ತುಮಕೂರು | ಒಳ ಮೀಸಲಾತಿ ಸಮೀಕ್ಷೆ ಜಾಗೃತಿಗೆ ಜಿಲ್ಲಾ ಮಟ್ಟದ ಸಮಿತಿ ರಚನೆ

Date:

ಒಳಮೀಸಲಾತಿಗೆ ಸಂಬಂಧಿಸಿದಂತೆ ಎಂಪಿರಿಕಲ್ ಡೇಟಾ ಸಂಗ್ರಹಕ್ಕೆ ನ್ಯಾ.ನಾಗಮೋಹನ್‌ದಾಸ್ ಸಮಿತಿ ಶೀಘ್ರದಲ್ಲಿಯೇ ಸಮೀಕ್ಷೆ ಆರಂಭಿಸಲಿರುವ ಹಿನ್ನೆಲೆಯಲ್ಲಿ ತುಮಕೂರು ನಗರದ ಅಂಬೇಡ್ಕರ್ ಭವನದಲ್ಲಿ ಮಾದಿಗ ಸಮುದಾಯದ ಮುಖಂಡರು ಸಭೆ ಸೇರಿ, ಸಮೀಕ್ಷೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಿದರು.

ನ್ಯಾ.ನಾಗಮೋಹನ್ ದಾಸ್ ಸಮಿತಿಯ ಮಧ್ಯಂತರ ವರದಿಯ ಶಿಫಾರಸ್ಸಿನಂತೆ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಹೊಸದಾಗಿ ಎಂಪಿರಿಕಲ್ ಡೇಟಾ ಸಂಗ್ರಹಕ್ಕೆ ಎಲ್ಲಾ ಸಿದ್ದತೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಮೀಕ್ಷೆಯನ್ನು ಮಾದಿಗ ಸಮುದಾಯದ ಮುಖಂಡರು, ಹೋರಾಟಗಾರರು,ಯುವಜನರು ಸಕ್ರಿಯವಾಗಿ ಪಾಲ್ಗೊಂಡು, ಗ್ರಾಮೀಣ ಭಾಗದ ಜನರಿಗೆ ಅರಿವು ಮೂಡಿಸುವ ಮೂಲಕ ಎಕೆ,ಎಡಿ,ಎಎ ಇರುವ ಕಲಂಗಳಲ್ಲಿ ಸಂಬಂಧಪಟ್ಟ ಉಪಜಾತಿಯನ್ನು ಕಡ್ಡಾಯವಾಗಿ ನಮೂದಿಸುವ ಮೂಲಕ ಅಂತಿಮ ಹಂತದ ಹೋರಾಟವನ್ನು ಕೈಗೊಳ್ಳಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ನಿವೃತ್ತ ಅಧಿಕಾರಿ ಡಾ.ವೈ.ಕೆ.ಬಾಲಕೃಷ್ಣಪ್ಪ ಮಾತನಾಡಿ,ಮಾದಿಗ ಸಮುದಾಯಕ್ಕೆ ಇದೊಂದು ಸುವರ್ಣ ಅವಕಾಶ. ನ್ಯಾ.ನಾಗಮೋಹನದಾಸ್ ಸಮಿತಿ ಸಮೀಕ್ಷೆಗೆ ಬಂದ ಸಂದರ್ಭದಲ್ಲಿ ಅಧಿಕಾರಿಗಳು ಸರಿಯಾಗಿ ಜಾತಿ, ಉಪಜಾತಿ ಸಮೀಕ್ಷೆ ನಡೆಸಿದ್ದಾರೆಯೇ ಇಲ್ಲವೇ ಎಂಬುದನ್ನು ಕಾವಲು ನಾಯಿಯಂತೆ ಕಾಯುವ ಕೆಲಸ ಮಾದಿಗ ಸಮುದಾಯದ ಮುಖಂಡರ ದ್ದಾಗಿದೆ.ಸಮೀಕ್ಷೆಯ ವೇಳೆ ಮಾದಿಗರ ಸಂಖ್ಯೆ ಕಡಿಮೆ ಮಾಡುವ ಹುನ್ನಾರ ನಡೆಯಬಹುದು ಎಂಬ ಅನುಮಾನ, ಆಂತಕ ನಮ್ಮಲ್ಲಿದೆ. ಹಾಗಾಗಿ ಸಮೀಕ್ಷೆ ನಡೆಯುವ ಅಷ್ಟು ದಿನ ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕು.ಜಿಲ್ಲೆಯ ಎಲ್ಲಾ ಮಾದಿಗ ಸಮುದಾಯದ ಜನರು ತಮ್ಮ ಉಪಜಾತಿ ಕಲಂನಲ್ಲಿ ಮಾದಿಗ ಎಂದಷ್ಟೇ ನಮೂದಿಸಬೇಕು.ಅಲ್ಲದೆ ಪ್ರತಿ ಮನೆಯ ಯಜಮಾನನ ಸಹಿ ಇಲ್ಲವೇ,ಹೆಬ್ಬೇರಳಿನ ಅಚ್ಚು ಪಡೆಯುವಂತೆ ಸಮಿತಿಯ ಮೇಲೆ ಒತ್ತಡ ಹೇರುವ ಕೆಲಸ ಆಗಬೇಕು. ಇದನ್ನು ಕ್ರಾಸ್‌ಚೆಕ್ ಮಾಡುವ ಜವಾಬ್ದಾರಿಯನ್ನು ವಿದ್ಯಾವಂತ ಮಾದಿಗ ಯುವಜನರು ಹೊರಬೇಕೆಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮೀಕ್ಷೆ ಸಂಬಂಧ ಜನರಲ್ಲಿ ಜಾಗೃತಿ ಮೂಡಿಸಲು ತುಮಕೂರು ಜಿಲ್ಲಾ ಒಳಮೀಸಲಾತಿ ಹೋರಾಟ ಸಮಿತಿ ಹೆಸರಿನಲ್ಲಿ ಒಂದು ಲಕ್ಷ ಕರಪತ್ರ ಮುದ್ರಿಸಿ,ಸಮೀಕ್ಷೆಗೆ ಮನೆಯ ಬಳಿ ಅಧಿಕಾರಿಗಳು ಬಂದಾಗ ಯಾವ ರೀತಿ ನಡೆದುಕೊಳ್ಳಬೇಕು. ಯಾವ ಯಾವ ಕಲಂಗಳಲ್ಲಿ ಯಾವ ಮಾಹಿತಿ ತುಂಬಬೇಕು ಎಂಬ ಬಗ್ಗೆ ಸ್ಪಷ್ಟ ಸೂಚನೆ ನೀಡಬೇಕು.ಈ ಕರಪತ್ರ ಜಿಲ್ಲೆಯ ಪ್ರತಿ ಮಾದಿಗ ಸಮುದಾಯದ ಮನೆಗೆ ತಲುಪುವಂತೆ ನೋಡಿಕೊಳ್ಳಬೇಕು.ಇದು ಪಕ್ಷಾತೀತ ಮತ್ತು ವ್ಯಕ್ತಿ ಕೇಂದ್ರಿತವಲ್ಲದ ಆಂದೋಲನವಾಗಬೇಕು.ಹಾಗಾಗಿ ಯುವಜನರು ಹೆಚ್ಚು ಸಕ್ರಿಯವಾಗಿ ಈ ಹೋರಾಟದಲ್ಲಿ ಪಾಲ್ಗೊಳ್ಳಬೇಕು.ಇನ್ನೊಂದು ಸಮುದಾಯಕ್ಕೆ ಅಸಹ್ಯವಾಗದ ರೀತಿ ನಮ್ಮ ನಡವಳಿಕೆ ಇರಬೇಕು.ಇದೆಲ್ಲವನ್ನು ಮೇಲುಸ್ತುವಾರಿಗೆ ಜಿಲ್ಲಾ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚಿಸಿ, ಜಿಲ್ಲೆಯ 333 ಗ್ರಾಮಪಂಚಾಯಿತಿಗಳಲ್ಲಿಯೂ ಓಡಾಡಿ,ಶೇ100ಕ್ಕೆ ನೂರರಷ್ಟು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಡಾ.ವೈ.ಕೆ.ಬಾಲಕೃಷ್ಣಪ್ಪ ತಿಳಿಸಿದರು.

1001254067

ಮುಖಂಡರಾದ ಕೇಶವಮೂರ್ತಿ ಮಾತನಾಡಿ,ಒಳಮೀಸಲಾತಿಗೆ ಸಂಬಂಧಿಸಿದಂತೆ 3 ದಶಕಗಳ ಹೋರಾಟ ಒಂದೆಡೆ ಯಾದರೆ, ಸಮೀಕ್ಷೆ 10 ದಿನಗಳು ಮಾದಿಗ ಸಮುದಾಯದ ಪಾಲಿಗೆ ಒಂದು ಹೋರಾಟವೇ ಆಗಿದೆ.ಈ ಸಮಯದಲ್ಲಿ ಮೈಮರೆತರೆ ನಮ್ಮ ಮುಂದಿನ ಪೀಳಿಗೆಗೆ ಮೋಸ ಮಾಡಿದಂತೆ. ಈ ಸಮಯ ಎಚ್ಚೆತ್ತು ಕೆಲಸ ಮಾಡಿದರೆ ಮುಂದಿನ ಪೀಳಿಗೆ ಎಕೆ, ಎಡಿ, ಎಎ ಯಂತಹ ಗೊಂದಲಗಳಿಲ್ಲದೆ ಸರಕಾರದ ಸವಲತ್ತುಗಳನ್ನು ಪಡೆದು ಬದುಕು ನಡೆಸಬಹುದು. ಸಮುದಾಯದ ಒಳಗಿನ ಭಿನ್ನಾಭಿಪ್ರಾಯಗಳನ್ನು ಬದಿಗಿರಿಸಿ,ನಮ್ಮ ಶತೃವೇ ಆಗಿದ್ದರೂ,ಆತನಿಗೂ ಈ ವಿಷಯ ತಿಳಿಯು ವಂತೆ ಮಾಡಿ,ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು.ಬೋವಿ, ಲಂಬಾಣಿ, ಕೊರಮ, ಕೊರಚರು ಈಗಾಗಲೇ ನಿಗಮಗಳ ಮೂಲಕ ತಮ್ಮ ಅಂಕಿ ಅಂಶಗಳನ್ನು ಇಟ್ಟುಕೊಂಡಿದ್ದಾರೆ.ನಾವು ಸ್ವಲ್ಪ ತಡವಾಗಿ ಆರಂಭಿಸುತಿದ್ದೇವೆ. ಆದರೂ ಚಿಂತೆಯಿಲ್ಲ.ಪರಿಶಿಷ್ಟ ಜಾತಿಯಲ್ಲಿರುವ ಅಲೆಮಾರಿಗಳು,ಅರೆ ಅಲೆಮಾರಿಗಳು ಸೇರಿದಂತೆ 101 ಜಾತಿಗಳ ಜನರು ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸಿ,ಮಾದಿಗರಿಗೆ ಮೊದಲ ಆದ್ಯತೆ ನೀಡಿ ಎಂದರು.

ಹಿರಿಯರಾದ ಕೆ.ದೊರೆರಾಜು ಮಾತನಾಡಿ,ಮಾದಿಗರು ತಮ್ಮ ನಿಖರವಾದ ಜನಸಂಖ್ಯೆಯನ್ನು ಸರಕಾರದ ಮುಂದಿಡಲು ಇದೊಂದು ಸುಸಮಯ.ಹಾಗಾಗಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಂಡು, ಸಮೀಕ್ಷೆಯನ್ನು ಯಶಸ್ವಿ ಮಾಡೋಣ. ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಒಂದು ಸಮಿತಿ ರಚಿಸಿ,ಅದರ ಅಡಿಯಲ್ಲಿ ತಾಲೂಕು ಸಮಿತಿಗಳನ್ನು ಮಾಡಿ,ಯಾರೊಬ್ಬರು ಸಮೀಕ್ಷೆಯಿಂದ ಹೊರಗೆ ಉಳಿಯದಂತೆ ಎಚ್ಚರ ವಹಿಸಬೇಕಾಗಿದೆ.ಯಾರು ಸಹ ಅನ್ಯತಾ ಭಾವಿಸದೆ ತಮ್ಮ ವಯುಕ್ತಿಕ ಪ್ರತಿಷ್ಠೆಗಳನ್ನು ಬದಿಗಿಟ್ಟು ಸಮೀಕ್ಷೆಯ ಬಗ್ಗೆ ಸಮುದಾಯಕ್ಕೆ ಅರಿವು ಮೂಡಿಸುವ ಕೆಲಸ ಮಾಡಬೇಕು.ಆ ಮೂಲಕ ಸಮಾಜ ಕಟ್ಟುವ, ದೇಶ ಕಟ್ಟುವ ಕೆಲಸ ಮಾಡಬೇಕೆಂದರು.

ಸಭೆಯಲ್ಲಿ ಮುಖಂಡರಾದ ನರಸಿಂಹಯ್ಯ,ಪಿ.ಎನ್.ರಾಮಯ್ಯ,ಕೊಟ್ಟ ಶಂಕರ್,ಮಧುಗಿರಿ ನರಸಿಂಹಯ್ಯ,ಕೇಬಲ್ ರಘು,ಮೋಹನ್ ಕುಮಾರ್,ನರಸಿಂಹಮೂರ್ತಿ,ಕೆಂಪರಾಜು, ಕೊಡಿಯಾಲ ಮಹದೇವ್,ಗೂಳರಿಮೆ ನಾಗರಾಜು ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಇದೇ ವೇಳೆ ಬಾಬು ಜಗಜೀವನ್‌ರಾಂ ಪ್ರಶಸ್ತಿ ಪಡೆದ ಹಿರಿಯ ಚಿಂತಕ ಕೆ.ದೊರೆರಾಜು ಅವರನ್ನು ಅಭಿನಂದಿಸಲಾಯಿತು.

ಸಾಕಷ್ಟು ಚರ್ಚೆಯ ನಂತರ ಡಾ.ವೈ.ಕೆ.ಬಾಲಕೃಷ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಮಿತಿಯನ್ನು ರಚಿಸಿದ್ದು,ಜಿಲ್ಲಾ ಸಮಿತಿಗೆ ತಿಪಟೂರಿನಿಂದ ಶಾಂತಪ್ಪ,ಡಿ.ಕೆ.ಕುಮಾರ್, ಗುಬ್ಬಿಯಿಂದ ಕೊಡಿಯಾಲ ಮಹದೇವ್ ಮತ್ತು ಜಗದೀಶ್,ತುಮಕೂರು ಗ್ರಾಮಾಂತರದಿಂದ ನಾಗರಾಜು ಗೂಳರಿವೆ ಮತ್ತು ಯೋಗೀಶ್ ಸೋರೆಕುಂಟೆ, ತುಮಕೂರು ನಗರದಿಂದ ಕೇಬಲ್ ರಘು, ಪಿ.ಎನ್.ರಾಮಯ್ಯ,ಕೊರಟಗೆರೆಯಿಂದ ಗಂಗಣ್ಣ,ಸಿದ್ದಗಂಗಯ್ಯ,ಶಿರಾದಿಂದ ಸಣ್ಣಬೂತಯ್ಯ,ಕೊಟ್ಟಶಂಕರ್, ತುರುವೇಕೆರೆ ಯಿಂದ ಗಂಗಾಧರ್ ಬಾಣಸಂದ್ರ, ಮೂರ್ತಿ, ಚಿ.ನಾ.ಹಳ್ಳಿ ಲಿಂಗದೇವರು, ಚನ್ನಬಸವಯ್ಯ, ಕುಣಿಗಲ್ ಶಿವಶಂಕರ್, ಶ್ರೀನಿವಾಸ್, ಮಧುಗಿರಿ ನರಸಿಂಹಯ್ಯ, ದೊಡ್ಡೇರಿ ಕಣಿಮಯ್ಯ, ಪಾವಗಡದಿಂದ ರಮೇಶ್ ಮತ್ತು ನಾರಾಯಣ ಅವರುಗಳನ್ನು ಒಳಗೊಂಡ ಸಮಿತಿ ರಚಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...