ತುಮಕೂರು | ರಾಜ್ಯದಲ್ಲಿ ಆರ್ ಎಸ್ಎಸ್ ಬ್ಯಾನ್ ಮಾಡಲು ಡಿಎಸ್ಎಸ್ ಒತ್ತಾಯ

Date:

ಸಂವಿಧಾನ ಬದ್ದ ನೊಂದಾಯಿತ ಸಂಸ್ಥೆಯಲ್ಲದ ಆರ್.ಎಸ್.ಎಸ್‌ನ್ನು ದೇಶದಲ್ಲಿ ಬ್ಯಾನ್ ಮಾಡಬೇಕು, ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆ ಮಾಡಿದ,ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರ ಮೇಲೆ ಶೂ ಎಸದ ವ್ಯಕ್ತಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಹತ್ತಾರು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು, ಬ್ರಾಹ್ಮಣವಾದವನ್ನು ಮುಂದಿಟ್ಟು,ಸಂವಿಧಾನದ ಬದಲಿಗೆ ಮನುಸೃತಿಯನ್ನು ತಮ್ಮ ಆಡಳಿತ ಗ್ರಂಥವಾಗಿ ಮಾರ್ಪಡಿಸುವ ಗುರಿ ಹೊಂದಿರುವ ಆರ್.ಎಸ್,ಎಸ್ ಸಂಘಟನೆಯನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕೆಂದು ಎ.ಡಿ.ಸಿ. ಡಾ..ಎನ್.ತಿಪ್ಪೇಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಜಾತ್ಯಾತೀತ ಯುವ ವೇದಿಕೆ ಅಧ್ಯಕ್ಷ ಡ್ಯಾಗೇರಹಳ್ಳಿ ವಿರೂಪಾಕ್ಷ, 1950 ರ ದಶಕದಲ್ಲಿಯೇ ಡಾ. ಬಾಬಾ ಸಾಹೇಬ ಅಂಬೇಡ್ಕರ್ ರವರು ಯಾವುದೇ ಕಾರಣಕ್ಕೂ ಆರ್.ಎಸ್.ಎಸ್. ಹಾಗೂ ವಿಶ್ವ ಹಿಂದೂ ಮಹಾಸಭಾದಂತಹ ಸಂಘಟನೆಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬಾರದೆಂದು ರಾಜಕೀಯ ಪರಿಶಿಷ್ಟ ಜಾತಿಗಳ ಒಕ್ಕೂಟದ ಪ್ರಣಾಳಕೆಯಲ್ಲಿ ಎಚ್ಚರಿಕೆ ನೀಡಿದ್ದರು. ಅಷ್ಟಲ್ಲದೇ ಆರ್.ಎಸ್.ಎಸ್. ಅಪಾಯಕಾರಿ ಸಂಘಟನೆ ಎಂದು ಘೋಷಿಸಿದ್ದರು. 15 ಆಗಸ್ಟ್ 1947 ರಂದು ಭಾರತದ ಸ್ವಾತಂತ್ರಗೊಂಡು,26 ಜನವರಿ 1950 ರಂದು ಅಂಬೇಡ್ಕರ್ ರವರು ರಚಿಸಿದ ಭಾರತ ಸಂವಿಧಾನ ಜಾರಿಗೊಂಡಾಗ ಇದೇ ಆರ್.ಎಸ್.ಎಸ್. ಪತ್ರಿಕೆ ಭಾರತ ಸಂವಿಧಾನದಲ್ಲಿ ಏನೂ ಇಲ್ಲ ವಾಸ್ತವವಾಗಿ ನನ್ನ ಮನಸ್ಕೃತಿ ಪ್ರಾಚೀನವಾದುದ್ದು, ಜಗತ್ತಿನ ಜನರೆಲ್ಲಾ ಅದರ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ. ಆದರೆ ಸಂವಿಧಾನ ಪಂಡಿತರಿಗೆ ಅದು ಏನೂ ಅಲ್ಲವೆಂದು ಟೀಕಿಸಿತು.ಆ ಮೂಲಕ ಮನುವಾದಿಗಳು ಮನಸೃತಿಯನ್ನು ಪೂಜಿಸಿ ಭಾರತದ ಸಂವಿಧಾನವನ್ನು ಅಂದಿನಿಂದಲೂ ತಿರಸ್ಕಾರದ ಮನೋಭಾವದಿಂದಲೆ ನೋಡುತ್ತಾ ಬಂದಿರುತ್ತಾರೆ.ಹಾಗಾಗಿ ಮಹಿಳೆಯರು, ದಲಿತರು, ಹಿಂದುಳಿದ ವರ್ಗದವರೆಗೆ, ಎಳಷ್ಟು ಗೌರವ ಭಾವನೆ ತೊರೆದ ಆರ್.ಎಸ್.ಎಸ್‌ನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕೆಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೋರಾಟಗಾರರಾದ ಕುಂದೂರು ಮುರುಳಿ ಮಾತನಾಡಿ,ಹಿಂದೂ ಮಹಿಳೆಯರಿಗೆ ಪುರುಷರಷ್ಟೆ ಸಮನಾ ಹಕ್ಕು ನೀಡಲು ಬಯಸಿದ್ದು ಹಿಂದೂ ಕೋಡ್ ಬಿಲ್ ಜಾರಿಯಾಗಲು ಅಂಬೇಡ್ಕರ್ ಹೋರಾಡುತ್ತಿದ್ದರೆ ಅದರ ಪ್ರತಿಯನ್ನು ಸುಟ್ಟು ಹಾಕಿ ಆರ್.ಎಸ್.ಎಸ್. ವಿಕೃತಿ ಮೇರೆದಿತ್ತು. ಇತ್ತಿಚೆಗೆ ಭಾರತದ ಮುಖ್ಯ ನ್ಯಾಯಾದೀಶರಾದ ಜೆಸ್ವಿಸ್ ಗವಾಯಿ ರವರ ಮೇಲೆ ಶೂ ಏಸೆಯಲಾಗಿತ್ತು,ಆ ಕೃತ್ಯ ಮಾಡಿದ ವಕೀಲ ರಾಕೇಶ್ ಕಿಶೋರ್ ಸನಾತನ ಧರ್ಮ ಉಳಿಸಲು ಶೂ ಏಸೆದೆ ಎಂದು ಎದೆ ಉಬ್ಬಿಸಿ ಹೇಳುತ್ತಾನೆ. ಭಾರತ ದೇಶದಲ್ಲಿ ಆತನೂ ವಕೀಲನಾಗಿದ್ದು, ಮನಸೃತಿಯಿಂದಲೋ ಅಥವಾ ಸಂವಿಧಾನದಿಂದಲೋ ಭಾರತ ಸಂವಿಧಾನವನ್ನು ಕಾಪಾಡುವ ಸುಪ್ರೀಮ್ ಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.ಭಾರತ ಸಂವಿಧಾನವನ್ನಲ್ಲವೆ ಈ ಪಾಪಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬೆಂಬಲಿಸುತ್ತಿರುವ ಎಲ್ಲರೂ ಆರ್.ಎಸ್.ಎಸ್. ಹಾಗೂ ಬಿ.ಜೆ.ಪಿ. ಬೆಂಬಲಿಗರೆ ಯಾಕಾಗಿದ್ದಾರೆ,ಇದಕ್ಕೆ ಉತ್ತರ ಅವರಿಗೆ ಮನಸ್ಕೃತಿ ಜಾರಿಯಾಗಬೇಕಾಗಿದೆ. ಭಾರತ ಸಂವಿಧಾನದ ಮೇಲೆ ಯುದ್ದ ಸಾರಿರುವ ಆರ್.ಎಸ್.ಎಸ. ಮತ್ತು ಬಿ.ಜೆ.ಪಿ. ರವರ ಆಟ ಅತೀರೇಖವಾಗಿದೆ ಇಂತಹ ದೇಶ ದ್ರೋಹಿಗಳಿಗೆ ತಕ್ಕ ಪಾಠ ಕಲಿಸದೇ ಇದ್ದರೆ ಭಾರತದ ಸಂವಿಧಾನಕ್ಕೆ ಮುಂದೊಂದು ದಿನ ಅಪಾಯ ಕಟ್ಟಿಟ್ಟಬುತ್ತಿ ಎಂದರು.

ಆರ್.ಎಸ್.ಎಸ್. 100 ಪೂರೈಸಿದೆ ಎಂದು ಕಾನೂನು ಬಾಹೀರವಾಗಿ ತನಗೆ ಬೇಕಾದ ಹಾಗೇ ಸಂಭ್ರಮಾಚರಣೆ ತೊಡಗಿದೆ. ಮುಂಗಡವಾಗಿ ಅನುಮತಿ ಇಲ್ಲದೆ ತನಗೆ ಬೇಕಾದ ಸ್ಥಳಗಳಲ್ಲಿ ಪಥ ಸಂಚಲನ ಮಾಡಿ ತೊಂದರೆ ಕೊಡುವುದನ್ನು ಸಚಿವರಾದ ಪ್ರಿಯಾಂಕ ಖರ್ಗೆ ರವರು ಅನುಮತಿ ಇಲ್ಲದೇ ಸರಕಾರಿ ಇತರೆ ಸ್ಥಳಗಳಲ್ಲಿ ಕಾರ್ಯಾಕ್ರಮಕ್ಕೆ ಅವಕಾಶ ಕೊಡಬಾರದೆಂದು ಸರಕಾರಕ್ಕೆ ಪತ್ರ ಬರೆದ ಪ್ರಯುಕ್ತ ಒಬ್ಬ ಮನುವಾದಿ ಆರ್.ಎಸ್.ಎಸ್. ಕಾರ್ಯಕರ್ತ ಪ್ರಿಯಾಂಕ ಖರ್ಗೆ ರವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಶಬ್ದ ಬಳಿಸಿದಲ್ಲದೇ ಅವರ ಪೋನಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದರು.ಇಂತಹ ಕೀಳು ಮಟ್ಟದ ಮನಸ್ಸತಿ ಹೊಂದಿರುವ ಆರ್.ಎಸ್.ಎಸ್ ಸಂಘಟನೆಯನ್ನು ಬ್ಯಾನ್ ಮಾಡಬೇಕು.ಉದ್ದೇಶಪೂರ್ವಕವಾಗಿ ಚಿತ್ತಾಪುರದಲ್ಲಿ ಆರ್.ಎಸ್.ಎಸ್ ಮೆರವಣಿಗೆ ನಡೆಸುವ ಹುನ್ನಾರಕ್ಕೆ ಕಡಿವಾಣ ಹಾಕಬೇಕಾಗಿದೆ.ಇಂತಹ ಮನುವಾದಿಗಳ ವಿರುದ್ಧ ಎದೆಗೊಟ್ಟು ಮುನ್ನಡೆಯಬೇಕು.ಪ್ರಭುದ್ದ ಭಾರತದಡೆಗೆ ಇನ್ನೊಂದಿಷ್ಟು ಗಟ್ಟಿಯಾಗಿ ಹೆಜ್ಜೆ ಇಡಬೇಕು.ಚಾತುರ್ವಣ್ರ ಭಾರತವನ್ನು ಕಟ್ಟಲು ಹೋರಟ ಸಂಘ ಪರಿವಾರದ ಹಗಲುಗನಸು ಪ್ರಭುದ್ಧ ಭಾರತ ನಿರ್ಮಾಣಕ್ಕಾಗಿ ಪಣತೊಡೋಣ ಎಂದು ಕುಂದೂರು ಮುರುಳಿ ತಿಳಿಸಿದರು.

ಈ ವೇಳೆ ಮುಖಂಡರಾದ ಕುಪ್ಪೂರ ಶ್ರೀಧರ್, ಜಿಲ್ಲಾ ಸಂಚಾಲಕರಾದ ಬಿ.ಆರ್.ಕೃಷ್ಣಸ್ವಾಮಿ, ಕೆಸ್ತೂರು ನರಸಿಂಹಮೂರ್ತಿ, ಚಂದ್ರಶೇಖರ್ ಗಡಬನಹಳ್ಳಿ, ದಯಾನಂದ್, ಮಂಜು ಗೊಲ್ಲಹಳ್ಳಿ,ಉಗ್ರನರಸಿಂಹಯ್ಯ, ತ್ರಿನೇಶ್, ರಾಯಣ್ಣ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...