ತುಮಕೂರು | ಟೆನ್ನಿಸ್ ಕ್ರೀಡಾಂಗಣ ನಿರ್ಮಾಣಕ್ಕೆ ಐದು ಎಕರೆ ಭೂಮಿ : ಗೃಹ ಸಚಿವ ಪರಮೇಶ್ವರ್ ಭರವಸೆ

Date:

ತುಮಕೂರು ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಅಂತರಾಷ್ಟ್ರೀಯ ಟೆನ್ನಿಸ್ ಕ್ರೀಡಾಂಗಣ ನಿರ್ಮಾಣಕ್ಕೆ 5 ಎಕರೆ ಭೂಮಿಯನ್ನು ನೀಡಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಭರವಸೆ ನೀಡಿದರು.

    ತುಮಕೂರು ನಗರದ ವಿಶ್ವವಿದ್ಯಾನಿಲಯ ಆವರಣದಲ್ಲಿ ಶನಿವಾರ ನವೀಕರಿಸಲ್ಪಟ್ಟ ಟೆನ್ನಿಸ್ ಕ್ರೀಡಾಂಗಣ ಹಾಗೂ ಆಟಗಾರರ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ 41 ಎಕರೆ ಪ್ರದೇಶದಲ್ಲಿ ಅಂತಾರಾಷ್ಟ್ರೀಯ  ಕ್ರಿಕೆಟ್ ಕ್ರೀಡಾಂಗಣ ಹಾಗೂ ಅಕಾಡೆಮಿ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಕ್ರೀಡಾಂಗಣ ನಿರ್ಮಾಣದ ಕಾಮಗಾರಿ ನಡೆಯುತ್ತಿದ್ದು, ಅದರ ಸಮೀಪದಲ್ಲೇ 5 ಎಕರೆ ಪ್ರದೇಶವನ್ನು ಟೆನ್ನಿಸ್ ಕ್ರೀಡಾಂಗಣ ಹಾಗೂ ಅಕಾಡೆಮಿ ನಿರ್ಮಾಣ ಮಾಡಿದರೆ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಟೆನ್ನಿಸ್ ಪಂದ್ಯಾವಳಿಗಳನ್ನು ನಮ್ಮ ಜಿಲ್ಲೆಯಲ್ಲಿಯೇ ಆಯೋಜಿಸಲು ಸಹಕಾರಿಯಾಗಲಿದೆ ಎಂದ ಅವರು ಕರ್ನಾಟಕ ರಾಜ್ಯ ಲಾನ್ ಟೆನ್ನಿಸ್ ಸಂಸ್ಥೆಯ ಉಪಾಧ್ಯಕ್ಷ ಎಂ.ಬಿ. ದ್ಯಾಬೇರಿ ಹಾಗೂ ಕಾರ್ಯದರ್ಶಿ ಮಹೇಶ್ವರ್ ರಾವ್ ಅವರಿಗೆ ಮನವಿ ಮಾಡಿದರು.

     ನಮ್ಮ ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಮೂಲಕ ಅವರ ಪ್ರತಿಭೆ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಹೊರಹೊಮ್ಮಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರಲ್ಲದೆ, 2003ರಲ್ಲಿ ಶಿಕ್ಷಣ ಸಚಿವನಾಗಿದ್ದಾಗ ಅಂದಿನ ತುಮಕೂರು ಜಿಲ್ಲಾಧಿಕಾರಿ ಎಂ.ಬಿ. ದ್ಯಾಬೇರಿ ಅವರ ಸಹಕಾರದಿಂದ ಟೆನ್ನಿಸ್ ಕೋರ್ಟ್ ಕ್ರೀಡಾಂಗಣವನ್ನು ಉದ್ಘಾಟನೆ ಮಾಡಿ ಟೆನ್ನಿಸ್ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಸ್ಮರಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002115771

     ಈಗಾಗಲೇ ಈ ಟೆನ್ನಿಸ್ ಕ್ರೀಡಾಂಗಣದ ಮೂಲಕ ಉತ್ತೇಜನ ಪಡೆದು ತುಮಕೂರಿನ ಯುವ ಕ್ರೀಡಾಪಟುಗಳು ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟ ತಲುಪುವ ಅವಕಾಶ ಗಳಿಸಿದ್ದಾರೆ ಎಂದರು.

     ತುಮಕೂರು ಜಿಲ್ಲೆ ಈಗಾಗಲೇ ಕಬ್ಬಡ್ಡಿ, ಖೊ-ಖೊ ಹಾಗೂ ವಿವಿಧ ಕ್ರೀಡೆಗಳಿಗೆ ಪ್ರಸಿದ್ಧಿ ಪಡೆದಿದ್ದು, ತುಮಕೂರು ದಸರಾ ಉತ್ಸವದ ಅಂಗವಾಗಿ ಈ ಬಾರಿ ಟೆನ್ನಿಸ್, ಮ್ಯಾರಥಾನ್, ಚೆಸ್, ಶೂಟಿಂಗ್, ಕಬ್ಬಡ್ಡಿ, ಖೊ-ಖೊ, ನಾಡಕುಸ್ತಿ, ಜಿಮ್ನಾಸ್ಟಿಕ್ಸ್ ಸೇರಿದಂತೆ ಹಲವು ಕ್ರೀಡೆಗಳನ್ನು ನಡೆಸಲಾಗುವುದು ಎಂದರು. 

     ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ಮಾತನಾಡಿ, ಮೈಸೂರು ದಸರಾ ಉತ್ಸವದ ರೀತಿಯಲ್ಲಿ ತುಮಕೂರು ದಸರಾ ಉತ್ಸವ ನಡೆಯುತ್ತಿದೆ. ಕಳೆದ ವರ್ಷಕ್ಕಿಂತ ಈ ಬಾರಿ ತುಮಕೂರು ದಸರಾ ಬಹಳ ಅದ್ದೂರಿಯಾಗಿ ನಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಜ್ಞಾನ ವೈಭವ ನೀಡುವ ಉದ್ದೇಶದಿಂದ ಹಲವು ರೀತಿಯ ಕಾರ್ಯಕ್ರಮಗಳನ್ನು ದಸರಾ ಉತ್ಸವದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದರು.

     ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ ಕರ್ನಾಟಕ ಸೋಲಾರ್ ಪವರ್ ಅಭಿವೃದ್ಧಿ ನಿಗಮದ ಸಿಎಸ್‌ಆರ್ ಅನುದಾನದಡಿ 75ಲಕ್ಷ ರೂ. ವೆಚ್ಚದಲ್ಲಿ ಟೆನ್ನಿಸ್ ಕ್ರೀಡಾಂಗಣವನ್ನು ಉತ್ತಮ ಗುಣಮಟ್ಟದಿಂದ ಸಂಪೂರ್ಣವಾಗಿ ಮರು ನಿರ್ಮಿಸಲಾಗಿದೆ. ಇದರಿಂದ ಕ್ರೀಡಾಪಟುಗಳಿಗೆ ಉತ್ತಮ ತರಬೇತಿ ಹಾಗೂ ಅಭ್ಯಾಸದ ವಾತಾವರಣ ಸಿಗಲಿದೆ. ಜಿಲ್ಲೆಯ ಕ್ರೀಡಾ ಪ್ರತಿಭೆಗಳು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ಅವಕಾಶ ಸಿಗಲಿದೆ ಎಂದು ತಿಳಿಸಿದರು.

     ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಲಾನ್ ಟೆನ್ನಿಸ್ ಸಂಸ್ಥೆಯ ಜಂಟಿ ಕಾರ್ಯದರ್ಶಿ ಸುನಿಲ್ ಯಜಮಾನ್, ನಿರ್ದೇಶಕರುಗಳಾದ ರಾಜಶೇಖರ್, ಮೋಹನ್ ಗುರ್ಜಾರ್, ಜಿ.ಆರ್. ಅಮರನಾಥ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಮಹಾನಗರ ಪಾಲಿಕೆ ಆಯುಕ್ತ ಅಶ್ವಿಜ ಬಿ.ವಿ., ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...