ತುಮಕೂರು | ಎಳ್ಳರಬಂಡೆ ಸ್ಲಂ ಅಭಿವೃದ್ಧಿಗೆ ಬೇಕಿದೆ ಸರ್ಕಾರದ ನೆರವು

Date:

ರಾಜ್ಯದಲ್ಲಿ ಶೇ.40ಕ್ಕೂ ಅಧಿಕ ಮಂದಿ ಸ್ಲಂಗಳನ್ನು ಅವಲಂಬಿಸಿದ್ದು, ಅತಂತ್ರ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಸ್ಲಂ ಜನಾಂದೋಲನ ಸಂಚಾಲಕ ಎ ನರಸಿಂಹಮೂರ್ತಿ ಹೇಳಿದರು.

ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಮತ್ತು ಜಿ.ಜಿ.ವಿ ರೂರಲ್ ಡೆವಲಪ್ಮೆಂಟ್ ಸಂಯುಕ್ತಾಶ್ರಯದಲ್ಲಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ, ಕ್ಯಾತ್ಸಂದ್ರ ಎಳ್ಳರಬಂಡೆ ಸ್ಲಂ ಶಾಖೆಯಲ್ಲಿ, ಕುಂದು ಕೊರತೆ ಹಾಗೂ ಸ್ಲಂ ಘೋಷಣೆ, ಹಕ್ಕುಪತ್ರ ಹಾಗೂ ಸಾಮಾಜಿಕ, ಆರ್ಥಿಕ ಸಮೀಕ್ಷೆ ಕುರಿತು ಮುಂದಿನ ಹೋರಾಟಗಳ ಬಗ್ಗೆ ಬಹಿರಂಗ ಸಭೆ ನಡೆಸಿದರು.

ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ವಿವಿಧ ಕೌಶಲ್ಯಧಾರಿತ ತರಬೇತಿಗಳಿಗೆ ಜಾಗೃತಿ ಹಾಗೂ ನೊಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಎ.ನರಸಿಂಹಮೂರ್ತಿ ಮಾತನಾಡಿದರು. ಸರ್ಕಾರ, ನಗರಕ್ಕಾಗಿ ದುಡಿಯುವ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಜನರು ಸಂವಿಧಾನದ ಹಕ್ಕುಗಳನ್ನು ಪಡೆಯಬೇಕೆಂದರೆ, ಒಗ್ಗಟ್ಟಾಗಿ ಹೋರಾಟಕ್ಕೆ ಇಳಿಯಬೇಕು. ಸರ್ಕಾರಿ ಸವಲತ್ತು ಪಡೆಯಬೇಕೆಂದರೆ ಎಲ್ಲರೂ  ಸಂಘಟಿತರಾಗಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಳ್ಳರಬಂಡೆ ಸ್ಲಂ ನಿವಾಸಿಗಳಿಗೆ, ವಸತಿ ಹಕ್ಕು ಪತ್ರ ಮತ್ತು ಮೂಲಭೂತ ಸೌಕರ್ಯ ಒದಗಿಸಲು ಸ್ಲಂ ಸಂಘಟನೆ ಪ್ರಮಾಣಿಕ ಪ್ರಯತ್ನ ಮಾಡುತ್ತಿದೆ. ಸತತ 12ವರ್ಷಗಳ ಪ್ರಯತ್ನವಾಗಿ, ಕ್ಯಾತ್ಸಂದ್ರ ಎಳ್ಳರಬಂಡೆ ಅನಧಿಕೃತ ಎಂಬ ಹಣೆ ಪಟ್ಟಿಯಿಂದ, ಅಭಿವೃದ್ಧಿ ಕುಂಠಿತವಾಗಿದೆ. ಆದರೆ, ಸಂಘಟಿತ ಹೋರಾಟದಿಂದ ಸ್ಲಂ ಘೋಷಣೆಗೊಂಡು ಅಭಿವೃದ್ಧಿಗೆ ಸಿದ್ಧವಾಗಲಿದೆ. ಇಂತಹ ದನಿ ಇಲ್ಲದವರ  ದನಿಯಾಗಿ ಸಂಘಟನೆ ನಗರದಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಜಾಬೀರ್ಖಾನ್ ಮಾತನಾಡಿ, ತುಮಕೂರು ನಗರದ 34ನೇ ವಾರ್ಡ್ ವ್ಯಾಪ್ತಿಯ, ಎಳ್ಳರಬಂಡೆ ಸ್ಲಂ ಅನ್ನು, ಬಂಡೆ ಮೇಲಿದ್ದಿರಾ ಎಂಬ ಕಾರಣಗಳಿಂದ, ಹಲವು ಅಭಿವೃದ್ಧಿ ಕಾಮಗಾರಿಗಳನ್ನು ತಡೆಹಿಡಿಯಲಾಗಿದೆ. ಕೊಳಗೇರಿ ಹಿತರಕ್ಷಣಾ ಸಮಿತಿಯಿಂದ ಜಿಲ್ಲಾಡಳಿತದ ಗಮನ ಸೆಳೆದು ಹಲವು ಹೋರಾಟಗಳ ಪರಿಣಾಮವಾಗಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಕಾಯಿದೆ 1973 ಕಲಂ 3ರಡಿಯಲ್ಲಿ, ಪ್ರಥಮ ಅಧಿಸೂಚನೆಯನ್ನು ಜಿಲ್ಲಾಡಳಿತದಿಂದ ಹೊರಡಿಸಿ ಸ್ಲಂ ಘೋಷಣೆ ಮಾಡಿಲಾಗಿದೆ. ಮುಂದಿನ ದಿನಗಳಲ್ಲಿ ಇಲ್ಲಿ ವಾಸಿಸುವ ಎಲ್ಲಾ 104 ಕುಟುಂಬಗಳಿಗೆ ಹಕ್ಕುಪತ್ರ ವಸತಿ ಸೌಲಭ್ಯಗಳು ದೊರಕಲಿವೆ ಎಂದರು.

ಕಾರ್ಯಕ್ರಮದಲ್ಲಿ ಸ್ಲಂ ಸಮಿತಿಯ ಪದಾಧಿಕಾರಿಗಳಾದ ಅರುಣ್, ಶಂಕ್ರಯ್ಯ, ಅನುಪಮಾ, ಜಿಜಿವಿ ರೂರಲ್ ಡೆವಲಪ್ಮೆಂಟ್ ಸೊಸೈಟಿಯ ದಯಾನಂದ್, ಮೋಹನ್ಕುಮಾರ್, ಶಿವಪ್ಪ, ಎಳ್ಳರಬಂಡೆ ಶಾಖಾ ಸಮಿತಿಯ ಮುಖಂಡರಾದ ನರಸಮ್ಮ, ಮುನೀರ್, ಮುಬೀನ್ತಾಜ್, ನಗೀನ, ರಫೀ, ಅತೀಕ್ಅಹ್ಮದ್, ಗೌರಮ್ಮ, ಶಯು, ಕೇಬಲ್ ಅಶೋಕ್, ಜಯಸಿಂಹ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...