ತುಮಕೂರು | ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ : ಸಚಿವ ಪರಮೇಶ್ವರ

Date:

ತುಮಕೂರು  ನಗರದಲ್ಲಿ ಬಾಬು ಜಗಜೀವನ್ ರಾಮ್ ರವರ ಪ್ರತಿಮೆ ಪ್ರತಿಷ್ಠಾಪನೆಗಾಗಿ ಅಗತ್ಯವಿರುವ ಪ್ರತಿಮೆಯನ್ನು ನಾನೇ ಕೊಡುಗೆಯಾಗಿ ನೀಡುತ್ತೇನೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ನ್ಯಾಯಿಕ ಸಭಾಂಗಣದಲ್ಲಿ ಭಾನುವಾರ ನಡೆದ ಹಸಿರುಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ 39ನೇ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಪುಷ್ಪನಮನದ ಮೂಲಕ ಗೌರವ ಸಮರ್ಪಣೆ ಸಲ್ಲಿಸಿ ಮಾತನಾಡಿದ ಅವರು, ಸ್ವಾತಂತ್ರ‍್ಯ ಹೋರಾಟದಲ್ಲಿ ಉಳ್ಳವರು ಮುಂಚೂಣಿಯಲ್ಲಿ ಇರಲಿಲ್ಲ. ಶೋಷಿತ ಸಮುದಾಯದ ಜನರು ಹೆಚ್ಚಾಗಿ ಮುಂಚೂಣಿಯಲ್ಲಿದ್ದರು, ಬಾಬು ಜಗಜೀವನ್ ರಾಮ್ ಅವರು ನಾಯಕತ್ವ ವಹಿಸಿದ್ದರು. ಸ್ವಾತಂತ್ರ‍್ಯ ನೀಡುವುದಾದರೆ ಜನರ ಆಶೋತ್ತರಗಳನ್ನು ಈಡೇರಿಸಬೇಕು ಎಂದು ಬಾಬು ಜಗಜೀವನ್ ರಾಮ್ ಅವರು ಧೈರ್ಯವಾಗಿ ಹೇಳಿದ್ದನ್ನು ನಾವೆಲ್ಲ ಸ್ಮರಿಸಬೇಕು ಎಂದರು.

ದೇಶದ ಮಹಾನ್ ನಾಯಕರ ಹುಟ್ಟುಹಬ್ಬ, ಪುಣ್ಯಸ್ಮರಣೆಯ ಆಚರಣೆಗಳು, ಅವರ ಆದರ್ಶಗಳನ್ನು ಸ್ಮರಿಸಿಕೊಳ್ಳಲು ಉಪಯೋಗವಾಗುತ್ತವೆ. ಅವರ ಜೀವನ ಚರಿತ್ರೆಯನ್ನು ನಾವು ಸ್ಮರಿಸಿದರೆ ಮುಂದಿನ ಪೀಳಿಗೆಗೂ ಗೊತ್ತಾಗುತ್ತದೆ. ನಾವೆಲ್ಲ ಹೋರಾಟದ ದಾರಿಯಲ್ಲಿ ಹೋಗುತ್ತಿದ್ದೇವೆ. ಇದಕ್ಕೆ ಬಾಬು ಜಗಜೀವನ್ ರಾಮ್ ಅವರ ಸ್ಮರಣೆ ನಮಗೆ ದಾರಿದೀಪವಾಗಬೇಕು ಎಂದು ಹೇಳಿದರು. ನಗರದಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಯನ್ನು ಸ್ಥಾಪಿಸಲು, ಪ್ರತಿಮೆಯನ್ನು ನಾನೇ ಕೊಡುಗೆಯಾಗಿ ನೀಡುತ್ತೇನೆ. ಸಮುದಾಯ ಭವನ ಮತ್ತು ಪ್ರತಿಮೆಯನ್ನು ಸ್ಥಾಪಿಸುವ ಕೆಲಸವನ್ನು ಬಹಳ ವೇಗವಾಗಿ ಮಾಡಬೇಕಿದೆ. ಐದು ಎಕರೆ ಜಾಗವನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಬೇಕು, ಒಂದೊತ್ತಿನ ಊಟ ಕಡಿಮೆಯಾದರು ಪರವಾಗಿಲ್ಲ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ, ಇದರಿಂದ ಮುಂದಿನ ಪೀಳಿಗೆಯ ಜೀವನ ಬದಲಾಗುತ್ತದೆ. ಸ್ಪರ್ಧಾತ್ಮಕ ಜಗತ್ತಿಗೆ ನಮ್ಮ ಮಕ್ಕಳನ್ನು ತಯಾರು ಮಾಡಬೇಕು ಎಂದು ಹೇಳಿದರು. ದೇಶದಲ್ಲಿರುವ ಜಾತಿ ಸಂಘಗಳು ಹೊರ ದೇಶಗಳಲ್ಲಿ ಹುಟ್ಟಿಕೊಂಡಿವೆ. ಅಲ್ಲಿಯೂ ಜಾತಿ ಸಮ್ಮೇಳನ ನಡೆಯುತ್ತಿವೆ ಎಂದು ಬೇಸರಿಸಿದರು. ಒಳ ಮೀಸಲಾತಿ ಹೋರಾಟ ಹಲವು ವರ್ಷಗಳಿಂದ ನಡೆಯುತ್ತಿದೆ, ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಹಿಂದಿನ ಸರ್ಕಾರ ಯಾವ ರೀತಿ ದಾರಿ ತಪ್ಪಿಸಿದರು ಎಂಬುದು ನಮಗೆ ಗೊತ್ತಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಒಳಮೀಸಲಾತಿ ಜಾರಿ ಮಾಡಿಯೇ ತೀರುತ್ತೇವೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ 2.50 ಲಕ್ಷ ಹುದ್ದೆಗಳು ನೇಮಕವಾಗಬೇಕಿದೆ, ಪೊಲೀಸ್ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳು ಖಾಲಿ ಇವೆ, ಕಾರಾಗೃಹದಲ್ಲಿ ಶೇ. 38ರಷ್ಟು ಹುದ್ದೆಗಳು ಖಾಲಿ ಇವೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆಯಲ್ಲಿ ನೇಮಕಾತಿ ನಡೆಯಬೇಕಿದೆ, ಒಳ ಮೀಸಲಾತಿ ತೀರ್ಮಾನ ಆಗುವವರೆಗು ನೇಮಕಾತಿ ಹಾಗೂ ಮುಂಬಡ್ತಿ ನೀಡುವುದಿಲ್ಲ ಎಂಬ ಕಠಿಣ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು.ಜಿ, ಅಪರ ಜಿಲ್ಲಾಧಿಕಾರಿ ಡಾ.ಎನ್ ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ನಹೀದಾ ಜಮ್ ಜಮ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಹಾಗೂ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...