ತುಮಕೂರು | ಗೃಹ ಸಚಿವರಿಂದ ಮತ್ಸ್ಯಾಲಯ ಲೋಕಾರ್ಪಣೆ

Date:

 ತುಮಕೂರು  ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದ ಬಳಿ ನವೀಕರಣಗೊಂಡ ಜಿಲ್ಲಾ ಮತ್ಸ್ಯಾಲಯವನ್ನು ಸೋಮವಾರ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಲೋಕಾರ್ಪಣೆ ಮಾಡಿದರು.

   ಮತ್ಸ್ಯಾಲಯವನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಾರ್ವಜನಿಕರು ಹಾಗೂ ವಿಶೇಷವಾಗಿ ಮಕ್ಕಳಿಗೆ ಅಲಂಕಾರಿಕ ಮೀನು ಸೇರಿದಂತೆ ಜಲಚರ ಪ್ರಪಂಚದ ಪರಿಚಯ ನೀಡಲು ಮತ್ಸ್ಯಾಲಯವನ್ನು ನಿರ್ಮಿಸಲಾಗಿದೆ. ವಿವಿಧ ಬಗೆಯ ಮೀನುಗಳನ್ನು ನೇರವಾಗಿ ನೋಡುವ ಅವಕಾಶ ಇರುವುದರಿಂದ ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಮನರಂಜನೆ ದೊರೆಯಲಿದೆ. ಅಲ್ಲದೆ ಜಲಚರಗಳ ಆಹಾರ ಸರಪಳಿಯ ಮಹತ್ವದ ಬಗ್ಗೆ ಅರಿವು ಮೂಡಲಿದೆ. ಈ ಮತ್ಸಾö್ಯಲಯವನ್ನು ನಿರ್ಮಿಸಿರುವುದರಿಂದ ನೈಸರ್ಗಿಕ ಸ್ಥಳೀಯವಾಗಿ ಲಭ್ಯವಿರುವ ಹಾಗೂ ಅಳಿವಿನ ಹಂಚಿನಲ್ಲಿರುವ ಮೀನಿನ ಸಂತತಿಯನ್ನು ಸಂರಕ್ಷಿಸಬಹುದಾಗಿದೆ ಎಂದು ತಿಳಿಸಿದರು.

ಮತ್ಸ್ಯಾಲಯವನ್ನು ವೀಕ್ಷಿಸಲು ಸಾರ್ವಜನಿಕರಿಗೆ ಪ್ರವೇಶ ಶುಲ್ಕ ಕೇವಲ 10 ರೂ.ಗಳನ್ನು ನಿಗಧಿಪಡಿಸಲಾಗುವುದು. ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಈ ಮತ್ಸ್ಯಾಲಯದ ಪ್ರವೇಶ ಸಂಪೂರ್ಣ ಉಚಿತವಾಗಿರುತ್ತದೆ. ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ ನವೀಕೃತಗೊಂಡ ಮತ್ಸ್ಯಾಲಯದಲ್ಲಿ 36 ಅಕ್ವೇರಿಯಂಗಳಲ್ಲಿ ವಿವಿಧ ಬಗೆಯ ಸುಮಾರು 70ಕ್ಕೂ ಹೆಚ್ಚಿನ ಪ್ರಬೇಧದ ಅಲಂಕಾರಿಕ ಮೀನುಗಳನ್ನು ವೀಕ್ಷಿಸಲು ಅವಕಾಶವಿದೆ. ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ಈ ಮತ್ಸ್ಯಾಲಯ ನವೀಕರಣವನ್ನು ಕೈಗೊಳ್ಳಲಾಗಿದೆ. ಮಕ್ಕಳಿಗಾಗಿ ಮುಂದಿನ ದಿನಗಳಲ್ಲಿ 12ಲಕ್ಷ ರೂ. ವೆಚ್ಚದಲ್ಲಿ ಕನಿಷ್ಠ 40 ಆಸನ ಸಾಮರ್ಥ್ಯದ ಆ್ಯಂಪಿ ಥಿಯೇಟರ್ ನಿರ್ಮಿಸಲಾಗುವುದು ಎಂದು ತಿಳಿಸಿದರು. 

ಇದೇ ಸಂದರ್ಭದಲ್ಲಿ ಇಲಾಖೆಯು ಹೊರತಂದಿರುವ 2024-25ನೇ ಸಾಲಿನ ಇಲಾಖಾ ಕಾರ್ಯಕ್ರಮಗಳ ಅನುಷ್ಠಾನ ಕುರಿತ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಲಾಯಿತು. 

ನಗರ ಶಾಸಕ ಜಿ.ಬಿ. ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ನಂಜುಂಡಪ್ಪ ಎಂ.ಹೆಚ್., ಸಹಾಯಕ ನಿರ್ದೇಶಕ ಮೋಹನ್ ಕುಮಾರ್ ಕೆ.ಸಿ., ವಿವಿಧ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...