ತುಮಕೂರು | ನೂತನ ಜಿಲ್ಲಾಸ್ಪತ್ರೆ ನಿರ್ಮಾಣ ಕಾರ್ಯಕ್ಕೆ ಶೀಘ್ರದಲ್ಲೇ ಶಂಕುಸ್ಥಾಪನೆ : ಸಚಿವ ಡಾ. ಜಿ. ಪರಮೇಶ್ವರ

Date:

ತುಮಕೂರು ನಗರದಲ್ಲಿರುವ 78 ವರ್ಷಗಳ ಹಳೆಯ ಜಿಲ್ಲಾಸ್ಪತ್ರೆ ಕಟ್ಟಡವನ್ನು ತೆರವುಗೊಳಿಸಿ, ಸುಮಾರು 131 ಕೋಟಿ ರೂ. ವೆಚ್ಚದಲ್ಲಿ 300 ಹಾಸಿಗೆಗಳ ನೂತನ ಜಿಲ್ಲಾ ಆಸ್ಪತ್ರೆ ನಿರ್ಮಾಣ ಕಾರ್ಯಕ್ಕೆ ಶೀಘ್ರದಲ್ಲೇ ಶಂಕುಸ್ಥಾಪನೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

  ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನೂತನ ಜಿಲ್ಲಾ ಆಸ್ಪತ್ರೆ ನಿರ್ಮಾಣ ಕುರಿತು ಸಭೆ ನಡೆಸಿ ಮಾತನಾಡಿದ ಅವರು, ಹೊಸ ಜಿಲ್ಲಾ ಆಸ್ಪತ್ರೆ ನಿರ್ಮಾಣದ ವಿವರವಾದ ಯೋಜನಾ ವರದಿ  ತಯಾರಿಕೆ, ವಾಸ್ತುಶಿಲ್ಪ, ರಚನಾತ್ಮಕ ವಿನ್ಯಾಸ ಹಾಗೂ ಇತರ ತಾಂತ್ರಿಕ ರೇಖಾಚಿತ್ರಗಳ ಸಿದ್ಧತೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು. ಈ ಪ್ರಕ್ರಿಯೆ ಶೀಘ್ರ ಪೂರ್ಣಗೊಂಡು ಶಂಕುಸ್ಥಾಪನೆಗೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಹೇಳಿದರು.

 ಜಿಲ್ಲಾಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗಿರುವ 100 ಹಾಸಿಗೆಗಳ ತುರ್ತು ನಿಗಾ ಘಟಕ ಆಸ್ಪತ್ರೆ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನೂ ಅಂದೇ ನೆರವೇರಿಸಲು ವ್ಯವಸ್ಥೆ ಕೈಗೊಳ್ಳುವಂತೆ ಸಚಿವರು ಸೂಚಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಅಲ್ಲದೆ, ನರ್ಸಿಂಗ್ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ಹಾಗೂ ದಿಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಇತರೆ ಆರೋಗ್ಯ ಕೇಂದ್ರಗಳ ಕಟ್ಟಡ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನೂ ಒಂದೇ ದಿನ ನೆರವೇರಿಸಲು ಅನುವಾಗುವಂತೆ ಕಾರ್ಯ ಯೋಜನೆ ರೂಪಿಸಬೇಕು. ಈ ಎಲ್ಲಾ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ಮಾನ್ಯ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುವುದು ಎಂದು ಸಚಿವರು ಸಭೆಯಲ್ಲಿ ತಿಳಿಸಿದರು. 

ಸಭೆಯಲ್ಲಿ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ, ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಮಹಾನಗರ ಪಾಲಿಕೆ ಆಯುಕ್ತ ಅಶ್ವಿಜ ಬಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಅಸ್ಗರ್ ಬೇಗ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...