ತುಮಕೂರು | ಪಾರ್ಕಿಂಗ್ ಸ್ಥಳದಲ್ಲಿ ಕಸದ ರಾಶಿ : ಕೂಡಲೇ ತೆರವುಗೊಳಿಸಲು ಪಾಲಿಕೆಗೆ ಉಪಲೋಕಾಯುಕ್ತರ ಸೂಚನೆ

Date:

ತುಮಕೂರು ನಗರದ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಯ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಕಸದ ರಾಶಿಯನ್ನು ಕಂಡ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಕೂಡಲೆ ಕಸದ ರಾಶಿಯನ್ನು ತೆರವುಗೊಳಿಸಬೇಕೆಂದು ಸ್ಥಳದಲ್ಲಿದ್ದ ಪಾಲಿಕೆ ಇಂಜಿನಿಯರ್ ಪೂರ್ಣಿಮಾ ಅವರಿಗೆ ಸೂಚನೆ ನೀಡಿದರು. 

 ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಶುಕ್ರವಾರ ಬೆಳ್ಳಂಬೆಳಿಗ್ಗೆಯೇ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದಾಗ ವಾಹನ ನಿಲುಗಡೆ ಮಾಡುವ ಸ್ಥಳದಲ್ಲಿ ಕಸದ ರಾಶಿಯನ್ನು ಕಂಡು ಈ ಸೂಚನೆ ನೀಡಿದರು. 

 ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಲು ಅವಕಾಶ ಮಾಡಿಕೊಡಬೇಕೇ ಹೊರತು ಕಸ ಹಾಕಲು ಬಳಸಬಾರದು. ಇದರಿಂದ ವಾಹನ ದಟ್ಟಣೆ ಉಂಟಾಗಿ ಸಂಚಾರ ಅಸ್ತವ್ಯಸ್ತವಾಗುತ್ತದೆ. ಹೂವು-ಹಣ್ಣು-ತರಕಾರಿ ತ್ಯಾಜ್ಯ ಕೊಳೆತು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಮಾರುಕಟ್ಟೆ ಆವರಣದಲ್ಲಿ ಸಮರ್ಪಕವಾಗಿ ಸ್ವಚ್ಛತೆ ನಿರ್ವಹಣೆ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನರನ್ನೇಕೆ ಸಾಯಿಸುತ್ತೀರಿ? :

 ನಂತರ ನಗರದ ಡಿ.ದೇವರಾಜು ಅರಸು ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪರಿಶೀಲನಾ ವೇಳೆಯಲ್ಲಿ ನಿಲ್ದಾಣದ ಆವರಣದಲ್ಲಿರುವ ಎಸ್‌ಎಂಎಲ್ ಕಾಂಡಿಮೆಂಟ್ಸ್ನಲ್ಲಿ ಅವಧಿ ಮೀರಿದ ತಿಂಡಿ-ತಿನಿಸು, ತಂಪು ಪಾನೀಯಗಳನ್ನು ಮಾರಾಟಕ್ಕಿಟ್ಟಿರುವುದು ನೋಡಿದ ಅವರು, ಅವಧಿ ಮೀರಿದ ತಿಂಡಿ-ತಿನಿಸುಗಳನ್ನು ಮಾರಾಟ ಮಾಡಿ ಜನರನ್ನೇಕೆ ಸಾಯಿಸುತ್ತೀರಿ? ನೀವು ಬದುಕಿದರೆ ಸಾಕೇ? ಎಂದು ಅಂಗಡಿ ಮಾಲೀಕರನ್ನು ತರಾಟೆಗೆ ತೆಗೆದುಕೊಂಡ ಅವರು ಅವಧಿ ಮೀರಿದ ತಿಂಡಿ-ತಿನಿಸಿನ ಪಾಕೇಟ್, ತಂಪು ಪಾನೀಯ ಬಾಟಲಿಗಳನ್ನು ವಶಕ್ಕೆ ಪಡೆದರು. 

 ಬಸ್ ನಿಲ್ದಾಣದ ಅಂಗಡಿ ಮಳಿಗೆಗಳಲ್ಲಿ ಅವಧಿ ಮೀರಿದ ತಿಂಡಿ-ತಿನಿಸುಗಳನ್ನು ಜನರಿಗೆ ಮಾರಾಟ ಮಾಡುತ್ತಿದ್ದರೂ ಕೆಎಸ್‌ಆರ್‌ಟಿಸಿ ಹಾಗೂ ಪಾಲಿಕೆ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಇಂತಹ ಪ್ರಕರಣಗಳು ಮರು ಕಳಿಸಿದರೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು ಕಾಲಕಾಲಕ್ಕೆ ಅಂಗಡಿ ಮಳಿಗೆಗಳಿಗೆ ಭೇಟಿ ನೀಡಿ ಮಾರಾಟ ಪರವಾನಗಿ, ಸ್ವಚ್ಛತೆ, ಆಹಾರ ತಿನಿಸುಗಳನ್ನು ಪರಿಶೀಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವಧಿ ಮೀರಿದ ತಂಪು ಪಾನೀಯವನ್ನು ನೀವು ಕುಡಿದು ತೋರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಪ್ರಸಂಗ ನಡೆಯಿತು. 

 ಶ್ರೀ ಕೃಷ್ಣ ಕಾಂಡಿಮೆಂಟ್ಸ್ನಲ್ಲಿ ಗುಟ್ಕಾ ಸೇರಿದಂತೆ ವಿವಿಧ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದನ್ನು ಕಂಡ ಅವರು ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದೆಂದು ನಿಯಮವಿದ್ದರೂ ನಿಯಮವನ್ನು ಉಲ್ಲಂಘಿಸಿ ಮಾರಾಟ ಮಾಡುತ್ತಿರುವ ಈ ಅಂಗಡಿ ಮಾಲೀಕರ ಪರವಾನಗಿಯನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಬೇಕೆಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್ ಅವರಿಗೆ ಸೂಚನೆ ನೀಡಿದರು. 

 ನಂತರ ನಿಲ್ದಾಣದ ಶೌಚಾಲಯ ಬಳಕೆಗಾಗಿ ನಿಗದಿಪಡಿಸಿರುವ ಶುಲ್ಕವನ್ನು ಪಾವತಿಸಲು ಸಾರ್ವಜನಿಕರ ಅನುಕೂಲಕ್ಕೆ ಕ್ಯೂಆರ್ ಕೋಡ್ ಅನ್ನು ಲಗತ್ತಿಸಬೇಕೆಂದು ಸೂಚನೆ ನೀಡಿದರು.

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಅನ್ನಪೂರ್ಣೇಶ್ವರಿ ಗ್ರಾಂಡ್ ವೆಜ್ ಹೋಟೆಲ್‌ಗೆ ಭೇಟಿ ನೀಡಿ ಪರಿಶೀಲಿಸಿದ ವೇಳೆ, ಮೆನು ಚಾರ್ಟ್ನಲ್ಲಿ ಆಹಾರ ಪದಾರ್ಥಗಳ ನಿಗದಿತ ದರಗಳ ವಿವರ ಇಲ್ಲದಿರುವುದನ್ನು ಗಂಭೀರವಾಗಿ ಪರಿಗಣಿಸಿದ ಅವರು, ತಕ್ಷಣವೇ ದರ ಪಟ್ಟಿ ಪ್ರಕಟಿಸುವಂತೆ ಹೋಟೆಲ್ ಮಾಲೀಕರಿಗೆ ಆದೇಶಿಸಿದರಲ್ಲದೆ, ಆಹಾರ ಗುಣಮಟ್ಟ ಹಾಗೂ ರುಚಿ ಬಗ್ಗೆ ಊಟ ಮಾಡುತ್ತಿದ್ದವರನ್ನು ವಿಚಾರಿಸಿದರು.

ನಿಲ್ದಾಣದಲ್ಲಿ ಕಾಲೇಜಿಗೆ ತೆರಳಲು ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗಳು ಗುಂಪಾಗಿ ಬಂದು ಬೆಳಿಗ್ಗೆ 7.30ರ ನಂತರ ಗುಬ್ಬಿ ಸಿಐಟಿ ಕಾಲೇಜಿಗೆ ಬಸ್ ಸೌಕರ್ಯ ಕಲ್ಪಿಸಬೇಕು. ನಗರದ ಶ್ರೀದೇವಿ ಕಾಲೇಜಿನ ಬಳಿ ಬಸ್ ನಿಲುಗಡೆ ವ್ಯವಸ್ಥೆಗೆ ಕ್ರಮ ಕೈಗೊಳ್ಳಲು ನಿಗಮಕ್ಕೆ ಸೂಚನೆ ನೀಡಬೇಕೆಂದು ಉಪಲೋಕಾಯುಕ್ತರಲ್ಲಿ ಮನವಿ ಮಾಡಿದರು. 

ಬಳಿಕ ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ವೇಳೆ ಸುತ್ತಮುತ್ತ ಕಸ ಚದುರಿರುವುದು ಕಂಡು ಅಸಮಾಧಾನ ವ್ಯಕ್ತಪಡಿಸಿದ ಅವರು, ತಕ್ಷಣ ಸ್ವಚ್ಛತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲಿನ ಕೆಲವು ಅಂಗಡಿಗಳಲ್ಲಿ ಹಾಳಾದ ಆಹಾರ ಪದಾರ್ಥಗಳನ್ನು ಮಾರಾಟವಾಗುತ್ತಿರುವುದು ಗಮನಕ್ಕೆ ಬಂದಿದ್ದು, ಅವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.

ಇದಾದ ನಂತರ ಜಿಲ್ಲಾಸ್ಪತ್ರೆಯನ್ನು ಪರಿಶೀಲಿಸಿ ರೋಗಿಗಳ ಅನುಕೂಲಕ್ಕಾಗಿ ಪ್ರತಿ ಕೋಣೆಯ ಹೊರಭಾಗದಲ್ಲಿ ವೈದ್ಯರ ಭೇಟಿ ಸಮಯ, ಸೂಚನಾ ಫಲಕಗಳನ್ನು ಅಳವಡಿಸುವಂತೆ ಸೂಚಿಸಿದರು. ಪ್ರತಿ ಮಹಡಿಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಹೇಳಿದರಲ್ಲದೆ, ಯಾವುದೇ ಸಂದರ್ಭದಲ್ಲೂ ಆಸ್ಪತ್ರೆಗೆ ಬರುವ ರೋಗಿಗಳಿಗೆ ಹೊರಗಡೆ ಔಷಧ ಬರೆಯಬಾರದು ಎಂದು ಸ್ಪಷ್ಟ ಸೂಚನೆ ನೀಡಿದರು. ಔಷಧಿಗಳ ಅವಧಿ ದಿನಾಂಕವನ್ನು ಕಾಲಕಾಲಕ್ಕೆ ಪರಿಶೀಲಿಸುವುದು ಎಲ್ಲ ಸಿಬ್ಬಂದಿಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಲೋಕಾಯುಕ್ತ ಉಪನಿಬಂಧಕ ಅರವಿಂದ ಎನ್.ವಿ., ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್, ಜಿಲ್ಲಾ ಶಸ್ತç ಚಿಕಿತ್ಸಕ ಡಾ. ಅಸ್ಗರ್ ಬೇಗ್, ತುಮಕೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಲಕ್ಷಿö್ಮ ನಾರಾಯಣ ಸೇರಿದಂತೆ ಮತ್ತಿತರೆ ಅಧಿಕಾರಿಗಳು ಉಪಸ್ಥಿತರಿದ್ದರು. 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...