ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

Date:

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ಶ್ರೀ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

 ನವರಾತ್ರಿ ಪ್ರಯುಕ್ತ ಶ್ರೀ ಚಾಮುಂಡೇಶ್ವರಿಗೆ ವಿಶೇಷವಾಗಿ ಅಲಂಕಾರಿಸಲಾಗಿತ್ತು. ದಸರಾ ಉತ್ಸವದ 11ನೇ ದಿನವಾದ ಇಂದು ಏರ್ಪಡಿಸಿದ್ದ ಶ್ರೀ ಚಂಡಿಕಾ ಹೋಮದಲ್ಲಿ ಸಚಿವರು ಪಾಲ್ಗೊಂಡು ಜಿಲ್ಲೆಯ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿ ಹೋಮ ಕುಂಡಕ್ಕೆ ಪೂರ್ಣಾಹುತಿ ಅರ್ಪಿಸಿದರು. ನಂತರ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. 

 ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಸೇರಿದಂತೆ ಭಕ್ತ ಸಮೂಹ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...