ತುಮಕೂರು | ಪೊಲೀಸರ ಮೂರು ಪಾಳಿ ಕೆಲಸದ ಬಗ್ಗೆ ಸಾಧಕ-ಬಾಧಕ ಪರಿಶೀಲಿಸಿ ನಿರ್ಧಾರ : ಡಾ.ಜಿ. ಪರಮೇಶ್ವರ

Date:

ಪೊಲೀಸ್ ಇಲಾಖೆಯಲ್ಲಿ ಮೂರು ಪಾಳಿಯಲ್ಲಿ ಕೆಲಸ ಮಾಡಿಸುವ ಬಗ್ಗೆ ಇನ್ನು ಮಾತುಕತೆ ನಡೆಸಲಾಗುತ್ತಿದೆ. ಎಲ್ಲ ಸಾಧಕ-ಬಾಧಕಗಳನ್ನು ಪರಿಶೀಲನೆ ಮಾಡಿ ನಂತರ ಆ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು

ತುಮಕೂರು ನಗರದಲ್ಲಿ ನವೀಕರಣಗೊಂಡಿರುವ ಜಿಲ್ಲಾ ಮತ್ಸಾಲಯವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ಪಾಳಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸ್ಥಿತಿಗತಿಯೂ ನೋಡಬೇಕಲ್ಲವೆ, ದಿಢೀರನೆ ಕ್ರಮ ಕೈಗೊಳ್ಳಲು ಆಗುವುದಿಲ್ಲ ಎಂದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಏನಾದರೂ ಅನುದಾನ ಕೊರತೆಗಳಿದ್ದರೆ ಆ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಸ್ವಾಭಾವಿಕವಾಗಿ ರಾಜಕೀಯವಾಗಿ ಎರಡು ಅಭಿಪ್ರಾಯಗಳು ಇದ್ದೇ ಇರುತ್ತವೆ. ಇದು ಎಲ್ಲ ಪಕ್ಷಗಳಲ್ಲೂ ಸರ್ವೇ ಸಾಮಾನ್ಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುರ್ಜೇವಾಲಾ ಅವರು ಶಾಸಕರೊಂದಿಗೆ ಸಭೆ ನಡೆಸುತ್ತಿರುವುದು ಕ್ಷೇತ್ರಗಳ ಅಭಿವೃದ್ಧಿ ವಿಚಾರದ ಕುರಿತು ಮಾಹಿತಿ ಪಡೆದುಕೊಳ್ಳಲು ಅಷ್ಟೇ ಎಂದರು.  

ಸಿಗಂಧೂರು ಸೇತುವೆ ಉದ್ಘಾಟನೆಗೆ ಯಾರ ವಿರೋಧವೂ ಇಲ್ಲ. ಇದು ಕೇಂದ್ರ ಸರ್ಕಾರದ ಯೋಜನೆಯಾಗಿರುವುದರಿಂದ ಅವರೇ ಬಂದು ಉದ್ಘಾಟನೆ ಮಾಡಲು ಮುಂದಾಗಿದ್ದಾರೆ. ಈ ಉದ್ಘಾಟನೆಯನ್ನು ಮುಂದಕ್ಕೆ ಹಾಕಿ ಎಂದಷ್ಟೇ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ ಎಂದು ಅವರು ಈ ಸೇತುವೆ ಉದ್ಘಾಟನೆ ಸಂಬಂಧ ರಾಜ್ಯ ಸರ್ಕಾರದ ವಿರೋಧದ ಬಗ್ಗೆ ಸಮರ್ಥಿಸಿಕೊಂಡರು. 

ಸಾಮಾನ್ಯವಾಗಿ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ರಾಜ್ಯ ಸರ್ಕಾರದ್ದು ಪಾಲು ಇರುತ್ತದೆ. ಕೇಂದ್ರ ಒಂದೇ ಮಾಡಲು ಸಾಧ್ಯವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡು ಒಟ್ಟಿಗೆ ಕೆಲಸ ಮಾಡಬೇಕಾಗುತ್ತದೆ ಎಂದು ಅವರು ಹೇಳಿದರು. 

ಒಂದೊಂದು ಬಾರಿ ಮುಖ್ಯಮಂತ್ರಿಗಳು ಉದ್ಘಾಟನಾ ಕಾರ್ಯಕ್ರಮಗಳಿಗೆ ಹೋಗಲು ಸಾಧ್ಯವಾಗದಿದ್ದಾಗ ನಮ್ಮಲ್ಲೇ ಇರುವ ಒಬ್ಬರು ಸಚಿವರೊಬ್ಬರನ್ನು ನಿಯೋಜಿಸುತ್ತಾರೆ. ಇದು ರಾಜ್ಯ ಸರ್ಕಾರದ ಪದ್ದತಿ. ಆದರೆ ಎಲ್ಲೋ ಒಂದು ಕಡೆ ಈ ವಿಚಾರದಲ್ಲಿ ಕಮ್ಯುನಿಕೇಷನ್ ಗ್ಯಾಪ್ ಆಗಿರಬಹುದು. ಅದನ್ನು ಸರಿಪಡಿಸಿಕೊಂಡರಾಯಿತು ಎಂದರು.

ಆಪರೇಷನ್ ಬಿಜೆಪಿ ಆಗುತ್ತದೆ. 53 ಜನ ಶಾಸಕರ ಪಟ್ಟಿ ಸಿದ್ದವಾಗಿದೆ. ಪಕ್ಷಕ್ಕೆ ಬರದಿದ್ದರೆ ಐ.ಡಿ., ಇಡಿ ರೇಡ್ ಆಗುತ್ತದೆ ಎಂದು ಕಾಶಂಪ್ಪನವರು ಹೇಳಿಕೆ ನೀಡಿದ್ದಾರೆ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ, ಕಾಶಂಪ್ಪನವರ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ, ಆ ಬಗ್ಗೆ ಅವರನ್ನೇ ಕೇಳಬೇಕು ಎಂದರು.

ತುಮಕೂರು ಸ್ಟೇಡಿಯಂ ನಿರ್ವಹಣೆಗೆ ಒಂದು ಸ್ಕೀಂನ ಅಳವಡಿಸಿಕೊಳ್ಳುವ ಸಂಬಂಧ ಚಿಂತನೆ ನಡೆಸಲಾಗುತ್ತಿದೆ. ನಿರ್ವಹಣೆಗೆ ಇಲಾಖೆಯಿಂದ ಹಣ ಕೊಡುತ್ತಿಲ್ಲ ಎಂಬ ಕೂಗು ಕೇಳಿ ಬರುತ್ತಿತ್ತು. ಹಾಗಾಗಿ ಬೆಂಗಳೂರಿನ ಸ್ಟೇಡಿಯಂ ನಿರ್ವಹಣೆಗೆ ಅನುಸರಿಸುತ್ತಿರುವ ಮಾರ್ಗವನ್ನೇ ಇಲ್ಲು ಅನುಸರಿಸೋಣ ಎಂಬ ಚಿಂತನೆ ಇದೆ ಎಂದರು. 

ತುಮಕೂರನ್ನು ವ್ಯವಸ್ಥಿತವಾಗಿ ವಿಸ್ತರಣೆ ಮಾಡಲು 14 ಪಂಚಾಯ್ತಿಗಳನ್ನು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳುವ ಸಂಬಂಧ ಚಿಂತನೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಈ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...