ತುಮಕೂರು | ಕಾಲಮಿತಿಯಲ್ಲಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲು ಗೃಹ ಸಚಿವರ ಸೂಚನೆ

Date:

     ತುಮಕೂರು ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗಳನ್ನು ಬರುವ ಡಿಸೆಂಬರ್ ಒಳಗೆ ಪೂರ್ಣಗೊಳಿಸಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಸೂಚಿಸಿದರು. 

ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ದ್ವಿತೀಯ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆಗೆ ಕಳೆದ ಆಯವ್ಯಯದಲ್ಲಿ ರಸ್ತೆ ಕಾಮಗಾರಿಗಳಿಗಾಗಿ ಸುಮಾರು 630 ಕೋಟಿ ರೂ. ಮಂಜೂರು ಮಾಡಲಾಗಿದ್ದರೂ ಈವರೆಗೆ ಒಂದೂ ಕಾಮಗಾರಿಗಳನ್ನು ಆರಂಭಿಸದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಡಿಸೆಂಬರ್ ಒಳಗೆ ಟೆಂಡರ್ ಕರೆದು ಗುದ್ದಲಿ ಪೂಜೆ ಮಾಡಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. 

ಪಂಚಾಯತ್ ರಾಜ್ ಮತ್ತು ಲೋಕೋಪಯೋಗಿ ಇಲಾಖೆಗಳ ವ್ಯಾಪ್ತಿಯಲ್ಲಿನ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗಳು ಆಮೇಗತಿಯಲ್ಲಿ ಸಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಗತಿಯಲ್ಲಿರುವ ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಕಾಮಗಾರಿಯ ಪ್ರಗತಿ ಆಧಾರದ ಮೇಲೆ ಅನುದಾನ ಬಿಡುಗಡೆ ಮಾಡಲಾಗುವುದು. ಈ ಹಿಂದೆ ಇನ್ನೂ ಪೂರ್ಣವಾಗದೆ ಉಳಿದಿರುವ ಕಾಮಗಾರಿಗಳನ್ನು ಜನರ ಸಹಕಾರದೊಂದಿಗೆ ಶೀಘ್ರವಾಗಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು.

ಕಾಮಗಾರಿಗಳ ಗುಣಮಟ್ಟವನ್ನು ಕಾಪಾಡುವುದು ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ. ಈ ಹಿಂದೆ ಕೈಗೊಂಡ ಕಾಮಗಾರಿಗಳಿಗೆ ಅನುದಾನ ಮಂಜೂರಾಗುವುದು ಬಾಕಿ ಇದ್ದಲ್ಲಿ ಲೋಕೋಪಯೋಗಿ ಇಲಾಖೆಯ ಎರಡೂ ವಿಭಾಗದ ಅಧಿಕಾರಿಗಳು ವಿವರವಾದ ಪಟ್ಟಿ ಮಾಡಿ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ತ್ವರಿತವಾಗಿ ಸಲ್ಲಿಸುವಂತೆ ಸಚಿವರು ನಿರ್ದೇಶನ ನೀಡಿದರು.

ಸಭೆಯಲ್ಲಿ ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರಾದ ಬಿ. ಸುರೇಶಗೌಡ, ಜಿ.ಬಿ. ಜ್ಯೋತಿಗಣೇಶ್, ಸಿ.ಬಿ. ಸುರೇಶಬಾಬು, ಎಂ.ಟಿ. ಕೃಷ್ಣಪ್ಪ, ಎಚ್.ವಿ. ವೆಂಕಟೇಶ್, ಕೆ. ಷಡಕ್ಷರಿ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ. ಗೌಡ ಹಾಗೂ ಡಿ.ಟಿ. ಶ್ರೀನಿವಾಸ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ಕೆ.ವಿ., ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...