ತುಮಕೂರು | ಕೃಷಿ ಕೂಲಿ‌ ಕಾರ್ಮಿಕ ವೃದ್ದ ದಂಪತಿಯನ್ನು ಕೂಡಿ ಹಾಕಿ ಮಾಲೀಕನಿಂದ ದೌರ್ಜನ್ಯ: ಆರೋಪ

Date:

ತುಮಕೂರು ಜಿಲ್ಲೆಯಲ್ಲಿ ಕೃಷಿ ಕೂಲಿ‌ ಕಾರ್ಮಿಕ ವೃದ್ದ ದಂಪತಿಗೆ ತೋಟದಲ್ಲಿ‌ ಕೂಡಿ ಹಾಕಿ, ಮಾಲೀಕ ದೌರ್ಜನ್ಯ‌ ಎಸಗಿರುವ ಆರೋಪ ಕೇಳಿಬಂದಿದೆ.

ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಬೆಳಕಿಗೆ ಬಂದಿದ್ದು, ತಾಲೂಕಿನ ಬೆಲ್ಲದಮಡಗು ಗ್ರಾಮದಲ್ಲಿರುವ ತೋಟದ ಮಾಲೀಕ ಲಕ್ಷ್ಮೀನಾರಾಯಣ ಎಂಬಾತ ದೌರ್ಜನ್ಯ ಎಸಗಿರುವುದಾಗಿ ಕೃಷಿ ಕೂಲಿ‌ ಕಾರ್ಮಿಕ ವೃದ್ದ ದಂಪತಿ ಆರೋಪಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಸಂತ್ರಸ್ತ ದಂಪತಿಗಳಾದ ಹನುಮಂತರಾಯಪ್ಪ, ರಾಮಕ್ಕ ಎಂಬುವವರು, ಮಾಲೀಕ ಲಕ್ಷ್ಮೀನಾರಾಯಣ ದೌರ್ಜನ್ಯ ಎಸಗುತ್ತಿದ್ದು, ಕೆಲಸಕ್ಕೆಂದು ಕರೆತಂದು ತೋಟದಲ್ಲಿ ಕೂಡಿ ಹಾಕಿರುವುದಾಗಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಲಾ 14 ಸಾವಿರ ಸಂಬಳ, ವಸತಿ ನೀಡುವುದಾಗಿ ಒಂದು ವರ್ಷದಿಂದ ದುಡಿಸಿಕೊಳ್ಳಲಾಗುತ್ತಿದೆ. ಇದೀಗ ಇಬ್ಬರಿಗೂ ತಲಾ 7 ಸಾವಿರ ನೀಡುವುದಾಗಿ ಹೇಳಿ ಎರಡು ತಿಂಗಳಿಂದ ಸಂಬಳ ನೀಡಿಲ್ಲ. ಕೇಳಿದರೆ ಒಬ್ಬರಿಗಷ್ಟೇ ಕೊಡೋದು. ಇನ್ನೊಬ್ಬರಿಗೆ ಕೊಡಲ್ಲ ಎಂದು ಹೇಳುತ್ತಿದ್ದಾರೆ. ನಮಗೆ ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ. ಸರಿಯಾಗಿ ಕುಡಿಯಲು ನೀರು ಕೂಡ ನಮಗೆ ಸಿಗುತ್ತಿಲ್ಲ. ಬೇರೆ ಕಡೆಯಿಂದ ತಂದು ಕುಡಿಯುತ್ತಿದ್ದೇವೆ. ಸಂಬಳ ಕೇಳಿದರೆ ದೌರ್ಜನ್ಯ ಎಸಗುತ್ತಿದ್ದಾರೆ. ವಾಸವಿರುವ ಶೆಡ್‌ಗೂ ಬೀಗ ಹಾಕಿ ಹೋಗ್ತಾರೆ” ಎಂದು ಮಾಲೀಕನ ವಿರುದ್ಧ ಆರೋಪಿಸಿದ್ದಾರೆ.

ವೃದ್ದ ದಂಪತಿಯನ್ನು ಕೂಡಿ ಹಾಕಿ ದೌರ್ಜನ್ಯ ಎಸಗುತ್ತಿರುವ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿಯನ್ನು ಆಧರಿಸಿ ಡಾ. ಬಿ ಆರ್ ಅಂಬೇಡ್ಕರ್ ದಂಡು ತುಮಕೂರು ಜಿಲ್ಲಾಧ್ಯಕ್ಷ ಎನ್ ಕುಮಾರ್ ತೋಟಕ್ಕೆ ಬಂದಾಗ ತೋಟದ ಗೇಟಿಗೆ ಬೀಗ ಹಾಕಿರುವುದು ಕಂಡು ಬಂತು. ಕುಮಾರ್ ಅವರಲ್ಲಿ ದಂಪತಿ ತಮ್ಮ ನೋವನ್ನು ವೃದ್ಧ ದಂಪತಿ ತೋಡಿಕೊಂಡಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅಂಬೇಡ್ಕರ್ ದಂಡು ತುಮಕೂರು ಜಿಲ್ಲಾಧ್ಯಕ್ಷ ಎನ್ ಕುಮಾರ್, ವೃದ್ದ ದಂಪತಿಯನ್ನ ತೋಟದಲ್ಲಿ‌ ಕೂಡಿ ಹಾಕಿ ದೌರ್ಜನ್ಯ ಎಸಗುತ್ತಿದ್ದಾರೆ. ತೋಟದಿಂದ ಹೊರಗೆ ಹೋಗಲು ಬಿಡದೇ ಗೇಟ್ ಗೆ ಬೀಗ ಹಾಕಿದ್ದಾರೆ. ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಬಂದಿದ್ದೇವೆ. ಸದ್ಯ ದಂಪತಿಗೆ ಹೊಟೇಲ್‌ನಿಂದ ಊಟ ಪಾರ್ಸೆಲ್ ತಂದು ನೀಡಿದ್ದೇವೆ. ಈ ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ತೋಟದ ಮಾಲೀಕರನ್ನು ಕರೆಸಿ, ಈ ವೃದ್ಧ ದಂಪತಿಗೆ ನ್ಯಾಯ ಕೊಡಿಸಬೇಕು. ವೃದ್ದ ದಂಪತಿಗಳ ರಕ್ಷಣೆ ಮಾಡಿ, ಮಾಲೀಕನ ವಿರುದ್ದ ಕ್ರಮ ಕೈಗೊಳ್ಳಬೇಕು ಎಂಬುದು ನಮ್ಮ ಒತ್ತಾಯ” ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...