ತುಮಕೂರು | ಅಪಪ್ರಚಾರ ಮಾಡಲು ಕ್ಷುಲ್ಲಕ ಕಾರಣ ಹುಡುಕುವುದು ತರವಲ್ಲ: ಮುದ್ದಹನುಮೇಗೌಡ

Date:

ಕಳೆದ ಐದು ವರ್ಷಗಳಿಂದ ನನ್ನ ಹೆಸರು ಹೇಳದ ಕೆಲವರು ಲೋಕಸಭಾ ಚುನಾವಣೆಗೆ ಬಂದ ತಕ್ಷಣ ಮಾಜಿ ಪ್ರಧಾನಿ ದೇವೇಗೌಡರ ಸೋಲಿಗೆ ನಾನು ಕಾರಣ ಎಂದು ಕ್ಷುಲ್ಲಕ ಅಪಪ್ರಚಾರ ಮಾಡುತ್ತಿದ್ದಾರೆ. ನೇರ ಚುನಾವಣೆ ಎದುರಿಸಲಾಗದೆ ಈ ಮಟ್ಟದ ಕೀಳು ಪ್ರಚಾರ ಅವರಿಗೆ ತರವಲ್ಲ ಎಂದು ತುಮಕೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ತಿಳಿಸಿದರು.

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಹೊರ ವಲಯದ ಬಾಲಾಜಿ ಕನ್ವೆಕ್ಷನ್ ಹಾಲ್‌ನಲ್ಲಿ ಕಾಂಗ್ರೆಸ್ ಮುಖಂಡ ಬಾಲಾಜಿ ಕುಮಾರ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ತೊರೆದವರನ್ನು ಕಾಂಗ್ರೆಸ್‌ಗೆ ಬರ ಮಾಡಿಕೊಂಡು ಅವರು ಮಾತನಾಡಿದರು.

ಎಲ್ಲಿಯಾದರೂ ದೇವೇಗೌಡರ ಬಗ್ಗೆ ಮಾತನಾಡಿರುವ ವಿಡಿಯೋ ಅಥವಾ ಪತ್ರಿಕೆ ಹೇಳಿಕೆ ಇದ್ದರೆ ತೋರಿಸಲಿ, ನಾನು ಮಾಜಿ ಪ್ರಧಾನಿಗಳನ್ನು ಗೆಲ್ಲಿಸುವುದು ನಮ್ಮ ಕರ್ತವ್ಯ ಎಂದು ನಾನೇ ಖುದ್ದು ಪ್ರಚಾರ ಮಾಡಿದವನು ಎಂದು ತಮ್ಮ ವಿರೋಧಿಗಳಿಗೆ ಟಾಂಗ್ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಂಟು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ಸ್ಪಂದನೆ ಸಿಕ್ಕಿದೆ.  ಈ ಹಿಂದೆ ಐದು ವರ್ಷ ಸಂಸದನಾಗಿ ನನ್ನ ಸ್ಥಾನಕ್ಕೆ ಗೌರವ ತಂದಿದ್ದೇನೆ. ಜನರ ಕಷ್ಟಗಳನ್ನು ಆಲಿಸಿದ್ದೇನೆ. ಸಂಸತ್‌ನಲ್ಲಿ ರೈತ ಪರ ಚರ್ಚೆ ಮಾಡಿ ಪ್ರಶ್ನೆ ಕೇಳಿದ್ದೇನೆ. ಎಂದಿಗೂ ಸಂಸದ ಸ್ಥಾನಕ್ಕೆ ಚ್ಯುತಿ ಬಾರದಂತೆ ನಡೆದುಕೊಂಡಿದ್ದೇನೆ, ಎಂದ ಅವರು ಈಗ ಅನ್ಯ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಬಂದ ಮುಖಂಡರು ಕಾರ್ಯಕರ್ತರು ಉಳಿದ ಇಪ್ಪತ್ತು ದಿನ ಶ್ರಮ ಪಟ್ಟು ಕಾಂಗ್ರೆಸ್ ಗೆಲುವಿಗೆ ಕಾರಣರಾಗಿ ಎಂದು ಕರೆ ನೀಡಿದರು.

ಶಾಸಕ ಎಸ್.ಆರ್. ಶ್ರೀನಿವಾಸ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಫಲ ಪಡೆದ ಶ್ರೀಸಾಮಾನ್ಯ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ನೀಡುತ್ತಾರೆ. ಕಾಂಗ್ರೆಸ್ ಸೇರಿದ ಎಲ್ಲಾ ಕಾರ್ಯಕರ್ತರು ಮುದ್ದಹನುಮೇಗೌಡರ ಮೇಲಿನ ಅಭಿಮಾನ ಹೊಂದಿದವರು. ಈ ನಿಟ್ಟಿನಲ್ಲಿ ಅವರ ಗೆಲುವಿಗೆ ಕೊಂಡೊಯ್ಯುವ ಜವಾಬ್ದಾರಿ ಹೆಚ್ಚಿದೆ. ಬರೀ ಸುಳ್ಳು ಹೇಳುವ ಬಿಜೆಪಿ ಪಕ್ಷದ ಮುಖವಾಡ ಬಯಲು ಮಾಡಿ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಲೀಡ್ ತರುವ ಕೆಲಸ ಚುರುಕಾಗಿ ನಡೆಸಬೇಕು ಎಂದು ಕರೆ ನೀಡಿದರು.

ಐದು ವರ್ಷ ಈ ಬಿಜೆಪಿ ಸಂಸದರು ಎಂದೂ ತುಟಿ ಬಿಚ್ಚಿಲ್ಲ. ಜನಪರ ಕೆಲಸ ಮಾಡಿಲ್ಲ. ಆದರೆ, ಮುದ್ದಹನುಮೇಗೌಡ ಕೆಲಸ ಈಗಾಗಲೇ ಜನರ ಮನ ಗೆದ್ದಿದೆ.  ರಾಜ್ಯದಲ್ಲಿ ಕಾಂಗ್ರೆಸ್ ಅತ್ಯಧಿಕ ಸ್ಥಾನ ಗಳಿಸಬೇಕಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಗೌರವ ಉಳಿಸಲು ಅವರ ಶ್ರಮಕ್ಕೆ ಫಲ ನೀಡಲು ಎಲ್ಲಾ ಕಾರ್ಯಕರ್ತರು ಅಣ್ಣತಮ್ಮರಂತೆ ಕೆಲಸ ಮಾಡಬೇಕು ಎಂದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ತೊರೆದ ಎಸ್.ಎಲ್.ನರಸಿಂಹಯ್ಯ, ಸಲೀಂಪಾಷ ಹಾಗೂ ಬಿಜೆಪಿ ತೊರೆದ ಮುಖಂಡ ಜಿ.ಸಿ.ಶಿವಕುಮಾರ್ ಮತ್ತು ನೂರಾರು ಗ್ರಾಪಂ ಸದಸ್ಯರು, ಮಾಜಿ ಸದಸ್ಯರು ಕಾಂಗ್ರೆಸ್ ಮುಖಂಡ ಬಾಲಾಜಿ ಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.

ವೇದಿಕೆಯಲ್ಲಿ ಕಾಂಗ್ರೆಸ್ ಮುಖಂಡ ಬಾಲಾಜಿ ಕುಮಾರ್, ಜಿಪಂ ಮಾಜಿ ಸದಸ್ಯ ಜಿ.ಎಚ್. ಜಗನ್ನಾಥ್, ಕೆ.ಆರ್.ಅಶೋಕ್ ಕುಮಾರ್, ನರಸಿಂಹಯ್ಯ, ವೆಂಕಟೇಶ್, ಎಸ್.ಎಲ್. ನರಸಿಂಹಯ್ಯ, ಜಿ.ಸಿ. ಶಿವಕುಮಾರ್ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...