ತುಮಕೂರಿಗೆ ಹೆಚ್ಚುವರಿ ರೈಲು ಸಂಚಾರಕ್ಕೆ ಆಗ್ರಹಿಸಿ ಕೇಂದ್ರ ಸಚಿವ ವಿ ಸೋಮಣ್ಣಗೆ ಮನವಿ

Date:

ಬೆಂಗಳೂರಿನಿಂದ ತುಮಕೂರು-ಅರಸೀಕೆರೆ ಮಾರ್ಗದಲ್ಲಿ ಹೆಚ್ಚುವರಿ ರೈಲುಗಳು ಸಂಚರಿಸುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರಯಾಣಿಕರು ಕೇಂದ್ರ ಸಚಿವ ವಿ ಸೋಮಣ್ಣ ಅವರಿಗೆ ಮನವಿ ಮಾಡಿದ್ದಾರೆ.

ರೈಲಿನಲ್ಲಿ ಪ್ರಯಾಣಿಕರಿಂದ ದಟ್ಟಣೆ ಉಂಟಾಗಿರುವ ಫೋಟೋಗಳ ಮೂಲಕ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅವರ ಗಮನ ಸೆಳೆಯಲು ಪ್ರಯಾಣಿಕರು ಮುಂದಾಗಿದ್ದಾರೆ.

“ಬೆಂಗಳೂರಿನಿಂದ ತುಮಕೂರಿಗೆ ಸಂಜೆ ವೇಳೆ ಚಲಿಸುವ ವಿಶೇಷ ಪ್ಯಾಸೆಂಜರ್ ಹಾಗೂ ಗೋಲ್‌ಗುಂಬಸ್ ರೈಲುಗಳಲ್ಲಿ ನಿಲ್ಲಲು ಜಾಗವಿಲ್ಲದೆ ಪ್ರಯಾಣಿಕರು ಹೈರಾಣಾಗುತ್ತಿದ್ದು, ಹೆಚ್ಚುವರಿ ಜನರಲ್ ಬೋಗಿಗಳು ಅಥವಾ ಹೆಚ್ಚುವರಿ ರೈಲುಗಳ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕು. ಅರಸೀಕೆರೆ, ತಿಪಟೂರು, ಗುಬ್ಬಿ, ತುಮಕೂರು ಸೇರಿದಂತೆ ಈ ಭಾಗದ ವಿವಿಧೆಡೆಗಳಿಂದ ಸಾವಿರಾರು ಮಂದಿ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ, ವ್ಯಾಪಾರ-ವ್ಯವಹಾರ ಸೇರಿದಂತೆ ಹಲವು ಉದ್ದೇಶಗಳಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸಚಿವ ವಿ ಸೋಮಣ್ಣ

“ಕೆಲ ಎಕ್ಸ್‌ಪ್ರೆಸ್‌ ರೈಲುಗಳು ನಿರ್ಧಿಷ್ಟ ನಿಲ್ದಾಣಗಳಲ್ಲಿ ನಿಲುಗಡೆ ಮಾಡುವುದನ್ನು ಬಿಟ್ಟರೆ ಉಳಿಡೆದೆ ನಿಲ್ಲಿಸುವುದಿಲ್ಲ. ಹಾಗಾಗಿ ಪ್ಯಾಸೆಂಜರ್ ರೈಲಿಗೆ ಬಹಳ ಬೇಡಿಕೆ ಇದೆ. ಈ ಪ್ಯಾಸೆಂಜರ್‌ ರೈಲಿನಲ್ಲಿ ನಿತ್ಯ ಸಾವಿರಾರು ಪ್ರಯಾಣಿಕರು ಪ್ರಯಾಣಿಸುತ್ತಾರೆ. ಆದರೆ ಈ ರೈಲಿನ ಬೋಗಿಗಳಲ್ಲಿ ಜನ ನಿಲ್ಲಲು ಜಾಗ ಇಲ್ಲದಷ್ಟರ ಮಟ್ಟಿಗೆ ಪ್ರಯಾಣಿಕರು ತುಂಬಿರುತ್ತಾರೆ. ಒಮ್ಮೊಮ್ಮೆ ಬೋಗಿಗಳಲ್ಲಿ ಉಸಿರಾಡಲೂ ಜಾಗ ಇರುವುದಿಲ್ಲ” ಎಂದು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ರೈಲುಗಳಲ್ಲಿ ಉಸಿರುಗಟ್ಟಿ ಪ್ರಯಾಣಿಸಬೇಕಾದ ವಾತಾವರಣ ಸೃಷ್ಟಿಯಾಗಿರುತ್ತದೆ. ಅದರಲ್ಲೂ ಬೆಳಿಗ್ಗೆ ಮತ್ತು ಸಂಜೆ ವೇಳೆ ವೃದ್ಧರು, ಮಕ್ಕಳು, ಮಹಿಳೆಯರು ರೈಲುಗಾಡಿಗಳಲ್ಲಿ ಪ್ರಯಾಣಿಸುವುದು ಬಹಳ ದುಸ್ತರವಾಗಿದೆ. ಹಾಗಾಗಿ ಈ ಬಗ್ಗೆ ರೈಲ್ವೆ ಅಧಿಕಾರಿಗಳು ಹಾಗೂ ಸಚಿವ ವಿ ಸೋಮಣ್ಣ ಅವರು ಈ ಬಗ್ಗೆ ಗಮನಹರಿಸಿ ಬೆಳಿಗ್ಗೆ ಮತ್ತು ಸಂಜೆ ವೇಳೆಯಲ್ಲಿ ಹೆಚ್ಚುವರಿ ರೈಲುಗಳು ಸಂಚರಿಸುವಂತೆ  ಕ್ರಮ ಕೈಗೊಳ್ಳಬೇಕು” ಎಂದು ಪ್ರಯಾಣಿಕರು ಮನವಿ ಮಾಡಿದ್ದಾರೆ.

ಕೇಂದ್ರ ಸಚಿವ ವಿ ಸೋಮಣ್ಣಗೆ ಮನವಿ

“ಸಂಜೆ 6.20ಕ್ಕೆ ಮೆಜೆಸ್ಟಿಕ್‌ನಿಂದ ವಿಶೇಷ ಪ್ಯಾಸೆಂಜರ್ ರೈಲು ಹೊರಡಲಿದೆ. ಹಾಗೆಯೇ ಸಂಜೆ 6.40ಕ್ಕೆ ಗೋಲ್‌ಗುಂಬಸ್ ಎಕ್ಸ್‌ಪ್ರೆಸ್‌ ರೈಲು ಹೊರಡುತ್ತದೆ. ಈ ಅವಧಿಯಲ್ಲಿ ರಾಜಧಾನಿ ಬೆಂಗಳೂರಿಗೆ ವಿವಿಧ ಉದ್ದೇಶಗಳಿಗಾಗಿ ತೆರಳಿದ್ದ ಜನರು ತಮ್ಮ ತಮ್ಮ ಊರುಗಳಿಗೆ ಹೋಗಲು ತುದಿಗಾಲಲ್ಲಿ ನಿಂತಿರುತ್ತಾರೆ. ಈ ಎರಡೂ ರೈಲುಗಾಡಿಗಳ ಬೋಗಿಗಳಲ್ಲಿ ಜನ ನಿಲ್ಲಲು ಜಾಗ ಇಲ್ಲದೆ ಹೈರಾಣಾಗುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಇದು ಒಂದು-ಎರಡು ದಿನದ ಕಥೆಯಲ್ಲ, ವರ್ಷೊಂಬತ್ಕಾಲ ಇದೇ ಪರಿಸ್ಥಿತಿಯಲ್ಲಿ ಜನರು ಪ್ರಯಾಣಿಸಬೇಕಾಗಿದೆ. ಪ್ರಯಾಣಿಕರ ಸುರಕ್ಷತೆ ಬಗ್ಗೆ ಯಾವೊಬ್ಬ ಅಧಿಕಾರಿಗಳೂ ಕೂಡ ಗಮನಹರಿಸುತ್ತಿಲ್ಲ” ಎಂದು ಪ್ರಯಾಣಿಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

“ಗೋಲ್‌ಗುಂಬಸ್ ರೈಲಿನಲ್ಲಿ ಎರಡು ಅಥವಾ ಮೂರು ಮಾತ್ರ ಜನರಲ್ ಬೋಗಿಗಳು ಇರುತ್ತವೆ. ಉಳಿದಂತೆ ರಿಸರ್ವ್ ಬೋಗಿಗಳು ಇವೆ. ಈ ರೈಲಿಗೆ ಟಿಕೆಟ್ ಪಡೆದಿರುವ ಮತ್ತು ಪಾಸ್ ಹೊಂದಿರುವ ಪ್ರಯಾಣಿಕರೂ ಬರುತ್ತಾರೆ. ಆಗ ಇರುವ 2-3 ಜನರಲ್ ಬೋಗಿಯಲ್ಲಿ ಕಾಲಿಡಲು ಸಹ ಜಾಗ ಇಲ್ಲದೇ ಪರದಾಡುವಂತಹ ವಾತಾವರಣ ಸೃಷ್ಟಿಯಾಗುತ್ತಲೇ ಇರುತ್ತದೆ. ಈ ಬಗ್ಗೆ ರೈಲ್ವೆ ಟಿ ಸಿಗಳು ಗಮನ ಹರಿಸುವುದಿಲ್ಲ. ಜತೆಗೆ ಪ್ರಯಾಣಿಕರೊಂದಿಗೆ ಸೌಜನ್ಯವಾಗಿ ವರ್ತಿಸಿ ಮಾಹಿತಿ ನೀಡುವುದಿಲ್ಲ. ಇದರಿಂದ ಪಾಸ್ ಹೊಂದಿರುವವರು ಹಾಗೂ ಟಿಕೆಟ್ ಪಡೆದು ಪ್ರಯಾಣಿಸುವ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ” ಎಂದು ಪ್ರಯಾಣಿಕರು ದೂರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ವಿದ್ಯಾರ್ಥಿಗಳು ಹಕ್ಕಿಗಾಗಿ ಹೋರಾಡಲು ಸಂಘಟಿತರಾಗಬೇಕು: ಎಸ್ಎಫ್ಐ ರಾಜ್ಯಾಧ್ಯಕ್ಷ ಅಮರೇಶ್

“ಗೋಲ್‌ಗುಂಬಸ್ ರೈಲಿನಲ್ಲಿ ಇನ್ನೂ ಹೆಚ್ಚುವರಿ ಜನರಲ್ ಬೋಗಿಗಳನ್ನು ಅಳವಡಿಸಿದರೆ ನಿತ್ಯವೂ ಪ್ರಯಾಣಿಸುವ ಪ್ರಯಾಣಿಕರಿಗೆ ತುಂಬಾ ಅನುಕೂಲವಾಗಲಿದೆ. ಈ ಬಗ್ಗೆಯೂ ಸಚಿವರು ಗಮನಹರಿಸಿ ಕ್ರಮ ಕೈಗೊಳ್ಳಬೇಕು” ಎಂದು ಪ್ರಯಾಣಿಕರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...