ತುಮಕೂರು | ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ; ಪ್ರಣಾಳಿಕೆ ಬಿಡುಗಡೆ

Date:

ಶೈಕ್ಷಣಿಕ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆಗಾಗಿ ಶಿಕ್ಷಣ ತಜ್ಞರು ಹಾಗೂ ಶಿಕ್ಷಕರೊಂದಿಗೆ ಚರ್ಚಿಸಿ ಪ್ರಣಾಳಿಕೆ ಸಿದ್ದಪಡಿಸಲಾಗಿದೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ತಿಳಿಸಿದರು.

ತುಮಕೂರು ನಗರದ ಖಾಸಗಿ ಹೋಟೆಲ್‌ನಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯ ತಮ್ಮ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದರು.

“ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಜ್ವಲಂತ ಸಮಸ್ಯೆಗಳು ಇಂದಿಗೂ ಬಗೆಹರಿಯದೆ ಉಳಿದಿದ್ದು, ಅವುಗಳ ನಿವಾರಣೆಗಾಗಿ ರಾಜ್ಯದ ಹಲವಾರು ಶಿಕ್ಷಣ ತಜ್ಞರು ಹಾಗೂ ಶಿಕ್ಷಕರೊಂದಿಗೆ ಸಂವಾದ ಹಾಗೂ ಚರ್ಚೆ ನಡೆಸಿ ಪ್ರಣಾಳಿಕೆ ಸಿದ್ಧಪಡಿಸಿದ್ದು ಅವುಗಳನ್ನು ನೂರು ಪ್ರತಿಶತ ಸಾಧಿಸಲಾಗುವುದು” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಾಗಲೇ ನಾನು ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಕೋವಿಡ್ ಪ್ಯಾಕೇಜ್ ಕೊಡಿಸಿದ್ದು, ಶಿಕ್ಷಕರ ಕಲ್ಯಾಣ ನಿಧಿ ಸಂಸ್ಥೆಯಲ್ಲಿ ಎಲ್ಲ ಶಿಕ್ಷಕರಿಗೂ ನಗದು ರಹಿತ ಆರೋಗ್ಯ ವಿಮಾ ಸೌಲಭ್ಯ ಕೊಡಿಸುವ ಆದೇಶ ಮಾಡಿಸಿದ್ದೇನೆ. ಆದರೆ ಆದೇಶವನ್ನು ಸರ್ಕಾರ ಹಿಂಪಡೆದು ಶಿಕ್ಷಕರ ಪಾಲಿಗೆ ಮರಣ ಶಾಸನ ಬರೆಯಿತು. ಸರ್ಕಾರಿ ಶಾಲೆಗಳಿಗೆ 15,000 ಮಂದಿ ಶಿಕ್ಷಕರನ್ನು ಭರ್ತಿ ಮಾಡಲು ಒತ್ತಾಯಿಸಿ ಹೋರಾಟ ನಡೆಸಿ ಅದರಲ್ಲಿ ಯಶಸ್ಸನ್ನು ಕಂಡಿದ್ದು, ಹತ್ತು ವರ್ಷಕ್ಕೊಮ್ಮೆ ಮಾನ್ಯತೆ ನವೀಕರಣ ನೀಡಲು ರಾಜ್ಯ ಹೈಕೋರ್ಟ್‌ನಿಂದ ಆದೇಶ ತಂದಿದ್ದೇನೆ” ಎಂದು ಹೇಳಿದರು.

“5, 8ಹಾಗೂ 9ನೇ ತರಗತಿಯವರೆಗೆ ಯಾವುದೇ ಬೋರ್ಡ್ ಪರೀಕ್ಷೆ ನಡೆಸುವಂತಿಲ್ಲವೆಂದು ಸುಪ್ರಿಂ ಕೋರ್ಟ್‌ನಲ್ಲಿ ಕಾನೂನಿನ ಹೋರಾಟ ನಡೆಸಿ ಅಂತಿಮ ತೀರ್ಪು ಪಡೆದಿದ್ದೇನೆ” ಎಂದರು.

“ಪ್ರಸ್ತುತ ಹತ್ತು ಹಲವು ಗುರಿಯನ್ನಿರಿಸಿಕೊಂಡಿದ್ದು, ಅದರಲ್ಲಿ ಓಪಿಎಸ್ ಅಥವಾ ಪಿಂಚಣಿ ಮುಂಜೂರು ಮಾಡಿಸುವುದು, ಕಾಲ್ಪನಿಕ ವೇತನವನ್ನು ಕೊಡಿಸುವುದು, ಬಡ್ತಿ ಪಡೆದ ಶಿಕ್ಷಕರಿಗೆ ಟೈಮ್ ಬಾಂಡ್ ಮತ್ತು ವೇತನ ಹೆಚ್ಚಿಸುವುದು, ವೇತನ ತಾರತಮ್ಯ ಸರಿಪಡಿಸುವುದು, ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರ ಸೇವಾಭದ್ರತೆ ಹಾಗೂ ಸಮಾನ ವೇತನಕ್ಕೆ ಒತ್ತು ನೀಡುವುದು, 1985ರ ನಂತರದ ಕನ್ನಡ ಮತ್ತು ಇತರೆ ಭಾಷೆಗಳ ಎಲ್ಲ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿರುವ ಎಲ್ಲ ಶಿಕ್ಷಕರಿಗೂ ನಗದು ರಹಿತ ಆರೋಗ್ಯ ವಿಮೆ ಕೊಡಿಸುವುದು, ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆ ಕಾಲೇಜುಗಳಿಗೆ ಮಾನ್ಯತೆ ನವೀಕರಣವನ್ನು ಭ್ರಷ್ಟಾಚಾರ ಮುಕ್ತವಾಗಿಸಿ ಶಾಶ್ವತ ಮಾನ್ಯತೆ ನವೀಕರಣ ಪಡೆಯುವ ಗುರಿ ಹೊಂದಲಾಗಿದೆ” ಎಂದರು.

“ಶಾಲೆ ಕಾಲೇಜುಗಳಲ್ಲಿ ಖಾಲಿ ಇರುವ ಎಲ್ಲ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಸುವುದು,
ಎಲ್ಲ ವರ್ಗದ ಅತಿಥಿ ಶಿಕ್ಷಕರನ್ನು ಖಾಯಂಗೊಳಿಸುವುದು, ಐಟಿಐ, ಡಿಪ್ಲೊಮಾ ಹಾಗೂ ಬಿಎಡ್ ಮುಂತಾದ ಕಾಲೇಜುಗಳಲ್ಲಿಯ ಶಿಕ್ಷಕರ ಸಮಸ್ಯೆಗಳನ್ನು ಹೋಗಲಾಡಿಸುವುದು,
ಅನುದಾನಿತ ಶಾಲೆಗಳಲ್ಲಿಯ 2015ರ ನಂತರದ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಿಸುವುದು, ಅನುದಾನಿತ ಶಾಲಾ ಕಾಲೇಜುಗಳ ತರಗತಿಗಳ ವಿದ್ಯಾರ್ಥಿಗಳ ಮಿತಿಯನ್ನು ಕನಿಷ್ಠ 10ಕ್ಕೆ ಇಳಿಸುವುದು, ಅನುದಾನಿತ ಸಂಸ್ಥೆಗಳ ಶಿಕ್ಷಕರುಗಳಿಗೆ ವಿಳಂಬವಿಲ್ಲದೆ ಕಾಲಕಾಲಕ್ಕೆ ಸಂಬಳ ಕೊಡಿಸುವುದು ಸೇರಿದಂತೆ ಒಟ್ಟಾರೆ ಶಿಕ್ಷಕರಿಗೆ, ಶಿಕ್ಷಣ ಸಂಸ್ಥೆಗಳಿಗೆ, ಸರ್ಕಾರದಿಂದ ಮತ್ತು ಅಧಿಕಾರಿಗಳಿಂದ ಕಿರುಕುಳ ಆಗದಂತೆ ನೋಡಿಕೊಳ್ಳುವುದು ನನ್ನ ಮೂಲ ಗುರಿಗಳಾಗಿದ್ದು, ಇವುಗಳ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಿ ಹೋರಾಟ ನಡೆಸುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ |  ಕರುನಾಡು ಕಂಡ ಮಹಾನ್ ಚಿಂತಕ ಜಗಜ್ಯೋತಿ ಬಸವಣ್ಣ: ವೈ ಸಿ ಮಯೂರ್

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ರೇಣುಕಯ್ಯ, ಉಪನ್ಯಾಸಕ ಗೋವಿಂದರಾಜು, ಡಾ. ಎಂ ಆರ್ ರಂಗಸ್ವಾಮಿ, ನಟರಾಜು, ಭೂತರಾಜು ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...