಣ್, ಕೊಟ್ಟ ಶಂಕರ್, ಪಿ.ಮೂರ್ತಿ, ಡ್ಯಾಗೇರಹಳ್ಳಿ ವಿರೂಪಾಕ್ಷ, ನಾರಾಯಣಗೌಡ, ಟಿ.ಪಿ.ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...