ತುಮಕೂರು | ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯುವಂತೆ ಆಗ್ರಹ

Date:

ಕೇಂದ್ರ ಸರಕಾರ ವಕ್ಫ್ ತಿದ್ದುಪಡಿ ಮಸೂದೆ-2024ರ ಮೂಲಕ ಅಲ್ಪಸಂಖ್ಯಾತ ಸಮುದಾಯದ ಅರ್ಥಿಕ ಮೂಲಕ್ಕೆ ಕೊಡಲಿ ಪೆಟ್ಟು ಕೊಡಲು ಹೊರಟಿದ್ದು,ಕೂಡಲೇ ಹಿಂದೆ ಸರಿಯಬೇಕು ಎಂದು ಆಗ್ರಹಿಸಿ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಅಫ್ ಸಿವಿಲ್ ರೈಟ್ಸ್ ಇಂಡಿಯಾ ತುಮಕೂರು ಶಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ವಕ್ಫ್ ತಿದ್ದುಪಡಿ ಮಸೂಸೆ-2024ರ ಜಂಟಿ ಸಮಿತಿ ಅಧ್ಯಕ್ಷರಾದ ಜಗದಾಂಬಿಕಾ ಪಾಲ್ ಅವರಿಗೆ ಮನವಿ ಸಲ್ಲಿಸಿದರು.

ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಅಫ್ ಸಿವಿಲ್ ರೈಟ್ಸ್ ಇಂಡಿಯಾ ತುಮಕೂರು ಜಿಲ್ಲಾ ಶಾಖೆಯ ಅಧ್ಯಕ್ಷ ತಾಜುದ್ದೀನ್ ಷರೀಫ್ ಅವರ ನೇತೃತ್ವದಲ್ಲಿ ಖಾಲಿದ್ ಸುಹೇಲ್, ಹಮೀದ್ ಬೇಗ್, ಗೌನ್‌ಪಾಷಾ, ಅಫ್ಜಲ್‌ಖಾನ್, ಅಪ್ಸರ್ ಪಾಷ, ಇನ್ನಿತರರು ಜಿಲ್ಲಾಧಿಕಾರಿಗಳಿಗೆ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಕೇಂದ್ರ ಸರಕಾರ ವಕ್ಫ್ ತಿದ್ದುಪಡಿ ಮಸೂದೆ 2024 ಭಾರತದಲ್ಲಿ ವಕ್ಫ್ ಆಸ್ತಿಗಳ ಆಡಳಿತ ಮತ್ತು ಪಾರದರ್ಶಕತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿರುವ 1995 ರ ವಕ್ಫ್ ಕಾಯಿದೆಗೆ ಹಲವಾರು ಬದಲಾವಣೆಗಳನ್ನು ತರಲು ಮುಂದಾಗಿದೆ.ವಕ್ಫ್ ತಿದ್ದುಪಡಿ ಮಸೂದೆಯಿಂದ ಸಮುದಾಯದ ಪ್ರಾತಿನಿಧ್ಯವನ್ನು ಕಡಿಮೆ ಮಾಡಿ, ರಾಜಕೀಯ ಹಸ್ತಕ್ಷೇಪವನ್ನು ಹೆಚ್ಚು ಮಾಡುವುದರಿಂದ ವಕ್ಫ್ ಮೂಲ ಆಶಯಕ್ಕೆ ಧಕ್ಕೆಯಾಗಲಿದೆ.ಅಲ್ಲದೆ,ಕಾನೂನು ವಿವಾದಗಳಿಗೆ ಕಾರಣವಾಗುವ ಆಸ್ತಿ ಮಾಲೀಕತ್ವ ಮತ್ತು ನಿರ್ವಹಣೆಯ ಮೇಲಿನ ಕಾನೂನು ವಿವಾದಗಳಿಗೆ ಕಾರಣವಾಗುವ ಸಾಧ್ಯತೆ ಹೆಚ್ಚಿದೆ.ಧಾರ್ಮಿಕವಲ್ಲದ ಆಸ್ತಿಗಳನ್ನು ವಕ್ಫ್ ಮಂಡಳಿಗಳ ನಿಯಂತ್ರಣ ತರುವುದರಿಂದ ರಾಜ್ಯದ ಕಾನೂನುಗಳೊಂದಿಗೆ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್,ವಕ್ಫ್ ತಿದ್ದುಪಡಿ ಮಸೂದೆ-2024ರಿಂದ ಸ್ಥಳೀಯ ಪ್ರಾಧಿಕಾರದ ಹಿಡಿತ ದುರ್ಬಲಗೊಂಡು, ವಿಕೇಂದ್ರೀಕರಣಕ್ಕೆ ಬದಲಾಗಿ,ಕೇಂದ್ರೀಕೃತ ವ್ಯವಸ್ಥೆಯಿಂದ ಸರಕಾರದ ಹಸ್ತಕ್ಷೇಪ ಹೆಚ್ಚಾಗಲಿದೆ ಎಂಬುದು ನಮ್ಮಗಳ ಅಭಿಪ್ರಾಯವಾಗಿದೆ.ಇದು ಮೂಲಕ ವಕ್ಪ್ ಕಾಯ್ದೆಯ ಆಶಯಗಳಿಗೆ ವಿರುದ್ದವಾಗಿದೆ.ಹಾಗಾಗಿ ತಿದ್ದುಪಡಿ ಮಸೂದೆಯನ್ನು ವಿರೋಧಿಸುವುದಾಗಿ ತಿಳಿಸಿದರು

ಹೊಸ ಮಸೂಧೆಯಲ್ಲಿ ವಕ್ಫ್ ಆಸ್ತಿಯ ವಿಲೇವಾರಿ ಮೇಲಿನ ಮೇಲ್ವಿಚಾರಣೆಯನ್ನು ಕಡಿಮೆ ಮಾಡುವುದರಿಂದ ಭ್ರಷ್ಟಾಚಾರಕ್ಕೆ ಕಾರಣವಾಗುವ ಸಾಧ್ಯತೆ ಹೆಚ್ಚಿದೆ.ಬೆಲೆ ಬಾಳುವ ವಕ್ಫ್ ಭೂಮಿಯನ್ನು ದತ್ತಿ ಅಥವಾ ಧಾರ್ಮಿಕ ಉದ್ದೇಶಗಳಿಗಿಂತ,ವಾಣಿಜ್ಯ ಹಿತಾಸಕ್ತಿಗಳಿಗೆ ಮಾರಾಟ ಅಥವಾ ಗುತ್ತಿಗೆ ನೀಡುವುದರಿಂದ ಸಮುದಾಯದ ಕಲ್ಯಾಣಕ್ಕಾಗಿ ಸೇವೆ ಸಲ್ಲಿಸುವ ವಕ್ಫ್ ಆಸ್ತಿಗಳ ಉದ್ದೇಶವನ್ನು ದುರ್ಬಲಗೊಳಿಸುವ ಸಾಧ್ಯತೆ ಹೆಚ್ಚಿದೆ.ಹಾಗಾಗಿಯೇ ತಿದ್ದುಪಡಿ ವಸೂದೆಯನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...