ತುಮಕೂರು | ಮುಸ್ಲಿಂ ಸಾಹಿತ್ಯ ಪ್ರಶಸ್ತಿಗೆ ಡಾ.ಮಿರ್ಜಾ ಬಷೀರ್‌ರ ʼಅಬ್ರಕಡಬ್ರʼ ಕೃತಿ ಆಯ್ಕೆ

Date:

ಕರ್ನಾಟಕ ಮುಸ್ಲಿಂ ಲೇಖಕರ ಸಂಘವು ಪ್ರತಿ ವರ್ಷದಂತೆ ಕೊಡಮಾಡುವ 2023ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಗೆ ಕನ್ನಡದಲ್ಲಿ ಪ್ರಕಟವಾಗಿರುವ ಹಿರಿಯ ಸಾಹಿತಿ, ಕತೆಗಾರ ಡಾ.ಮಿರ್ಜಾ ಬಷೀರ್‌ ಅವರ ʼಅಬ್ರಕಡಬ್ರʼ ಕಥಾಸಂಕಲನ ಆಯ್ಕೆಯಾಗಿದೆ.

ಮುಸ್ಲಿಂ ಲೇಖಕರ ಸಂಘದ ಅಧ್ಯಕ್ಷ ಉಮರ್‌ ಯು ಹೆಚ್ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ್ದು, “ಬೆಂಗಳೂರಿನ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪದವಿ ಪಡೆದು, ಕೆಪಿಎಸ್‌ಸಿ ಪರೀಕ್ಷೆ ಮೂಲಕ ಸರ್ಕಾರಿ ಸೇವೆಗೆ ಸೇರ್ಪಡೆಯಾಗಿ, ಪಶು ಸಂಗೋಪನಾ ಇಲಾಖೆಯಲ್ಲಿ ಸುಮಾರು 34 ವರ್ಷಗಳ ಕಾಲ ಪಶು ವೈದ್ಯರಾಗಿ ಸೇವೆ ಸಲ್ಲಿಸಿ, ಸ್ವಯಂ ನಿವೃತ್ತಿ ಪಡೆದಿರುವ ಡಾ.ಮಿರ್ಜಾ ಬಷೀರ್‌ ಮೂಲತಃ ಚಿತ್ರದುರ್ಗದ ಚಳ್ಳಕೆರೆಯವರು” ಎಂದು ತಿಳಿಸಿದ್ದಾರೆ.

ʼಬಟ್ಟೆಯಿಲ್ಲದ ಊರಿನಲ್ಲಿʼ, ʼಜಿನ್ನಿʼ ಹಾಗೂ ʼಹಾರುವ ಹಕ್ಕಿ ಮತ್ತು ಇರುವೆʼ ಡಾ.ಮಿರ್ಜಾ ಬಷೀರ್‌ ಅವರ ಇತರ ಪ್ರಕಟಿತ ಕಥಾಸಂಕಲನಗಳು. ʼಗಂಗೆ ಬಾರೆ ಗೌರಿ ಬಾರೆʼ ಇವರ ಪ್ರಕಟಿತ ಪಶುವೈದ್ಯ ವೃತ್ತಿಯ ಅನುಭವ ಕಥನ. ಪ್ರಸ್ತುತದಲ್ಲಿ ತುಮಕೂರಿನಲ್ಲಿ ವಾಸವಾಗಿರುವ ಡಾ.ಮಿರ್ಜಾ ಬಷೀರ್ ಅವರ ಅನೇಕ ಕಥೆಗಳು ನಾಡಿನ ಹಲವು ದಿನಪತ್ರಿಕೆ ಮತ್ತು ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿವೆ. ಇವರ ಕಥೆಗಳು ಹಲವು ವಿಶ್ವವಿದ್ಯಾಲಯಗಳ ಪದವಿ ಪಠ್ಯಗಳಲ್ಲಿ ಸೇರ್ಪಡೆಗೊಂಡಿವೆ. ಇವರ ʼತಬ್ಬಲಿಗಳುʼ ನಾಟಕ ಕೃಷಿ ವಿಶ್ವವಿದ್ಯಾಲಯದ ಮೊದಲ ವರ್ಷದ ಪದವಿಗೆ ಪಠ್ಯವಾಗಿದೆ. ಡಾ. ಮಿರ್ಜಾ ಬಷೀರ್‌ ಅವರ ಕಥೆಗಳು ಕೇರಳ ರಾಜ್ಯದ 9ನೇ ತರಗತಿಯ ಕನ್ನಡ ಭಾಷಾ ಪಠ್ಯದಲ್ಲಿ ಸೇರ್ಪಡೆಗೊಂಡಿದ್ದು, ಕೆಲವು ಕಥೆಗಳು ತೆಲುಗಿಗೆ ಭಾಷಾಂತರವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಅಬ್ರಕಡಬ್ರ

ಡಾ.ಮಿರ್ಜಾ ಬಷೀರ್‌ ಅವರ ‘ಜಿನ್ನಿ’ ಕಥಾಸಂಕಲನಕ್ಕೆ ಶಿವಮೊಗ್ಗ ಕರ್ನಾಟಕ ಸಂಘದಿಂದ ಲಂಕೇಶ್ ಪ್ರಶಸ್ತಿ ಮತ್ತು ತುಮಕೂರಿನ ಅನನ್ಯ ಪ್ರಕಾಶನದಿಂದ ಕೆ. ಸಾಂಬಶಿವಪ್ಪ ಸ್ಮಾರಕ ಸಾಹಿತ್ಯ ಪ್ರಶಸ್ತಿ, ‘ಹಾರುವ ಹಕ್ಕಿ ಮತ್ತು ಇರುವೆ’ ಕಥಾಸಂಕಲನಕ್ಕೆ ಬೆಂಗಳೂರಿನ ಸ್ವಾಭಿಮಾನಿ ಕರ್ನಾಟಕದಿಂದ ವಾರ್ಷಿಕ ಕಥಾಸಂಕಲನ ಪ್ರಶಸ್ತಿ ಮತ್ತು ಡಾ. ಬೆಸಗರಹಳ್ಳಿ ರಾಮಣ್ಣ ವಾರ್ಷಿಕ ಕಥಾಸಂಕಲನ ಪ್ರಶಸ್ತಿ ಹಾಗೂ ‘ಗಂಗೆ ಬಾರೆ ಗೌರಿ ಬಾರೆ’ ಕೃತಿಗೆ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ‘ಅಮ್ಮ’ ಪ್ರಶಸ್ತಿಗಳು ಲಭಿಸಿವೆ. 2024ನೇ ಸಾಲಿನ ತುಮಕೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಡಾ.ಮಿರ್ಜಾ ಬಷೀರ್‌ ಅವರನ್ನು ಗೌರವಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಕನ್ನಡ ಅನ್ನದ ಭಾಷೆಯಾಗಬೇಕು : ಡಾ.ಆಶಾರಾಣಿ ಬಗ್ಗನಡು

ದಿವಂಗತ ಯು ಟಿ ಫರೀದ್ ಸ್ಮರಣಾರ್ಥ ನೀಡಲಾಗುವ ʼಮುಸ್ಲಿಂ ಸಾಹಿತ್ಯ ಪ್ರಶಸ್ತಿʼಯು ₹10,000 ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿದೆ. ಪ್ರಶಸ್ತಿಗೆ 32 ಕೃತಿಗಳು ಬಂದಿದ್ದು, ಹಿರಿಯ ಸಾಹಿತಿ ಡಾ. ಕೆ ಷರೀಫಾ, ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಮನ್ವಯಾಧಿಕಾರಿ ಡಾ. ಮುಸ್ತಾಫ ಕೆ ಹೆಚ್ ಹಾಗೂ ಸಾಹಿತಿ ಅಬ್ದುಲ್‌ ರಹಿಮಾನ್‌ ಕುತ್ತೆತ್ತೂರು ತೀರ್ಪುಗಾರರಾಗಿ ಸಹಕರಿಸಿದ್ದಾರೆ. ಡಿಸೆಂಬರ್‌ ಕೊನೆಯಲ್ಲಿ ತುಮಕೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಉಮರ್‌ ಯು ಹೆಚ್ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...