ತುಮಕೂರು | ಒಳಮೀಸಲಾತಿ ಜಾರಿ ಮಾಡದಿದ್ದರೆ ಸರ್ಕಾರ ಇಳುಸ್ತೀವಿ : ಮಾದಿಗ ಸಂಘಟನೆಗಳ ಒಕ್ಕೂಟ ಎಚ್ಚರಿಕೆ

Date:

ಸರ್ವೋಚ್ಛ ನ್ಯಾಯಾಲಯದ ಪೀಠದ ತೀರ್ಪಿನಂತೆ ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಜಾರಿ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ವಿವಿಧ ಮಾದಿಗ ಸಂಘಟನೆಗಳ ಮುಖಂಡರು ತುಮಕೂರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಈ ತಿಂಗಳ 18ರಂದು ನಡೆಯುವ ಸಚಿ ಸಂಪುಟ ಸಭೆ ಅಧಿವೇಶನದಲ್ಲಿ ಒಳಮೀಸಲಾತಿ ವರ್ಗೀಕರಣ ಜಾರಿ ಸಂಬಂಧ ತೀರ್ಮಾನ ಮಾಡಬೇಕು, ತಪ್ಪಿದಲ್ಲಿ ರಾಜ್ಯಾದ್ಯಂತ ಮುಖ್ಯಮಂತ್ರಿ, ಮಂತ್ರಿಗಳನ್ನು ಘೇರಾವ್ ಮಾಡಲಾಗುವುದು, ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸುರಿಯುವ ಮಳೆಯಲ್ಲೂ ಪ್ರತಿಭಟನಾಕಾರರು ಬಿಜಿಎಸ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಒಳ ಮೀಸಲಾತಿ ವರ್ಗೀಕರಣ ಜಾರಿಗೆ ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000548771 1

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ ಮಾತನಾಡಿ, ಕಳೆದ ಆಗಸ್ಟ್ 1ರಂದು ಸವೋಚ್ಛ ನ್ಯಾಯಾಲಯದ ಏಳು ಸದಸ್ಯರ ಪೂರ್ಣ ಪೀಠವು ಎಸ್.ಸಿ., ಎಸ್.ಟಿ. ಮೀಸಲಾತಿಯಲ್ಲಿ ಒಳಮೀಸಲಾತಿ ಉಪವರ್ಗೀಕರಿಸಲು ಆಯಾ ಸರ್ಕಾರಕ್ಕೆ ಸಂಪೂರ್ಣ ಅಧಿಕಾರವಿದೆ ಎಂದು ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಅವಕಾಶ ವಂಚಿತ ನಾಡಿನ ಮಾದಿಗ ಸಮುದಾಯ ಸ್ವಾಗತಿಸಿದೆ. ಆದರೆ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ತರಲು ಮೀನಾಮೇಷ ಎಣಿಸುತ್ತಿದೆ ಎಂದು ಟೀಕಿಸಿದರು.

1000548772

ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲು 6ನೇ ಗ್ಯಾರಂಟಿ ಘೋಷಿಸಿಕೊಂಡಂತೆ ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕಲಾಗಿದೆ. ಒಳಮೀಸಲಾತಿಯಲ್ಲಿ ವರ್ಗೀಕರಿಸಿ ಜಾರಿಗೊಳಿಸಬೇಕೆಂದು ಮೂರು ದಶಕಗಳಿಂದ ಹೋರಾಟಗಳು ನಡೆದಿವೆ. ಹಿಂದಿನ ಬಿಜೆಪಿ ಸರ್ಕಾರ ಎಸ್.ಸಿ.ಮೀಸಲಾತಿಯ ಎಲ್ಲಾ ಫಲಾನುಭವಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನಸಂಖ್ಯೆಗೆ ಅನುಗುಣವಾಗಿಯೇ ವೈಜ್ಞಾನಿಕವಾದ ಒಳಮೀಸಲಾತಿ ಸೂತ್ರವನ್ನು ರೂಪಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಇದನ್ನೇ ಮಾನದಂಡವಾಗಿಟ್ಟುಕೊಂಡು ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ವೈ.ಹೆಚ್.ಹುಚ್ಚಯ್ಯ ಒತ್ತಾಯಿಸಿದರು.

1000548766

ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಪಾವಗಡ ಶ್ರೀರಾಮ್ ಮಾತನಾಡಿ, ಬರುವ 18 ರಂದು ನಡೆಯುವ ವಿಧಾನ ಸಭಾ ಅಧಿವೇಶನದಲ್ಲಿ ಒಳಮೀಸಲಾತಿ ವರ್ಗೀಕರಣ ಜಾರಿಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ನಿರ್ಲಕ್ಷ್ಯ ಮಾಡಿದರೆ ಮಾದಿಗ ಸಮುದಾಯ ತೀವ್ರತರಹದ ಹೋರಾಟಕ್ಕಿಳಿಯುತ್ತದೆ. ಶಾಸಕರ ಮನೆ ಮುಂದೆ ಧರಣಿ ಮಾಡಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುತ್ತೇವೆ ಎಂದರು.ಒಳಮೀಸಲಾತಿಗಾಗಿ ನಾವು 30 ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದೇವೆ, ನಮ್ಮ ತಾಳ್ಮೆ ಮೀರಿದೆ. ಮುಂಬರುವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ನಿರ್ಧಾರ ಕೈಗೊಳ್ಳದಿದ್ದರೆ ಹೋರಾಟ ಉಗ್ರರೂಪ ತಾಳುತ್ತದೆ. ಮುಖ್ಯಮಂತ್ರಿ, ಮಂತ್ರಿಗಳನ್ನು ಘೇರಾವ್ ಮಾಡುತ್ತೇವೆ, ಕಪ್ಪು ಬಾವುಟ ಪ್ರದರ್ಶಿಸುತ್ತೇವೆ ಎಂದು ಹೇಳಿದರು.

1000548771

ಬಿಜೆಪಿ ಮುಖಂಡ, ನಿವೃತ್ತ ಐಎಎಸ್ ಅಧಿಕಾರಿ ಬಿ.ಹೆಚ್.ಅನಿಲ್‌ಕುಮಾರ್ ಮಾತನಾಡಿ, ದತ್ತಾಂಶ ಲಭ್ಯವಿಲ್ಲ ಎಂಬ ಸಬೂಬನ್ನು ಒಡ್ಡಿ ಒಳಮೀಸಲಾತಿ ವರ್ಗೀಕರಣವನ್ನು ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ. ಸರ್ಕಾರದ ಈ ಧೋರಣೆ ಸರಿಯಲ್ಲ. ಸರ್ಕಾರದ ಮುಂದಿರುವ ಅನೇಕ ವರದಿಗಳಲ್ಲಿ ಮಾದಿಗ ಸಮುದಾಯಕ್ಕೆ ಆಗಿರುವ ಅನ್ಯಾಯ ಹಾಗೂ ಸವಲತ್ತುಗಳಿಂದ ವಂಚಿತವಾಗಿರುವ ದತ್ತಾಂಶಗಳ ವಿವರಗಳು ಲಭ್ಯವಿರುತ್ತವೆ ಎಂದು ಹೇಳಿದರು.ಒಳಮೀಸಲಾತಿ ಜಾರಿಯಾಗುವ ತನಕ ಸರ್ಕಾರ ಬ್ಯಾಕ್‌ಲಾಗ್ ಹುದ್ದೆ ಸೇರಿದಂತೆ ಹೊಸದಾಗಿ ಯಾವುದೇ ಹುದ್ದೆಗಳ ನೇಮಕಾತಿಮಾಡಬಾರದು. ಒಳಮೀಸಲಾತಿ ಜಾರಿ ಮಾಡದಿದ್ದರೆ ಮುಂದೆ ಮಾದಿಗ ಸಮುದಾಯ ಸರ್ಕಾರವನ್ನು ಅಧಿಕಾರದಿಂದ ಕೆಳಗಿಸುವವರೆಗೂ ಉಗ್ರ ಹೋರಾಟ ಮಾಡುವುದಾಗಿ ಅನಿಲ್‌ಕುಮಾರ್ ಎಚ್ಚರಿಕೆ ನೀಡಿದರು.

1000548764

ಐಬಿಜೆಪಿ ಮುಖಂಡ ಡಾ.ಲಕ್ಷ್ಮೀಕಾಂತ್ ಮಾತನಾಡಿ, ಒಳಮೀಸಲಾತಿ ಜಾರಿ ಮಾಡಲು ಆಯಾ ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿ ಮಾಡದೆ ಸಮಿತಿ ಮಾಡುತ್ತೇವೆ, ಹೈಕಮಾಂಡ್ ಕೇಳಿ ತೀರ್ಮಾನ ಮಾಡುತ್ತೇವೆ ಎಂಬ ನೆಪ ಹೇಳುತ್ತಿದ್ದಾರೆ. ಜಾರಿ ಮಾಡದಂತೆ ತಡೆಯುವ ಹುನ್ನಾರ ಸರ್ಕಾರದಲ್ಲಿ ನಡೆಯುತ್ತಿದೆ ಎಂದು ಟೀಕಿಸಿದರು.ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುತ್ತೇವೆ, ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತೇವೆ ಎಂದು ಭಾಷಣ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ನಡೆದುಕೊಂಡು ಒಳಮೀಸಲಾತಿ ವರ್ಗೀಕರಣ ಜಾರಿ ಮಾಡಬೇಕು ಎಂದು ಡಾ.ಲಕ್ಷ್ಮೀಕಾಂತ್ ಆಗ್ರಹಿಸಿದರು.

1000547607

ಶಾಸಕ ಸುರೇಶ್‌ಗೌಡ ಮಾತನಾಡಿ ಮಾದಿದ ಸಮುದಾಯದ ಹೋರಾಟ, ಬೇಡಿಕೆ ನ್ಯಾಯಯುತವಾಗಿದೆ. ಇದೇ ಕಾರಣಕ್ಕೆ ಹಿಂದಿನ ಬಿಜೆಪಿ ಸರ್ಕಾರ ಒಳಮೀಸಲಾತಿ ಜಾರಿಗೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದರೂ ಜಾರಿ ಮಾಡುವಲ್ಲಿ ನಿರ್ಲಕ್ಷ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿದರು. ಈ ಬಗ್ಗೆ ತಾವು ವಿಧಾನ ಸಭೆ ಅಧಿವೇಶನದಲ್ಲಿ ಧ್ವನಿ ಮಾಡುವುದಾಗಿ ಹೇಳಿದರು.

ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಬಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಹೆಚ್.ಎ.ಆಂಜನಪ್ಪ, ಗುಬ್ಬಿಯ ಜೆಡಿಎಸ್ ಮುಖಂಡ ನಾಗರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಗನ್ನಾಥ್, ಮುಖಂಡರಾದ ಮಾರುತಿ ಗಂಗಹನುಮಯ್ಯ, ವೆಂಕಟೇಶ್, ಮರಿಚೆನ್ನಮ್ಮ, ನರಸೀಯಪ್ಪ, ಪಿ.ಎನ್.ರಾಮಯ್ಯ, ಹೊಸಕೋಟೆ ನಟರಾಜು, ಹನುಮಂತರಾಯಪ್ಪ ಸೇರಿದಂತೆ ವಿವಿಧ ಮಾದಿಗ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...