ತುಮಕೂರು | ಹೇಮಾವತಿ ನಾಲೆಗೆ ನೀರು : ಕೃಷಿ ಚಟುವಟಿಕೆಗಳಿಗೆ ಬಳಸದಿರಲು ಜಿಲ್ಲಾಧಿಕಾರಿ ಸೂಚನೆ

Date:

ಹೇಮಾವತಿ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಲಹಾ ಸಮಿತಿ ಸಭೆಯ ನಿರ್ಣಯದಂತೆ ಜನ-ಜಾನುವಾರುಗಳ ಕುಡಿಯುವ ನೀರಿನ ಬೇಡಿಕೆಗನುಗುಣವಾಗಿ ಹೇಮಾವತಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಕೆರೆ-ಕಟ್ಟೆಗಳಿಗೆ ನಿಗಧಿತ ಪ್ರಮಾಣದಲ್ಲಿ ನಿಯಮಿತವಾಗಿ ಜಲಾಶಯದಿಂದ ನಾಲೆಗಳ ಮೂಲಕ ನೀರನ್ನು ಹರಿಸಲಾಗುತ್ತಿದೆ. ಕುಡಿಯುವ ನೀರಿಗಾಗಿ ಮೀಸಲಿಟ್ಟಿರುವ ಪ್ರಮಾಣದಷ್ಟು ನೀರನ್ನು ಮಾತ್ರ ನಾಲೆ ಮೂಲಕ ಹರಿಸಲಾಗುತ್ತಿದ್ದು, ನಾಲೆಯ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಯಾವುದೇ ಕೃಷಿ ಚಟುವಟಿಕೆಗಳಿಗೆ ಹೇಮಾವತಿ ನೀರನ್ನು ಬಳಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದ್ದಾರೆ. 

 ಜಲಾಶಯದಿಂದ ನೀರನ್ನು ಹರಿಸುವ ಅವಧಿಯು ತಾತ್ಕಾಲಿಕವಾಗಿದ್ದು, ಹೇಮಾವತಿ ಜಲಾನಯನ ಹಾಗೂ ಯೋಜನಾ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶದಲ್ಲಿ ಪೂರ್ವ ಮುಂಗಾರು ಮಳೆಯ ಸ್ಥಿತಿ-ಗತಿಗಳನ್ನು ಅವಲೋಕಿಸಿ ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಕಾಲುವೆಗಳ ಮೂಲಕ ಕೆರೆ-ಕಟ್ಟೆಗಳಿಗೆ ನೀರು ಹರಿಸಲು ಅಗತ್ಯ ಕ್ರಮವಹಿಸಲಾಗುವುದು. 

ಯೋಜನಾ ವ್ಯಾಪ್ತಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ನೀರು ಪೋಲಾಗದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಹೇಮಾವತಿ ನಾಲಾ ಯೋಜನಾ ವ್ಯಾಪ್ತಿಯಲ್ಲಿರುವ ಸಾರ್ವಜನಿಕರು ಹಾಗೂ ರೈತರಿಗೆ ನೀರಿನ ಬಳಕೆ ಬಗ್ಗೆ ತಿಳುವಳಿಕೆ ನೀಡಬೇಕು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪಾಯಕಾರಿಯಾಗಿ ಹರಿಯುವ ನಾಲೆ/ಹಳ್ಳ/ಕೆರೆ ದಡದಲ್ಲಿ ಹಾಗೂ ಹರಿಯುವ ನೀರಿನಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ-ಕರುಗಳನ್ನು ತೊಳೆಯುವುದು, ಫೋಟೋ ಸೆಲ್ಫಿಗಳನ್ನು ತೆಗೆಯುವುದು, ನಾಲಾ ವ್ಯಾಪ್ತಿಯ ಸೇತುವೆಗಳ ಮೇಲೆ ಸಂಚರಿಸುವುದು ಸೇರಿದಂತೆ ಇನ್ನಿತರೆ ಚಟುವಟಿಕೆಗಳು ನಡೆಯದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  

ಪೋಷಕರು ತಮ್ಮ ಮಕ್ಕಳನ್ನು ಹರಿಯುವ ನಾಲಾ ನೀರು ಮತ್ತು ಕೆರೆ-ಕಟ್ಟೆಗಳಲ್ಲಿ ಈಜಲು ಬಿಡದಂತೆ ಜಾಗೃತಿವಹಿಸಬೇಕು. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ನಾಲಾ ಯೋಜನಾ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರು ಹಾಗೂ ಅಚ್ಚುಕಟ್ಟುದಾರರು ಸುಗಮ ನೀರು ನಿರ್ವಹಣೆ ನಡೆಸುವ ನಿಟ್ಟಿನಲ್ಲಿ ನಿಯೋಜಿತ ಇಲಾಖಾಧಿಕಾರಿಗಳೊಂದಿಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ. 

ನೀರಿನ ದುರ್ಬಳಕೆ ಕಂಡು ಬಂದಲ್ಲಿ ದೂ.ವಾ.ಸಂ. 0816-2213400/ 155304/ ಮೊ.ಸಂ.7304975519ನ್ನು ಸಂಪರ್ಕಿಸುವ ಮೂಲಕ ಜಿಲ್ಲಾಡಳಿತದ ಗಮನಕ್ಕೆ ತರಬೇಕೆಂದು ಅವರು ಮನವಿ ಮಾಡಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...