ಕಾರ್ಮಿಕರ ಹಕ್ಕುಗಳನ್ನು ನಿರಾಕರಿಸುವ ಹಾಗೂ ಗ್ರಾಮ ಪಂಚಾಯಿತಿಗಳನ್ನು ದುರ್ಬಲ ಪಡಿಸುವ ಮೂಲಕ ಸಾಮಾಜಿಕ ನ್ಯಾಯವನ್ನೇ ಅಣಕಿಸುವ ಪ್ರಸ್ತಾವಿತ ವಿಕಸಿತ ಭಾರತ ರೋಜಗಾರ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ ಜಿ ರಾಮ್ ಜಿ) 2025 ಮಸೂದೆಯನ್ನು ತಿರಸ್ಕರಿಸುವಂತೆ ಒತ್ತಾಯಿಸಿ ಡಿ. 22 ರಂದು ರಾಜ್ಯದ ಎಲ್ಲಾ ಸಂಸದರ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದ್ದೇವೆ ಎಂದು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಜಿಲ್ಲಾ ಸಂಚಾಲಕಿ ಕೆ ಸೌಮ್ಯ ತಿಳಿಸಿದರು
ತುಮಕೂರು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕರು ಮತ್ತು ಯಾವುದೇ ಕಾರ್ಮಿಕ ಗುಂಪುಗಳ ಜೊತೆ ಸಮಾಲೋಚನೆ ನಡೆಸದೆ ವಿಕಸಿತ ಭಾರತ ರೋಜಗಾರ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ ಜಿ ರಾಮ್ ಜಿ) 2025 ಮಸೂದೆಯನ್ನು
ರಚಿಸಿದೆ. ಈ ಮಸೂದೆ ಮನರೇಗಾ – 2005 ಅನ್ನು ಪೂರ್ಣ ಪ್ರಮಾಣದಲ್ಲಿ ಕಿತ್ತೊಗೆಯುವ ಹುನ್ನಾರವಾಗಿದೆ. ಉದ್ಯೋಗ ಖಾತ್ರಿಯನ್ನು ಕೇಂದ್ರ ಸರಕಾರದ ಬಿಗಿ ಮುಷ್ಟಿಯಿಂದ ಕೇಂದ್ರಿಕೃತ, ವಿವೇಚನಾಯುಕ್ತ, ಬಜೆಟ್ ನ್ನು ನಿಯಂತ್ರಿಸುವ ಯೋಜನೆಯನ್ನಾಗಿ ಬದಲಾಯಿಸಲು ಹೊರಟಿದೆ. ಬಡವರ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ಇದಾಗಿದೆ ಎಂದು ವಿವವರಿಸಿದರು
ಪುಸ್ತಾವಿತ ಮಸೂದೆಯ ಪ್ರಕಾರ ಪ್ರತಿ ವರ್ಷ ರಾಜ್ಯವಾರು “ಬಜೆಟ್ ಹಂಚಿಕೆ”ಯನ್ನು ಕೇಂದ್ರ ಸರಕಾರ ನಿರ್ಧರಿಸುತ್ತದೆ ಹಾಗೂ ಯಾವುದೆ ಹೆಚ್ಚುವರಿ ವೆಚ್ಚವನ್ನು ರಾಜ್ಯ ಸರಕಾರಗಳೇ ಭರಿಸಬೇಕು. ಪ್ರತಿ ರಾಜ್ಯದಲ್ಲಿ ಒದಗಿಸಲಾಗುವ ಮಾನವ ದಿನಗಳ ಸಂಖ್ಯೆಯ ಮೇಲೆ ಮಿತಿಯನ್ನು ಹೇರುತ್ತದೆ. ಈಗಿರುವ ಬಜಟ್‌ನಲ್ಲಿ ಕೇಂದ್ರ ಸರಕಾರವು ಪ್ರತಿ ಕುಟುಂಬಕ್ಕೆ ವರ್ಷಕ್ಕೆ 50 ದಿನಗಳ ಕೆಲಸವನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ಬಜೆಟ್‌ನ್ನು ಕೇಂದ್ರ ಸರಕಾರವೇ ಮಿತಿಗೊಳಿಸುತ್ತ ಹಣವನ್ನು ಸಂಗ್ರಹಿಸಲು ರಾಜ್ಯಗಳ ಮೇಲೆ ಇನಷ್ಟು ಹಣದ ಹೊರೆ ಹಾಕುವ ಮೂಲಕ ಬಿಜೆಪಿ ಸರಕಾರ 125 ದಿನಗಳ ಉದ್ಯೋಗದ ಹುಸಿ ಭರವಸ ನೀಡುತ್ತಿದೆ ಎಂದು ಆರೋಪಿಸಿದರು
ಮನರೇಗಾ ರದ್ದುಗೊಳಿಸುವ ಮೂಲಕ ಬೇಡಿಕೆ ಆಧಾರಿತ ಹಕ್ಕಿನಿಂದ ಪೂರೈಕೆ ಆಧಾರಿತ ಯೋಜನೆಯನ್ನಾಗಿ ಬದಲಾಯಿಸಲಾಗಿದೆ. ಉದ್ಯೋಗ ಖಾತ್ರಿ ಇನ್ನು ಮುಂದೆ ಒಂದು ಹಕ್ಕಲ್ಲ ಬದಲಾಗಿ ಯೋಜನೆ ಅನುಷ್ಠಾನದ ಮೇಲೆ ಕೇಂದ್ರ ಸರಕಾರದ ನಿಯಂತ್ರಣವನ್ನು ಬಿಗಿಗೊಳಿಸಲಾಗಿದೆ. ಕೇಂದ್ರ ಸರಕಾರ ಸೂಚಿಸಿದ ಆಯ್ಕೆ ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಕೆಲಸ ಮಾಡುವ ಹಕ್ಕು ಕಾರ್ಮಿಕರು ಪಡೆಯುತ್ತಾರೆ. ಕೇಂದ್ರ ಸರಕಾರ ಗುರುತಿಸದ ಪ್ರದೇಶದಲ್ಲಿ ಗ್ರಾಮೀಣ ಕಾರ್ಮಿಕರಿಗೆ ಉದ್ಯೋಗದ ಖಾತರಿಯೇ ಇಲ್ಲ.
ಕೇಂದ್ರ ಸರಕಾರದಿಂದ ನಿರ್ಧರಿಸಲ್ಪಟ್ಟ ರಾಜ್ಯವಾರು ಬಜೆಟ್ ಹಂಚಿಕೆಗಳ ಮೂಲಕ ಮಾನವ ದಿನಗಳನ್ನು ನಿರ್ಧರಿಸಲಾಗುತ್ತದೆ. ಈ ಬಜೆಟ್ ಮಿತಿಯನ್ನು ಮೀರಿದರೆ ರಾಜ್ಯ ಸರಕಾರಗಳ ಹೊರೆಯನ್ನು ಭರಿಸಬೇಕು. ಎಂ.ಜಿ.ನರೇಗಾದಲ್ಲಿ ಕೆಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಬಜೆಟ್ ಹಂಚಿಕೆ 90-10 ರಷ್ಟಿತ್ತು ಆದರೆ ಈ ಮಸುದೆಯಲ್ಲಿ 60-40 ರಷ್ಟಿದೆ.
ಕೃಷಿ ಚಟುವಟಿಕೆ ಸಮಯಯದಲ್ಲಿ 60 ದಿನಗಳ ಕಾಲ ಯೋಜನೆ ಸ್ಥಗಿತ ಗೊಳಿಸಲಾಗುವುದು ಹಾಗೂ ವರ್ಷದಲ್ಲಿ ಎರಡು ತಿಂಗಳು ಕೆಲಸ ನಿರಾಕರಿಸುವುದರಿಂದ ಮಹಿಳೆಯರು, ಭೂಹೀನರು ಮತ್ತು ಇತರೆ ಅಂಚಿನಲ್ಲಿರುವ ಸಮುದಾಯಗಳ ಉದ್ಯೋಗದ ಹಕ್ಕಿನಿಂದ ನಿರಾಕರಿಸಿದಂತಾಗುತ್ತದೆ ಎಂದು ವಿವವರಿಸಿದರು
ಕಾಮಗಾರಿಗಳನ್ನು ಕೇಂದ್ರ ಸರಕಾರ ತಾನೆ ನಿರ್ಧರಿಸುವ ಮೂಲಕ ಗ್ರಾಮ ಸಭೆಗಳನ್ನು ದರ್ಬಲಗೊಳಿಸಿದೆ. 73 ನೇ ತಿದ್ದುಪಡಿಯ ವಿಕೇಂದ್ರಿಕೃತ ಆಡಳಿತವನ್ನು ಗಾಳಿಗೆ ತೂರಲಾಗಿದೆ. ಡಿಜಿಟಲ್ ಹಾಜರಾತಿ ಎನ್ ಎಂಎಂ ಎನ್ಎಂಎಂಎಸ್ ಮತ್ತು ಆಧಾರ ಕಾರ್ಡ ಆಧಾರಿತ ಪಾವತಿಗಳು ಎಬಿಪಿಎಸ್, ಬಯೋಮೇಟ್ರಿಕ್ ಧೃಡಿಕರಣದ ಮೂಲಕ ತಾಂತ್ರಿಕ ನಿಯಂತ್ರಣ. ದಂತಹ ತಂತ್ರಜ್ಞಾನ ಉಪಕ್ರಮಗಳಿಂದ ದೊಡ್ಡ ಪ್ರಮಾಣದಲ್ಲಿ ಕಾರ್ಮಿಕರಿಗೆ ಕೆಲಸದಿಂದ ಹೊರಗಿಡಲಾಗುತ್ತಿದೆ. ವಿಕೇಂದ್ರಿಕರಣ ಮೇಲ್ವಿಚಾರಣೆ ಮತ್ತು ಪ್ರತಿ ವರ್ಷ ಮನರೇಗಾ ಅಡಿಯಲ್ಲಿ ನಡೆಸಲಾಗುವ ಗ್ರಾಮ ಸಭೆಯ ನೇತೃತ್ಯದ ಸಾಮಾಜಿಕ ಲೆಕ್ಕ ಪರಿಶೋಧನೆಯ ಪರಿಶೀಲನೆಗಳ ಮೇಲೆ ವಾಸ್ತವವಾಗಿ ಕಾರ್ಯನಿರ್ವಹಿಸುವ ಮೂಲಕ ಭ್ರಷ್ಟಾಚಾರ ನಿಯಂತ್ರಿಸಬಹುದು ಎಂದರು





