ತುಮಕೂರು | ಕುಡಿಯಲು ಯೋಗ್ಯವಲ್ಲದ ನೀರಿನ ಮೂಲಗಳ ವರದಿ ನೀಡಲು ಜಿಲ್ಲಾಧಿಕಾರಿ ಸೂಚನೆ

Date:

ತುಮಕೂರು ಜಿಲ್ಲೆಯಲ್ಲಿ ಕಳೆದ ವರ್ಷದಲ್ಲಿ ಮಧುಗಿರಿ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರಿನಿಂದ ಸಂಭವಿಸಿದ ಸಾವಿನ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕುಡಿಯಲು ಯೋಗ್ಯವಲ್ಲದ ನೀರಿನ ಮೂಲಗಳ ಬಗ್ಗೆ ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು. 

ತುಮಕೂರು ಜಿಲ್ಲಾಧಿಕಾರಿ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ಸಂಜೆ ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ನಗರ ಪ್ರದೇಶದ ಎಲ್ಲಾ ವಾರ್ಡುಗಳಿಗೂ ಪ್ರತೀ ದಿನ ನೀರು ಸರಬರಾಜಾಗಬೇಕು. ಪ್ರತೀ ದಿನ ನೀರು ಸರಬರಾಜಿಗೆ ಕ್ರಮ ಕೈಗೊಳ್ಳದ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಶೋಕಾಸ್ ನೋಟೀಸ್ ನೀಡಲಾಗುವುದೆಂದು ನಿರ್ದೇಶನ ನೀಡಿದರು. 

ಕೊಳವೆ ಬಾವಿ ಮೋಟಾರ್ ಕೆಟ್ಟಿದೆ, ಪೈಪ್‌ಲೈನ್ ಒಡೆದಿದೆ, ದುರಸ್ತಿಯಲ್ಲಿದೆ ಎಂದು ಕುಂಟು ನೆಪ ಹೇಳಬಾರದು. ಜನರಿಂದ ದೂರು ಬಾರದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಜನ-ಜಾನುವಾರುಗಳಿಗೆ ಕುಡಿಯುವ ನೀರೊದಗಿಸಲು ವಿಫಲರಾದಲ್ಲಿ ಸರ್ಕಾರಕ್ಕೆ ಅಂಥವರ ವಿರುದ್ಧ ದೂರು ನೀಡಲಾಗುವುದು. ಎಲ್ಲಾ ಮುಖ್ಯಾಧಿಕಾರಿಗಳು ಪ್ರತಿ ದಿನ ಬೆಳಿಗ್ಗೆ 6 ರಿಂದ 8 ಗಂಟೆಯವರೆಗೆ ತಮ್ಮ ವ್ಯಾಪ್ತಿಯ ಕ್ಷೇತ್ರಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆಯಿದ್ದಲ್ಲಿ ಕೂಡಲೇ ಬಗೆಹರಿಸಬೇಕು ಹಾಗೂ ಡೆಂಗ್ಯೂ ಪ್ರಕರಣಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸಂಜೆ 2 ಗಂಟೆಗಳ ಕಾಲ ಫಾಗಿಂಗ್ ಕಾರ್ಯವನ್ನು ಪರಿಶೀಲಿಸಬೇಕೆಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಮಕೂರು ಜಿಲ್ಲೆಯಲ್ಲಿ ಪೂರ್ವ ಮುಂಗಾರಿನಲ್ಲಿ ಬಿದ್ದ ಮಳೆ ವಿವರ, ಸುಸ್ಥಿತಿಯಲ್ಲಿರುವ ಕೊಳವೆ ಬಾವಿ, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಗ್ರಾಮ, ಕೆರೆಗಳಲ್ಲಿ ನೀರಿನ ಪ್ರಮಾಣ ಲಭ್ಯತೆ, ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಸಹಾಯವಾಣಿ ಮೂಲಕ ಸ್ವೀಕೃತ ದೂರು, ವಿಲೇವಾರಿ ಕುರಿತು ತಾಲ್ಲೂಕುವಾರು ಮಾಹಿತಿ ಪಡೆದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಸಂಜೀವಪ್ಪ, ಕೃಷಿ ಜಂಟಿ ನಿರ್ದೇಶಕ ರಮೇಶ್, ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ, ಪಾಲಿಕೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಂದೀಪ್, ಸೇರಿದಂತೆ ಮತ್ತಿತರೆ ಅಧಿಕಾರಿಗಳು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...