ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿ ಆಡಳಿತ ನಡೆಸುತ್ತಿದೆ. ಹಾಗಾಗಿ ದಲಿತ ಮುಖ್ಯಮಂತ್ರಿ ಬಗ್ಗೆ ಮಾತನಾಡುವುದು ಅಷ್ಟೊಂದು ಪ್ರಸ್ತುತವಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, “ಲೋಕಸಭಾ ಚುನಾವಣೆಗೆ ಗುರುವಾರ ಟಿಕೆಟ್ ಘೋಷಣೆ ಮಾಡುವುದಿಲ್ಲ. ಸಿಇಸಿ ಸಭೆಯಲ್ಲಿ ಚರ್ಚಿಸಿ, ಅಭ್ಯರ್ಥಿಗಳ ಪಟ್ಟಿಯನ್ನು ದೆಹಲಿಗೆ ತೆಗೆದುಕೊಂಡು ಹೋಗುಲಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ ಎನ್ನುವುದನ್ನು ಅಂತಿಮಗೊಳಿಸಲಿದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಮಹಿಳೆಯರ ದುಡಿಮೆಯನ್ನು ದುಡಿಮೆಯಾಗಿ ಪರಿಗಣಿಸುತ್ತಿಲ್ಲ: ಪ್ರೊ. ಎನ್. ಮಣಿಮೇಕ
“ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿಯವರು ಕರ್ನಾಟಕದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರ ನನಗೆ ಗೊತ್ತಿಲ್ಲ” ಎಂದು ಹೇಳಿದರು.




