ತುಮಕೂರು ದಸರಾ ಉತ್ಸವ : ಶಕ್ತಿ ದೇವತೆಯನ್ನು ಪ್ರತಿಷ್ಠಾಪಿಸಲು ಅರ್ಚಕರ ಸಲಹೆ

Date:

ತುಮಕೂರಿನಲ್ಲಿ ಪ್ರಥಮ ಬಾರಿಗೆ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ದಸರಾ ಉತ್ಸವವನ್ನು ಶಕ್ತಿ ದೇವತೆಯನ್ನು ಪ್ರತಿಷ್ಠಾಪಿಸುವ ಮೂಲಕ ಧಾರ್ಮಿಕ ಆಚರಣೆಯ ಪೂಜಾ ವಿಧಿ ವಿಧಾನಗಳೊಂದಿಗೆ ಪ್ರಾರಂಭಿಸಬೇಕೆಂದು ಜಿಲ್ಲೆಯ ವಿವಿಧ ದೇವಾಲಯಗಳಿಂದ ಆಗಮಿಸಿದ ಅರ್ಚಕರು ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು.

ದಸರಾ ಉತ್ಸವದ ಧಾರ್ಮಿಕ ಪೂಜಾ ವಿಧಿ ವಿಧಾನಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಂಜೆ ಜರುಗಿದ ಸಭೆಯಲ್ಲಿ ಈ ಸಲಹೆ ನೀಡಲಾಯಿತು.

ದಸರಾ ಉತ್ಸವದ ಅಂಗವಾಗಿ ಅಮವಾಸ್ಯೆ ನಂತರ ಪ್ರಾರಂಭವಾಗುವ ನವರಾತ್ರಿಯ ಮೊದಲ ದಿನವಾದ ಅಕ್ಟೋಬರ್ 3 ರಂದು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಶಕ್ತಿ ದೇವತೆಯನ್ನು ಪ್ರತಿಷ್ಠಾಪಿಸಿ ಪ್ರತಿನಿತ್ಯ ವಿವಿಧ ಅಲಂಕಾರಗಳಿಂದ ದೇವಿಯನ್ನು ಸಿಂಗರಿಸಿ ಹೋಮ ಹವನಾದಿಗಳಿಂದ ಪೂಜಿಸಬೇಕು. ದೇವಿ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಬೆಳಗಿನಿಂದ ಸಂಜೆವರೆಗೂ ಪ್ರಸಾದ ವಿನಿಯೋಗವಾಗಬೇಕು. ಗಣಪತಿ ಪೂಜೆ, ಪೂಣ್ಯಾಹ ವಾಚನ, ಭೂಮಿ ಪೂಜೆ, ಧ್ವಜ ಪೂಜೆ, ಮಂಟಪ ಪೂಜೆ ಮತ್ತು ಧ್ವಜಾರೋಹಣ, ಗಣಪತಿ ಹೋಮ, ದುರ್ಗಾ ಹೋಮ, ಪ್ರತಿ ನಿತ್ಯ ಮಹಾ ಮಂಗಳಾರತಿ, ಮತ್ತಿತರ ಆಗಮ ಪೂಜಾ ಕೈಂಕರ್ಯಗಳು ನಡೆಯಬೇಕು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ ದಸರಾ ಉತ್ಸವದ ಪ್ರಯುಕ್ತ ಅಕ್ಟೋಬರ್ 3 ರಿಂದ ಪ್ರಾರಂಭವಾಗುವ ನವರಾತ್ರಿ ಹಬ್ಬವನ್ನು ಧಾರ್ಮಿಕ ರೀತಿಯಲ್ಲಿ ಆಚರಿಸಲು ಎಲ್ಲ ದೇವಾಲಯಗಳ ಮುಖ್ಯಸ್ಥರು, ಅರ್ಚಕರು ಪಾಲ್ಗೊಂಡು ಯಶಸ್ವಿಗೊಳಿಸಬೇಕು. ಅಲ್ಲದೆ ಅಕ್ಟೋಬರ್ 10ರಂದು ಜರುಗುವ ದುರ್ಗಾಷ್ಟಮಿ, ಅ.11ರಂದು ನಡೆಯುವ ಮಹಾನವಮಿ ಪೂಜೆ ಹಾಗೂ ಅ.12ರ ವಿಜಯದಶಮಿಯಂದು ಆಚರಿಸುವ ಶಮೀಪೂಜೆ ಹಾಗೂ ಬನ್ನಿಮರ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪುರಾತನ ಪರಂಪರೆಯನ್ನು ಮುಂದುವರೆಸಬೇಕೆಂದು ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಮಾತನಾಡಿ ದಸರಾ ಹಬ್ಬದ ಧಾರ್ಮಿಕ ಆಚರಣೆಗಳು ಪರಂಪರಾಗತವಾಗಿ ಆಚರಿಸಿಕೊಂಡು ಬಂದ ರೀತಿಯಲ್ಲಿ ಸಂಪನ್ನವಾಗಬೇಕು. ಜಿಲ್ಲೆಯ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾಡಳಿತದಿಂದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ಮಾತನಾಡಿ ತುಮಕೂರಿನಲ್ಲಿ ಮೊದಲ ಬಾರಿಗೆ ಆಚರಿಸುತ್ತಿರುವ ದಸರಾ ಉತ್ಸವವು ಮುಂದಿನ ಪೀಳಿಗೆಯವರು ಸ್ಮರಿಸುವಂತಿರಬೇಕು. ಯಾವುದೇ ಜಾತಿ, ಮತ, ಧರ್ಮ ಭೇದವಿಲ್ಲದೆ ಎಲ್ಲರೂ ಒಗ್ಗಟ್ಟಾಗಿ ಉತ್ಸವದಲ್ಲಿ ಪಾಲ್ಗೊಂಡು ಜಿಲ್ಲೆಯ ಖ್ಯಾತಿಯನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿದರು.

ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಮಾತನಾಡಿ ತುಮಕೂರು ದಸರಾ ಉತ್ಸವದ ಧಾರ್ಮಿಕ ಆಚರಣೆಗಳ ವಿಧಿ ವಿಧಾನಗಳ ಬಗ್ಗೆ ಅರ್ಚಕರ ಸಂಘದ ಅಧ್ಯಕ್ಷರು ಹಾಗೂ ಪ್ರತಿನಿಧಿಗಳು ಚರ್ಚಿಸಿ ಅಂತಿಮ ತೀರ್ಮಾನವನ್ನು ಕೈಗೊಂಡು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು. ನವರಾತ್ರಿ ಸಂದರ್ಭದಲ್ಲಿ ಪ್ರತಿನಿತ್ಯದ ದೇವಿ ಪೂಜೆಗೆ ಅರ್ಚಕರ ತಂಡವನ್ನು ನೇಮಿಸಲು ಹೆಸರನ್ನು ಸೂಚಿಸಬೇಕು. ನಿತ್ಯದ ಪೂಜೆಗೆ ಅಗತ್ಯ ಪೂಜಾ ಸಾಮಗ್ರಿಗಳನ್ನು ಜಿಲ್ಲಾಡಳಿತದಿಂದ ಒದಗಿಸಲಾಗುವುದು ಎಂದು ಅರ್ಚಕರಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಮುಜರಾಯಿ ತಹಶೀಲ್ದಾರ್ ಸವಿತಾ, ಅರ್ಚಕರ ಸಂಘದ ಜಿಲ್ಲಾಧ್ಯಕ್ಷ ರಾಮತೀರ್ಥನ್, ವಿವಿಧ ದೇವಾಲಯಗಳ ಅರ್ಚಕರು, ಉಪವಿಭಾಗಾಧಿಕಾರಿಗಳಾದ ಗೌರವ್ ಕುಮಾರ್ ಶೆಟ್ಟಿ ಹಾಗೂ ಗೋಟೂರು ಶಿವಪ್ಪ, ತಹಶೀಲ್ದಾರರಾದ ರಾಜೇಶ್ವರಿ, ವರದರಾಜ್, ಶಿರೀನ್ ತಾಜ್, ದೇವರಾಯನದುರ್ಗ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜಿ. ಹಿಮಂತರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ, ಸೇರಿದಂತೆ ಮತ್ತಿತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...