ತುಮಕೂರು | ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ : 90 ಕಿ.ಮೀ. ಮಾನವ ಸರಪಳಿ

Date:

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ 15ರಂದು ತುಮಕೂರು ಜಿಲ್ಲೆಯ ಶಿರಾ ತಾಲೂಕು ತಾವರೆಕೆರೆ ಗ್ರಾಮ ಪಂಚಾಯಿತಿ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕು ಹಿರೇಹಳ್ಳಿ ಗ್ರಾಮ ಪಂಚಾಯಿತಿ ನಂದಿಹಳ್ಳಿ ಗ್ರಾಮದವರೆಗೆ 90 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು

ತುಮಕೂರು ಜಿಲ್ಲಾ ಪಂಚಾಯತಿಯ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಬೇಕಾದರೆ ಪ್ರಜಾಪ್ರಭುತ್ವವಾದಿಗಳು ಈ ದಿನಾಚರಣೆಯಲ್ಲಿ ಪಾಲ್ಗೊಳ್ಳಬೇಕು. ಭಾರತ ದೇಶದಲ್ಲಿ ಪ್ರಜಾಪ್ರಭತ್ವವನ್ನು ಗಟ್ಟಿಗೊಳಿಸಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುವುದೆಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಮಾನವ ಸರಪಳಿಯನ್ನು ನಿರ್ಮಿಸಲಾಗುತ್ತಿದ್ದು, ಮಾನವ ಸರಪಳಿಯಲ್ಲಿ ಜಿಲ್ಲೆಯ ಜನತೆ, ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘ-ಸಂಸ್ಥೆಗಳು, ಕಲಾವಿದರು, ಕ್ರೀಡಾಪಟುಗಳು, ಮಹಿಳಾ ಸಂಘಟನೆಗಳು, ರೈತ ಬಾಂಧವರು, ಸಾಹಿತಿಗಳು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಎಲ್ಲಾ ಇಲಾಖೆಗಳ ಸಹಭಾಗಿತ್ವದಲ್ಲಿ ಸೆಪ್ಟೆಂಬರ್ 15ರಂದು ಸಂವಿಧಾನ ಪೀಠಿಕೆ ಬೋಧನೆ, 90 ಕಿ.ಮೀ ಮಾನವ ಸರಪಳಿಯನ್ನು ನಿರ್ಮಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿದ್ದ ವಿವಿಧ ಸಂಘಟನೆಗಳ ಮುಖಂಡರು ಪ್ರಜಾಪ್ರಭುತ್ವ ಕಾರ್ಯಕ್ರಮವನ್ನು ದಲಿತ ಮುಖಂಡರಿಗಷ್ಟೇ ಸೀಮಿತಗೊಳಿಸದೆ ಎಲ್ಲ ಇಲಾಖೆ, ಸಂಘ-ಸಂಸ್ಥೆಗಳನ್ನು ತೊಡಗಿಸಿಕೊಳ್ಳಬೇಕು. ಮಾಹಿತಿ ತಂತ್ರಜ್ಞಾನ, ವೈದ್ಯಕೀಯ ಕಾಲೇಜು, ಇಂಜನಿಯರಿಂಗ್ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಿಂದ ದೂರ ಉಳಿಯುತ್ತಿದ್ದು, ಅವರನ್ನು ಸಕ್ರಿಯವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ, ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...