ತುಮಕೂರು | ಸಿದ್ದರಾಮಯ್ಯನವರನ್ನು ಅಂಬೇಡ್ಕರ್‌ಗೆ ಹೋಲಿಸಿರುವುದು ಸ್ವೀಕಾರಾರ್ಹವಲ್ಲ : ಹೆತ್ತೇನಹಳ್ಳಿ ಮಂಜುನಾಥ್ ಆಕ್ಷೇಪ

Date:

 ಒಳಮೀಸಲಾತಿ ಜಾರಿಗೊಳಸಿದರೆ ನನಗೆ ಯಾವ ವಿಧಾನಪರಿಷತ್ ಹಾಗೂ ಸಚಿವ ಸ್ಥಾನವೂ ಬೇಡ, ಒಳ ಮೀಸಲಾತಿ ಜಾರಿ‌ಮಾಡಿದರೆ ನನಗೇ ಅದೇ ದೊಡ್ಡ ಸ್ಥಾನ ಮಾನ ನೀಡಿದಂತೆ ಎನ್ನುವ ಮೂಲಕ ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಎಚ್.ಆಂಜನೇಯ ಅವರು ಸಮುದಾಯ ಕಾಳಜಿ ಮೆರೆದಿರುವುದು ಸ್ವಾಗತಾರ್ಹ ಎಂದು ಮಂಜುನಾಥ್ ಹೆತ್ತೇನಹಳ್ಳಿ ಪ್ರತಿಕ್ರಿಯಿಸಿದರು. 

ತುಮಕೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ  ಮಾತನಾಡಿದ ಮಂಜುನಾಥ್, ಸ್ಥಾನ ಮಾನಗಳು ಅಥವ ಅವಕಾಶಗಳನ್ನು ಪಡೆಯುವ ಸಂದರ್ಭ ಬಂದಾಗ ಸ್ವಜಾತಿಗಳಲ್ಲೇ ಭಿನ್ನಾಭಿಪ್ರಾಯ, ಅವಕಾಶವಾದಿತನ ಮುನ್ನೆಲೆಗೆ ಬರುತ್ತವೆ. ಆದರೆ ಆಂಜನೇಯ ಅವರು ಈ ಆರೋಪಕ್ಕೆ ಅಪವಾದವಾಗಿ ನಿಲ್ಲುತ್ತಾರೆ‌ ಹಾಗೂ ತಮ್ಮ ನಿಸ್ವಾರ್ಥ ನಿಲುವಿನ ಮೂಲಕ ಸಮುದಾಯ ಕಾಳಜಿ ವಹಿಸಿ ಮುಂದಿನ ಪೀಳಿಗೆಗೆ ಮಾದರಿಯಾಗಿ ನಿಲ್ಲುತ್ತಾರೆ. ಅದಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಎರಡನೇ ಅಂಬೇಡ್ಕರ್ ಎಂದು ಹೇಳಿರುವುದು ಉತ್ಪ್ರೇಕ್ಷೆಯಲ್ಲದೆ ಬೇರೇನೂ ಅಲ್ಲ. ಸಿದ್ದರಾಮಯ್ಯನವರು ಅಂಬೇಡ್ಕರ್ ಅನುಯಾಯಿ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ಅವರನ್ನೇ ಬಾಬಾ ಸಾಹೇಬರಿಗೆ ಹೋಲಿಸುವುದು ತರ್ಕಕ್ಕೆ ನಿಲುಕದ್ದು, ಸ್ವೀಕರಿಸಲು ಅನರ್ಹವಾದದ್ದು ಎಂಬ ಸೂಕ್ಷ್ಮ ವಿಷಯ ಮಾಜಿ ಸಚಿವರಿಗೆ ಇರಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರದಿ – ಹರೀಶ್ ಕಮ್ಮನಕೋಟೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...