ತುಮಕೂರು ಜಿಲ್ಲಾಸೌಧ ಮುಟ್ಟಿಬಂದ ಅಲೆಮಾರಿಗಳು

Date:

ಚಿಕ್ಕನಾಯಕನಹಳ್ಳಿ  ತಾಲೂಕಿನ‌ ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೌಡಗೆರೆ ಸರ್ವೆ ನಂಬರ್ 20-ಪಿ1’ನಲ್ಲಿ ನಿವೇಶನ ಹಂಚಿಕೆಯಾಗಿರುವ ಅಲೆಮಾರಿಗಳು, ವರ್ಷಾನುವರ್ಷಗಳಿಂದ ನಿರ್ಲಕ್ಷ್ಯಕ್ಕೊಳಗಾಗಿರುವ ತಮ್ಮ ಮೂಲಭೂತ ಹಕ್ಕು-ಸೌಕರ್ಯಗಳನ್ನು ಶೀಘ್ರವೇ ಒದಗಿಸಿಕೊಡುವಂತೆ ಮನವಿ ಮಾಡುವ ಸಲುವಾಗಿ, ಬುಧವಾರದಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯಾಧಿಕಾರಿಗಳನ್ನು ಭೇಟಿ ಮಾಡಿದರು.

ಅಲೆಮಾರಿ ಹಕ್ಕುಗಳ ಹೋರಾಟಗಾರ ಮತ್ತು ಅಲೆಮಾರಿ ಬುಡಕಟ್ಟು ಮಹಾಸಭಾ ಮುಖಂಡ ಹಂದಿಜೋಗರ ರಾಜಪ್ಪನವರ ನೇತೃತ್ವದಲ್ಲಿ ಬುಧವಾರ ಬೆಳಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯಾಧಿಕಾರಿಗಳನ್ನು ಭೇಟಿ ಮಾಡಿದ ಅಲೆಮಾರಿ ಮಹಿಳೆಯರು, ಅಲೆಮಾರಿಗಳ ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕು  ಪಂಚಾಯಿತಿ ಅಧಿಕಾರಿಗಳು ಅನುಸರಿಸುತ್ತಿರುವ ವಿಳಂಬ ಧೋರಣೆ ಮತ್ತು ಮಂದಗತಿಯ ಕೆಲಸಕಾರ್ಯಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಅವರ ಮೂಲಭೂತ ಸೌಕರ್ಯಗಳನ್ನು ಶೀಘ್ರ ಒದಗಿಸಿಕೊಡುವಂತೆ ಮನವಿ ಸಲ್ಲಿಸಿದರು. ತಾವು ಕಚೇರಿಯಲ್ಲಿಲ್ಲದ ಕಾರಣ ಅಲೆಮಾರಿ ಮಹಿಳೆಯರ ಮನವಿಯನ್ನು ತಮ್ಮ ಆಪ್ತ ಕಾರ್ಯದರ್ಶಿಯವರ ಮುಖೇನ ಸ್ವೀಕರಿಸಿರುವ ಜಿಲ್ಲಾ ಪಂಚಾಯತಿ ಸಿಇಒ ಜಿ ಪ್ರಭುರವರು, ಫೋನ್ ಮೂಲಕ ಈದಿನ ಡಾಟ್ ಕಾಮ್ ಜೊತೆ ಮಾತನಾಡಿ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಅಲೆಮಾರಿಗಳ ಅಭಿವೃದ್ಧಿ ಕಾರ್ಯಗಳಲ್ಲಿ ತ್ವರಿತ ಪ್ರಗತಿ ತರಲು ಸೂಕ್ತ ಕ್ರಮ ಜರುಗಿಸುವ ಭರವಸೆಯನ್ನು ನೀಡಿದ್ದಾರೆ.

1000735706

ನಂತರ, ಮಧ್ಯಾಹ್ನ ನಾಲ್ಕು ಗಂಟೆಯ ಆಸುಪಾಸಿನಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್’ರವರನ್ನು ಭೇಟಿಮಾಡಿದ ತಾಲ್ಲೂಕಿನ ಅಲೆಮಾರಿ ಮಹಿಳೆಯರು, ಅವರ ಬಳಿ ತಮ್ಮ ಸಂಕಟಗಳನ್ನು ತೋಡಿಕೊಂಡು, ಶೀಘ್ರ ಪರಿಹಾರಕ್ಕಾಗಿ ಮನವಿ ಸಲ್ಲಿಸಿದ್ದಾರೆ. ಮುಂದಿನ ವಾರಗಳಲ್ಲಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಅಲೆಮಾರಿಗಳ ಕುಂದು-ಕೊರತೆಗಳನ್ನು ಪರಿಹರಿಸಲು ತಾಲ್ಲೂಕಿನ ಅಲೆಮಾರಿ ವಸತಿ ಪ್ರದೇಶಗಳಿಗೇ ಭೇಟಿ ನೀಡುವ ಭರವಸೆಯನ್ನು ಅಲೆಮಾರಿ ಮಹಿಳೆಯರಿಗೆ ಜಿಲ್ಲಾಧಿಕಾರಿಗಳು ನೀಡಿದ್ದಾರೆ ಎಂದು ಅಲೆಮಾರಿ ನಾಗಮ್ಮ ಅವರು ಈದಿನ ಡಾಟ್ ಕಾಮ್ ಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಚಲನ

ಚಿಕ್ಕನಾಯಕನ ಸೀಮೆಯಿಂದ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...