ತುಮಕೂರು | ಮಗಳ ಮೇಲೆ ಕಾಮುಕ ತಂದೆಯಿಂದಲೇ ನಿರಂತರ ಅತ್ಯಾಚಾರ

Date:

ಕಾಮುಕ ತಂದೆಯೊಬ್ಬ ತನ್ನ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ತುಮಕೂರು ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಾಮುಕ ತಂದೆಯ ಲೈಂಗಿಕ ದೌರ್ಜನ್ಯದಿಂದಾಗಿ 14 ವರ್ಷದ ಬಾಲಕಿ ಗರ್ಭಿಣಿಯಾಗಿದ್ದಾಳೆ. ಬಾಲಕಿ ಗರ್ಭ ಧರಿಸಿದ್ದರಿಂದಾಗಿ ಕೃತ್ಯ ಬೆಳಕಿಗೆ ಬಂದಿದೆ.

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಷ್ಕೃತ್ಯ ನಡೆದಿದೆ. ಆರೋಪಿ ಕಾಮುಕ ಕುಟುಂಬ ಎಂಟು ತಿಂಗಳ ಹಿಂದೆ ಕೂಲಿ ಕೆಲಸಕ್ಕಾಗಿ ಹೊರ ರಾಜ್ಯದಿಂದ ಹೊನ್ನವಳ್ಳಿಗೆ ಬಂದು ನೆಲೆಸಿತ್ತು. ಇತ್ತೀಚೆಗೆ ಬಾಲಕಿ ಪದೇ-ಪದೇ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಳು. ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷೆ ವೇಳೆ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿದೆ.

ತನ್ನ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವುದಾಗಿ ಬಾಲಕಿ ಹೇಳಿದ್ದಾಳೆ. ಕಾಮುಕ ತಂದೆಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಅತ್ಯಾಚಾರಿ ಸಮಾಜದಲ್ಲಿ ಮಹಿಳೆಯರ ಅಸ್ತಿತ್ವ

ದೇಶಾದ್ಯಂತ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಲೇ ಇವೆ. ಕಾಮುಕ ಅತ್ಯಾಚಾರಿಗಳು ಅತ್ಯಾಚಾರಗೈದು ಸಾಕ್ಷ್ಯ ನಾಶಕ್ಕಾಗಿ ಸಂತ್ರಸ್ತೆಯನ್ನು ಕೊಲ್ಲುವ ಪ್ರೌವೃತ್ತಿ ಇತ್ತೀಚೆಗೆ ಹೆಚ್ಚಾಗುತ್ತಿದೆ. ಕೋಲ್ಕತ್ತಾದಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ ಬೆಳಕಿಗೆ ಬಂದ ಬಳಿಕ ಅತ್ಯಾಚಾರಗಳನ್ನು ತಡೆಯಲು ಕಠಿಣ ಕಾನೂನು ರೂಪಿಸಬೇಕೆಂದು ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿಯ ಪ್ರಕಾರ, 2022ರಲ್ಲಿ ಭಾರತದಲ್ಲಿ 31,516 ಅತ್ಯಾಚಾರ ಪ್ರಕರಣಗಳು ಮತ್ತು 4,45,256 ದೌರ್ಜನ್ಯ ಪ್ರಕರಣಗಳು ನಡೆದಿವೆ. ಅಂದರೆ, ದಿನಕ್ಕೆ ಸರಾಸರಿ 86 ಅತ್ಯಾಚಾರ ಮತ್ತು ಪ್ರತಿ ಗಂಟೆಗೆ ಸರಾಸರಿ 49 ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆದಿವೆ. ಬೆಂಗಳೂರಿನಲ್ಲಿಯೇ ಕಳೆದ ಮೂರು ವರ್ಷಗಳಲ್ಲಿ 444 ಅತ್ಯಾಚಾರ ಮತ್ತು 2,439 ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿವೆ. ಇವಲ್ಲದೆ, ವರದಕ್ಷಿಣೆ ಕಿರುಕುಳ, ಅಪಹರಣ, ಕಳ್ಳಸಾಗಣೆ, ಕೌಟುಂಬಿಕ ದೌರ್ಜನ್ಯಗಳು ಸೇರಿದಂತೆ ನಾನಾ ರೀತಿಯಲ್ಲಿ ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...