ತುಮಕೂರು| ಜಲಜೀವನ್ ಮಿಷನ್ ಕಾಮಗಾರಿಗೆ ಡಿಸಿ ನೇತೃತ್ವದ ತನಿಖಾ ತಂಡ ರಚಿಸಿ : ಕೇಂದ್ರ ಸಚಿವ ವಿ ಸೋಮಣ್ಣ

Date:

ತುಮಕೂರು ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಜಲಜೀವನ್ ಮಿಷನ್ ಕಾಮಗಾರಿಗಳ ಮೌಲ್ಯ ಪರಿವೀಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಳೀಯ ಶಾಸಕರು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರನ್ನೂ ಒಳಗೊಂಡಂತೆ ತನಿಖಾ ತಂಡ ರಚಿಸುವಂತೆ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತುಮಕೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಧಾನ ಮಂತ್ರಿಯವರ ಕನಸಿನ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯಕ್ಕೆ 7 ಸಾವಿರ ಕೋಟಿ ರೂ. ಹಣ ವಿನಿಯೋಗ ಮಾಡಲಾಗಿದ್ದು, ಜಿಲ್ಲೆಗೆ 2229 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಜಲಜೀವನ್ ಮಿಷನ್ ಯೋಜನೆಯಲ್ಲಿ ಗುಣಮಟ್ಟದ ಕಾಮಗಾರಿ ಮಾಡಬೇಕು ಎಂದು ಸೂಚನೆ ನೀಡಿದರು.

ಮೀನುಗಾರಿಕೆ ಸಹಕಾರಿ ಸಂಘಗಳಲ್ಲಿ ವಂಚನೆ ನಡೆಯುತ್ತಿರುವ ಬಗ್ಗೆ ಸಭೆಯಲ್ಲಿ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ, ಮೀನುಗಾರಿಕೆ ಇಲಾಖೆ ವತಿಯಿಂದ ಹರಾಜು ಮಾಡಿರುವ ಕೆರೆಗಳ ಹರಾಜನ್ನು ರದ್ದುಪಡಿಸಿ ಕೆರೆಗಳನ್ನು ಆಯಾ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಿ ಗ್ರಾಮ ಪಂಚಾಯಿತಿಗಳ ಬಲವರ್ಧನೆ ಮಾಡಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯಲ್ಲಿ 2019ರಿಂದ ಈ ವರೆಗೆ 3,699 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದ್ದು, 3000 ಕಾಮಗಾರಿಗಳಿಗೆ ಕಾರ್ಯಾದೇಶ ನೀಡುವ ಮೂಲಕ 884 ಕಾಮಗಾರಿಗಳು ಪೂರ್ಣಗೊಂಡಿದ್ದು, 15 ಕಾಮಗಾರಿಗಳು ಪ್ರಗತಿಯಲ್ಲಿವೆ. ಶೀಘ್ರದಲ್ಲೇ 600 ಕಾಮಗಾರಿಗಳನ್ನು ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದರು.

ಜಲಜೀವನ್ ಮಿಷನ್ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನದಲ್ಲಿ ಶೇ.20ರಷ್ಟು ಮಾತ್ರ ಹಣ ಬಳಕೆಯಾಗಿದ್ದು, ಕಾಮಗಾರಿ ವಿಳಂಬಗೊಳ್ಳುತ್ತಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾಮಗಾರಿಗಳು ತೀವ್ರಗತಿಯಲ್ಲಿ ಪೂರ್ಣಗೊಳ್ಳುವಂತೆ ಕ್ರಮ ಕೈಗೊಂಡು 11 ವಿಧಾನ ಸಭಾ ಕ್ಷೇತ್ರಗಳಲ್ಲಿ ಬಾಕಿ ಇರುವ ಬಿಲ್‍ಗಳನ್ನು ಪಾವತಿ ಮಾಡುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಸಣ್ಣ ನೀರಾವರಿ ಇಲಾಖೆಯಿಂದ ಚಿಕ್ಕನಾಯಕನಹಳ್ಳಿ, ಹುಳಿಯಾರು, ಬುಕ್ಕಾಪಟ್ಟಣ, ತುರುವೇಕೆರೆ ಸೇರಿದಂತೆ ಅಗತ್ಯಾನುಸಾರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶಾಸಕರನ್ನೊಳಗೊಂಡಂತೆ ಕ್ರಿಯಾ ಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತೋಟಗಾರಿಕೆ ಇಲಾಖೆಯ ಪ್ರಗತಿ ಪರಿಶೀಲಿಸಿದ ಅವರು, ಹಿರಿಯ ಅಧಿಕಾರಿಗಳಿಂದ ಅಧೀನ ಅಧಿಕಾರಿಗಳ ನಿಯಂತ್ರಣ ಅವಶ್ಯಕವಾಗಿದ್ದು, ರೈತರ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ ಇರುವಂತೆ ನೋಡಿಕೊಳ್ಳಬೇಕು ಮತ್ತು ಅಧಿಕಾರಿಗಳು ಕಡ್ಡಾಯವಾಗಿ ರೈತರ ತೋಟಗಳಿಗೆ ಕ್ಷೇತ್ರ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್ ಅವರಿಂದ ಮಾಹಿತಿ ಪಡೆದ ಸಚಿವರು, ನಕಲಿ ವೈದ್ಯರನ್ನು ಪತ್ತೆ ಹಚ್ಚಿ ದೂರು ದಾಖಲಿಸುವಂತೆ ಸೂಚಿಸಿದರಲ್ಲದೆ, ರೋಗಿಗಳನ್ನು ಆಸ್ಪತ್ರೆಗಳಿಗೆ ಸಾಗಿಸುವಾಗ ಯಾವುದೇ ಕಾರಣಕ್ಕೂ ಒಂದು ಆ್ಯಂಬುಲೆನ್ಸ್‌ನಿಂದ ಮತ್ತೊಂದು ಆ್ಯಂಬುಲೆನ್ಸ್‌ಗೆ ವರ್ಗಾಯಿಸದೆ ನೇರವಾಗಿ ಆಸ್ಪತ್ರೆಗೆ ದಾಖಲಿಸಬೇಕು. ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸರಿಯಾದ ವೇತನ ನೀಡುವಂತೆ ಸೂಚನೆ ನೀಡಿದರು.

ಕೃಷಿ ಇಲಾಖೆ ವತಿಯಿಂದ ರೈತರಿಗೆ ನೀಡುವ ಯಂತ್ರೋಪಕರಣಗಳ ಬದಲಿಗೆ ರೈತರೇ ಕೃಷಿ ಉಪಕರಣ ಖರೀದಿ ಮಾಡಲು ಅವರ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಹಣ ಜಮೆ ಮಾಡುವಂತೆ ತಿಳಿಸಿದರು.

ಜಿಲ್ಲೆಯಲ್ಲಿರುವ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಿ, ಶಾಲೆಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚುವಂತೆ ಮಾಡಬೇಕು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ಗೂಗಲ್‌ನಲ್ಲಿ ತಪ್ಪು ಮಾಹಿತಿ: ‘ರಾಣಿಝರಿ’ ಬಿರುಕು ಬಿಟ್ಟಿತ್ತೆಂದು ಅಧಿಕಾರಿಗಳ ದೌಡು!

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಸಿ. ಎನ್. ಮಂಜುನಾಥ್, ನವಹದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ, ಶಾಸಕರಾದ ಜಿ. ಬಿ. ಜ್ಯೋತಿ ಗಣೇಶ್, ಬಿ. ಸುರೇಶ್ ಗೌಡ, ಕೃಷ್ಣಪ್ಪ, ವಿಧಾನ ಪರಿಷತ್ ಶಾಸಕ ಚಿದಾನಂದ ಎಂ. ಗೌಡ, ಸರ್ಕಾರದ ಕಾರ್ಯದರ್ಶಿ ಮಂಜುಳ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್, ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಮಟ್ಟದ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...