ತುಮಕೂರು | ಸೇತುವೆಗಳು ಕುಸಿಯುತ್ತಿರುವ ಇಂದಿನ ಕಾಲದಲ್ಲಿ ಸ್ನೇಹ ಕುಸಿಯದಂತೆ ಎಚ್ಚರಿಕೆ ವಹಿಸಿ : ಬರಗೂರು ರಾಮಚಂದ್ರಪ್ಪ

Date:

“ಕಟ್ಟಡಗಳು, ಸೇತುವೆಗಳು ಕುಸಿಯುತ್ತಿರುವ ಇಂದಿನ ಕಾಲದಲ್ಲಿ, ಮನುಷ್ಯ, ಮನುಷ್ಯರ ನಡುವಿನ ಸ್ನೇಹ ಕುಸಿಯದಂತೆ ಎಚ್ಚರಿಕೆ ವಹಿಸಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ” ಎಂದು ಡಾ ಬರಗೂರು ರಾಮಚಂದ್ರಪ್ಪ ಹೇಳಿದರು.

ತುಮಕೂರು ನಗರದ ಕನ್ನಡ ಭವನದಲ್ಲಿ ಅಮರಜೋತಿ ಕಲಾವೃಂದದ ವತಿಯಿಂದ ಆಯೋಜಿಸಲಾಗಿದ್ದ “ಡಾ.ರಾಜ್‌ರತ್ನ” ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಚಲನಚಿತ್ರ ನಟ ಸುಂದರ್‌ರಾಜ್ ಮತ್ತು ಡಾ.ಲಕ್ಷ್ಮೀಣ್ ದಾಸ್ ಅವರಿಗೆ ಪ್ರಶಸ್ತಿ ಪ್ರದಾನಿಸಿ ಮಾತನಾಡಿದರು.

“ಡಾ.ರಾಜ್‌ಕುಮಾರ್ ವೃತ್ತಿ ರಂಗಭೂಮಿ ಮತ್ತು ಹವ್ಯಾಸಿ ರಂಗಭೂಮಿ. ಹಾಗೆಯೇ ಕಲಾತ್ಮಕ ಚಿತ್ರ ಮತ್ತು ವಾಣಿಜ್ಯಮಯ ಚಿತ್ರಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡ ಅತ್ಯಂತ ಸ್ನೇಹಮಯ ಜೀವಿ” ಎಂದು ಬಣ್ಣಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಲವಾರು ಅವಮಾನಗಳನ್ನು ಸಹಿಸಿ, ರಂಗಭೂಮಿ ಮತ್ತು ಚಲನಚಿತ್ರ ರಂಗ ಎರಡರ ನಡುವೆ ಸೇತುವೆ ಕಟ್ಟಿದ ಸಾಮಾಜಿಕ ಸಾಧಕ ಡಾ.ರಾಜ್‌ಕುಮಾರ್, ದಿಬ್ಬೂರು ಮಂಜು ಅವರಂತಹ ಕಲಾವಿದರಿಂದ ಜೀವಂತವಾಗಿದ್ದಾರೆ. ತನ್ನನ್ನು ದೇವರೆಂದು ನಂಬಿದ ಜನರನ್ನೇ ದೇವರೆಂದುಕೊಂಡು, ಅವರ ನಂಬಿಕೆಗೆ ಚ್ಯುತಿ ಬಾರದಂತೆ ತೆರೆಯ ಮೇಲೆ ಮತ್ತು ನಿಜ ಜೀವನದಲ್ಲಿ ನಡೆದುಕೊಂಡು ಮೇರು ವ್ಯಕ್ತಿತ್ವ ಡಾ.ರಾಜ್‌ಕುಮಾರ್ ಅವರದ್ದು. ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ವಿಚಾರ” ಎಂದು ಡಾ.ಬರಗೂರು ರಾಮಚಂದ್ರಪ್ಪ ಹೇಳಿದರು.

1962ರಲ್ಲಿ ನೆರೆ ಬಂದು ಅಪಾರ ನಷ್ಟ ಅನುಭವಿಸಿದಾಗ, ಕನ್ನಡ ಪತ್ರಿಕೆಗಳ ಕೋರಿಕೆಯಂತೆ ಕನ್ನಡ ಚಲನಚಿತ್ರದ ಎಲ್ಲಾ ಕಲಾವಿದರು ಡಾ.ರಾಜ್‌ಕುಮಾರ್ ನೇತೃತ್ವದಲ್ಲಿ ಒಂದು ತಿಂಗಳ ಕಾಲ ಪ್ರವಾಸ ಮಾಡಿ, ಹಣ ಸಂಗ್ರಹಿಸಿ ಸಂತ್ರಸ್ಥರಿಗೆ ನೆರವಾಗುವ ಸಂದರ್ಭದಲ್ಲಿ ಅವರನ್ನು ಮೊದಲ ಬಾರಿಗೆ ನೋಡಿದ ನಾನು, ಅವರ ಕೊನೆಗಾಲದ 20 ವರ್ಷಗಳ ಕಾಲ ಅವರ ಅತ್ಯಾಪ್ತನಾಗಿ ಇರುವ ಅವಕಾಶ ಸಿಕ್ಕಿದ್ದು, ನಿಜಕ್ಕೂ ನನ್ನ ಸೌಭಾಗ್ಯ. ಸಿನಿಮಾವನ್ನು ಮೀರಿ ಬೆಳೆದ ವ್ಯಕ್ತಿತ್ವ ಡಾ.ರಾಜ್‌ಕುಮಾರ್ ಅವರದ್ದು, ಬಲಗೈಯಲ್ಲಿ ನೀಡಿದ್ದು ಎಡಗೈಗೆ ಗೊತ್ತಾಗಬಾರದು ಎಂಬಂತೆ, ಅಶಕ್ತ ಕಲಾವಿದರಿಗೆ ನೆರವು ನೀಡಲು ಅನೇಕ ಸಂಗೀತ ಸಂಜೆ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ರಾಜ್ಯಾದ್ಯಂತ ಇರುವ ರಂಗಮಂದಿರಗಳ ನಿರ್ಮಾಣಕ್ಕಾಗಿ 67 ಲಕ್ಷ ರೂ ದೇಣಿಗೆ ಸಂಗ್ರಹಿಸಿ ನೀಡಿದವರು ಡಾ.ರಾಜ್. ವಿದ್ಯಾರ್ಥಿ ನಿಧಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ದೇಣಿಗೆ ಹೀಗೆ ಹಲವು ಸಮಾಜ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದರು ಎಂದು ಬರಗೂರು ನೆನೆಪಿಸಿದರು.

ಡಾ.ರಾಜ್‌ರತ್ನ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಚಲನಚಿತ್ರ ನಟ ಸುಂದರರಾಜ್, “ಕನ್ನಡ ಸಿನಿಮಾ ರಂಗದಲ್ಲಿ ದುಡಿದ ನನಗೆ ಡಾ.ರಾಜ್‌ಕುಮಾರ್ ಪ್ರಶಸ್ತಿ ಬಂದರೆ ಹೇಗಿರುತ್ತೇ ಎಂದು ಕಲ್ಪನೆ ಮಾಡಿಕೊಳ್ಳುತಿದ್ದ ನನಗೆ ಅಮರಜೋತಿ ಕಲಾವೃಂದ ಡಾ.ರಾಜ್‌ರತ್ನ ಪ್ರಶಸ್ತಿ ನೀಡುವ ಮೂಲಕ ನನ್ನ ಕನಸನ್ನು ನನಸಾಗಿಸಿದೆ. ಇಂದೊಂದು ಸಾರ್ಥಕ ಕ್ಷಣ. ಕಲಾವಿದರಿಗೆ ಪ್ರೇಕ್ಷಕರ ಚಪ್ಪಾಳೆಯೇ ಬಹುಮಾನ. ಡಾ.ರಾಜ್‌ಕುಮಾರ್ ಸಹ ಕಲಾವಿದರೊಂದಿಗೆ ಎಷ್ಟು ವಿನಮ್ರವಾಗಿ ನಡೆದುಕೊಳ್ಳುತ್ತಿದ್ದರು ಎಂಬುದನ್ನು ನಾನು ಕಣ್ಣಾರೆ ಕಂಡಿದ್ದೇನೆ.ಒಂದು ಮುತ್ತಿನ ಕಥೆ ನನ್ನ ವೃತ್ತಿ ಜೀವನದಲ್ಲಿಯೇ ಮರೆಯಲಾರದ ಸಿನಿಮಾ. ನಾನು ಅತ್ಯಂತ ಗೌರವದಿಂದ ಕಾಣುತ್ತಿದ್ದ ಶಂಕರ್‌ನಾಗ್ ಈ ಸಿನಿಮಾ ನಿರ್ದೇಶಿಸಿದರೆ, ಡಾ.ರಾಜ್‌ಕುಮಾರ್ ಮುಖ್ಯಭೂಮಿಕೆಯಲ್ಲಿದ್ದರು. ಇಬ್ಬರು ವಿಭಿನ್ನ ಕನಸುಗಳನ್ನ ಹೊಂದಿದ್ದ ಕಲಾವಿದರು” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಮಕೂರು ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ವಹಿಸಿದ್ದರು. ಡಾ.ಲಕ್ಷ್ಮಣ್ ದಾಸ್ ಡಾ.ರಾಜ್‌ಕುಮಾರ್ ಅವರ ಕುರಿತು ಮಾತನಾಡುವ ಜೊತೆಗೆ, ಅವರ ಕಂದ ಪದ್ಯಗಳನ್ನು ಹಾಡಿ, ನೆರೆದಿದ್ದವರನ್ನು ಮಂತ್ರ ಮುಗ್ಧಗೊಳಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು | ಮೀನು ರಫ್ತು ಕಂಪನಿಯಲ್ಲಿ ಭಾರೀ ಬೆಂಕಿ ಅವಘಡ; 10 ಕೋಟಿ ರೂ. ಮೌಲ್ಯದ ಸೊತ್ತು ನಷ್ಟ

ಇದೇ ವೇಳೆ ಡಾ.ಓ.ನಾಗರಾಜು, ಡಾ.ಎಲ್.ಸುಮನಡಾ, ಸುಧಾ ಮಂಜುನಾಥ್, ಡಾ.ಎ.ಎಸ್.ರಾಜ ಶೇಖರ್, ಡಾ.ಆದರ್ಶ್‌ ಅವರನ್ನು ಅಭಿನಂದಿಸಲಾಯಿತು.

ಅಮರಜೋತಿ ಕಲಾವೃಂದದ ದಿಬ್ಬೂರು ಮಂಜುನಾಥ್ ಸುಮಾರು 2 ಗಂಟೆಗಳಿಗೂ ಹೆಚ್ಚು ಕಾಲ ಡಾ.ರಾಜ್ ಸಿನಿಮಾಗಳ ಹಾಡುಗಳನ್ನು ಹಾಡುವ ಮೂಲಕ ಮನರಂಜಿಸಿದರು. ವೇದಿಕೆಯಲ್ಲಿ ಡಾ.ನಾಗಭೂಷಣ್ ಬಗ್ಗನಡು, ಡಾ.ಲಕ್ಷ್ಮೀರಂಗಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...