ತುಮಕೂರು | ಕಂದಾಯ ಶಾಖೆಗೆ ಜಿಲ್ಲಾಧಿಕಾರಿ ಭೇಟಿ; ಕಾಲಮಿತಿಯೊಳಗೆ ಸೇವೆ ನೀಡಲು ಸೂಚನೆ

Date:

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಕಂದಾಯ ಶಾಖೆಗೆ ಇಂದು (ಫೆ.26) ಭೇಟಿ ನೀಡಿ ಸಾರ್ವಜನಿಕರಿಗೆ ಕಾಲಮಿತಿಯೊಳಗೆ ಸೇವೆ ನೀಡಬೇಕೆಂದು ವಿಷಯ ನಿರ್ವಾಹಕ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಕಸಬಾ ಪಶ್ಚಿಮ ಹೋಬಳಿ ಹೆಗ್ಗೆರೆ ಕಂದಾಯ ವೃತ್ತ ವ್ಯಾಪ್ತಿಯ ನಿವಾಸಿ ಇರ್ಫಾನ್ ಎಂಬುವವರು ತಮ್ಮ ಕುಟುಂಬ ಸದಸ್ಯರೊಬ್ಬರ ಮರಣ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿ ತಿಂಗಳು ಕಳೆದರೂ ಇದುವರೆಗೂ ಪ್ರಮಾಣ ಪತ್ರ ನನ್ನ ಕೈಗೆ ಸಿಕ್ಕಿಲ್ಲವೆಂದು ಜಿಲ್ಲಾಧಿಕಾರಿಗಳಿಗೆ ಖುದ್ದು ದೂರು ನೀಡಿದ ಮೇರೆಗೆ ಜಿಲ್ಲಾಧಿಕಾರಿಗಳು ಕಂದಾಯ ಶಾಖೆಗೆ ಭೇಟಿ ನೀಡಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಈ ದಿನವೇ ಅರ್ಜಿಯನ್ನು ವಿಲೇವಾರಿ ಮಾಡಿ ಅರ್ಜಿದಾರರಿಗೆ ಮರಣ ಪ್ರಮಾಣ ಪತ್ರ ನೀಡಬೇಕೆಂದು ತಾಕೀತು ಮಾಡಿದರು.

ಇದೇ ರೀತಿ ಸಾರ್ವಜನಿಕರಿಗೆ ನಿಗಧಿತ ಅವಧಿಯೊಳಗೆ ಸೇವೆ ನೀಡದೆ ಸತಾಯಿಸುವ ಅಧಿಕಾರಿ, ನೌಕರರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು.  ಕಂದಾಯ ಸೇವೆ, ಆದಾಯ ಪ್ರಮಾಣಪತ್ರ, ಪಿಂಚಣಿ, ಜನನ ಮತ್ತು ಮರಣ ಪ್ರಮಾಣ ಪತ್ರ, ವಿಧವಾ ವೇತನ, ಮತ್ತಿತರ ಸೇವೆಗಳನ್ನು ವಿಳಂಬ ಮಾಡದೆ ಸಾರ್ವಜನಿಕರಿಗೆ ಒದಗಿಸಬೇಕೆಂದು ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ   ವಿಷಯ ನಿರ್ವಾಹಕ ರಾಕೇಶ್, ಹೆಗ್ಗೆರೆ ಗ್ರಾಮಾಡಳಿತ ಅಧಿಕಾರಿ ಮಂಜುನಾಥ, ಕಂದಾಯ ನಿರೀಕ್ಷಕರುಗಳಾದ ರಾಘವೇಂದ್ರ ಹಾಗೂ ಅಜಯ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...