ತುಮಕೂರು | ಜಿಲೆಟಿನ್ ಸ್ಫೋಟ: ವಿದ್ಯಾರ್ಥಿ ಮೋನಿಶ್‌ಗೆ ಬರವಣಿಗೆ ತರಬೇತಿ ನೀಡಲು ಡಿಸಿ ಸೂಚನೆ

Date:

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ.ಎಸ್. ಪುರ ಹೋಬಳಿ ಇಡಗೂರು ಗ್ರಾಮದಲ್ಲಿ ಕಳೆದ ಅಕ್ಟೋಬರ್ 9 ರಂದು ಜಿಲೆಟಿನ್ ಸ್ಪೋಟದಿಂದ ಕೈ ಬೆರಳುಗಳು ತುಂಡಾಗಿದ್ದ ಸರ್ಕಾರಿ ಹಿರಿಯ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಮೋನಿಶ್ ಗೌಡ ಅವರಿಗೆ ಬರವಣಿಗೆ ತರಬೇತಿ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್  ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 

1000630647
Oplus_131072

 ವಿದ್ಯಾರ್ಥಿಯ ತಾಯಿ ನಳಿನ ತಮ್ಮ ಮಗನ ಚಿಕಿತ್ಸಾ ವೆಚ್ಚವನ್ನು ಭರಿಸಲು ಕ್ರಮ ಕೈಗೊಂಡ ಅಭಿನಂದನೆ ಸಲ್ಲಿಸಲು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮೋನಿಶ್ ಗೌಡ ಅವರ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದರು. 

ಜಿಲೆಟಿನ್ ಸ್ಫೋಟದಿಂದ ಮೋನಿಶ್ ಗೌಡನ ಬಲಗೈನ ಮೂರು ಬೆರಳುಗಳು ತುಂಡಾಗಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಕೈಬೆರಳುಗಳು ಪೂರ್ಣ ಗುಣಮುಖವಾದ ನಂತರ ಫಿಜಿಯೋಥೆರಪಿ ಮೂಲಕ ಬರವಣಿಗೆ ತರಬೇತಿ ನೀಡಲು ಕ್ರಮ ಕೈಗೊಳ್ಳಬೇಕೆಂದು ದೂರವಾಣಿ ಮೂಲಕ ಸ್ಥಳದಲ್ಲೇ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್ ಅವರಿಗೆ ಸೂಚನೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...