ತುಮಕೂರು | ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ : ಸಚಿವರುಗಳ‌ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಕೆಡಿಪಿ ಸಭೆಯಿಂದ ಹೊರನಡೆದ ಬಿಜೆಪಿ ಶಾಸಕ ಸುರೇಶ್ ಗೌಡ

Date:

ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.‌ಜಿ ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆತ್ತಿರುವ 2024-25 ನೇ ಸಾಲಿನ ಮೂರನೇ  ತ್ರೈಮಾಸಿಕ ಕೆಡಿಪಿ‌ ಸಭೆಯಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಮಾತ್ರವೇ ಚರ್ಚೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಸಭೆಯಯಲ್ಲಿ ಸಚಿವರುಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿ  ತುಮಕೂರು ಗ್ರಾಮಾಂತರ ಬಿಜೆಪಿ  ಶಾಸಕ ಸುರೇಶ್  ಗೌಡ ಕೆಡಿಪಿ ಸಭೇ ಬಹಿಷ್ಕರಿಸಿ ಸಭೆಯಿಂದ ಹೊರನಡೆದರು.

1001092900

ಗ್ಯಾರಂಟಿ ಬಗ್ಗೆ ಚರ್ಚೆ ನಡೆಸಲು ಮತ್ತೊಂದು ಸಭೆ ಮಾಡಿ‌ಕೊಳ್ಳಿ. ಮೂರು ತಿಂಗಳಿಗೆ   ಮಾಡುವ  ಸಭೆಯನ್ನು  ಆರು ತಿಂಗಳಿಗೆ‌ ಮಾಡುತ್ತೀರ. ಈ ಸಭೆಯಲ್ಲಿ ಮುಖ್ಯವಾಗಿ ರೈತರ‌ ಹಲವಾರು ಸಮಸ್ಯೆಗಳಿವೆ. ಅದರ ಬಗ್ಗೆ ಚರ್ಚೆ ಯಾಗಬೇಕು. ಜನರು ಸಮಸ್ಯೆಯಿಂದ ಬಾಯಿ ಬಡಿದುಕೊಳ್ಳುತ್ತಿದ್ದಾರೆ ಎಂದು ಶಾಸಕ ಸುರೇಶ್ ಗೌಡ  ಸಚಿವರುಗಳ‌ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಕೆಡಿಪಿ ಸಭೆಯಿಂದ ಹೊರನಡೆದರು.

ನಂತರ ಮಾಧ್ಯಮದವರೊಂಗೆ ಮಾತನಾಡಿದ ಶಾಸಕ ಸುರೇಶ್ ಗೌಡ,  ಇದೊಂದು ಟೈಂ ಪಾಸ್ ಸಭೆ. ಮೂರು ತಿಂಗಳಿಗೊಮ್ಮೆ ನಡೆಯುವ ಸಭೆಯನ್ನು  ಆರು ತಿಂಗಳಿಗೆ ನಡೆಸುತ್ತಿದ್ದಾರೆ. ನಾವು ಆರು ತಿಂಗಳ‌ ಹಿಂದಿನಿಂದ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಹೇಮಾವತಿ ನೀರಿನ ಬಗ್ಗೆ, ಬೇಸಿಗೆ ಆರಂಭದಲ್ಲಿ ಕುಡಿಯುವ ನೀರಿನ ಸಮಸ್ಯೆ.ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳಿವೆ. ಆದರೆ ಗಂಟೆಗಟ್ಟಲೆ ಗ್ಯಾರಂಟಿ ಬಗ್ಗೆಯೇ ಚರ್ಚೆ ಮಾಡುತ್ತಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001092899

ಗ್ಯಾರಂಟಿ ಯೋಜನೆಗಳ  ಪ್ರಗತಿ ಪರಿಶೀಲನೆಗೆ  ಪ್ರತ್ಯೇಕ ಸಭೆ  ಮಾಡಿಕೊಳ್ಳಲಿ. ಪ್ರಸ್ತುತ ಸಮಸ್ಯೆಗಳ ಚರ್ಚೆಗೆ ಸಭೆಯಲ್ಲಿ  ಹೆಚ್ಚಿನ ಆದ್ಯತೆ ನೀಡಬೇಕು. ರೇವಣ್ಣ ಅವರು ಯಾವೋದು ಕ್ಯಾಬಿನೆಟ್ ರ್ಯಾಂಕ್ ತಗೊಂಡು ಬಂದು ಮೀಟಿಂಗ್ ಮಾಡಿಕೊಂಡು ಕುಳಿತಿದ್ದಾರೆ. ಈತರ ಮೀಟಿಂಗ್ ಗಳು ಆಗಬಾರದು. ಸಚಿವ  ಪರಮೇಶ್ವರ್ ಅವರು  ಮೂರು  ತಿಂಗಳಿಗೊಮ್ಮೆ ಸಭೆ ನಡೆಸಲಿ.  ಈ ರೀತಿಯ ಟೈಂ ಪಾಸ್ ಮಾಡೋ ಮೀಟಿಂಗ್ ಗೆ ಟಿ‌ ಕಾಫಿಗೆ ಯಾಕೆ ಬರಬೇಕು. ಅದಕ್ಕೆ ಸಭೆ ಬಹಿಷ್ಕರಿಸಿ   ಹೊರಬಂದಿದ್ದೇನೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...