ತುಮಕೂರು | ಬೆಂಚಗೆರೆ ರೈಲ್ವೇ ಗೇಟ್ ಬಳಿ ಸೇತುವೆ ನಿರ್ಮಾಣ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

Date:

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಂಗಳವಾರ ಜಿಲ್ಲೆಯ ಗುಬ್ಬಿ ಪಟ್ಟಣದ ಬೆಂಚಗೆರೆ ರೈಲ್ವೇ ಗೇಟ್ ಬಳಿ ನಿರ್ಮಾಣ ಮಾಡಲು ಉದ್ದೇಶಿಸಿರುವ ರೈಲ್ವೆ ಮೇಲ್ಸೇತುವೆ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.  

 ರೈಲು ಚಲಿಸುವಾಗ ರೈಲ್ವೆ ಗೇಟ್ ಮುಚ್ಚುವುದರಿಂದ ಸುಮಾರು 2 ಕಿ.ಮೀ.ನಷ್ಟು ವಾಹನ ದಟ್ಟಣೆ ಉಂಟಾಗಿ ವಾಹನ ಸಂಚಾರ ಸಮಸ್ಯೆ ಎದುರಾಗಿದೆ ಎಂದು ಸ್ಥಳೀಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ತ್ವರಿತವಾಗಿ ಸೇತುವೆ ನಿರ್ಮಾಣ ಪ್ರಾರಂಭವಾಗಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.  

1001160323

ಜನರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದ ಸೇತುವೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಸೇತುವೆ ನಿರ್ಮಾಣಕ್ಕಾಗಿ ಒಟ್ಟು 1.6 ಎಕರೆ ಭೂಸ್ವಾಧೀನ ಅಗತ್ಯವಿದ್ದು, ಆದಷ್ಟು ಬೇಗ ಭೂಸ್ವಾಧೀನಪಡಿಸಿಕೊಂಡು ಭೂಮಾಲೀಕರಿಗೆ ಪರಿಹಾರ ನೀಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.   

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶೀಘ್ರ ಭೂಸ್ವಾಧೀನ ಪ್ರಕ್ರಿಯೆ ಮುಗಿಸಿ, ಕಾಮಗಾರಿಗೆ ಅನುಮೋದನೆ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಥಳೀಯರಿಗೆ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿ ರೇಣುಕಾ ಪ್ರಸಾದ್ ಜಂಬಗಿ, ಭೂಮಾಪನ ಮೇಲ್ವಿಚಾರಕ ಕೃಷ್ಣ ಕುಮಾರ್, ಗುಬ್ಬಿ ತಾಲೂಕಿನ ತಹಶೀಲ್ದಾರ್ ಆರತಿ ಬಿ., ರೈಲ್ವೆ ಕಾರ್ಯನಿರ್ವಾಹಕ ಎಂಜಿನಿಯರ್ ಜಗದೀಶ್ ಸಾಯಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...